MK Stalin Birthday: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ, ಸ್ವಾಗತಕ್ಕೆ ಅದ್ಧೂರಿ ಸಿದ್ದತೆ

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ 70ನೇ ಜನ್ಮದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

MK Stalin Birthday: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ, ಸ್ವಾಗತಕ್ಕೆ ಅದ್ಧೂರಿ ಸಿದ್ದತೆ
ಮಲ್ಲಿಕಾರ್ಜುನ ಖರ್ಗೆ
Follow us
ಆಯೇಷಾ ಬಾನು
|

Updated on:Mar 01, 2023 | 7:17 AM

ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡಿದ ಸಿಎಂ ಆಗಿರುವ ಎಂಕೆ ಸ್ಟಾಲಿನ್​(MK Stalin Birthday) ಅವರು ಮಾರ್ಚ್​ 1ರಂದು ತಮ್ಮ 70ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಭರ್ಜರಿ ತಯಾರಿ ನಡೆದಿದ್ದು ಗಣ್ಯಾತಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕೂಡ ಸಿಎಂ ಸ್ಟಾಲಿನ್ ಹುಟ್ಟುಹಬ್ಬದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಮಾತನಾಡಿದ ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಎಸ್. ಅಳಗಿರಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ 70ನೇ ಜನ್ಮದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಕಾರ್ಯಕರ್ತರು ನಂದನಂನ ವೈಎಂಸಿಎ ಮೈದಾನದಲ್ಲಿ ಸ್ಟಾಲಿನ್ ಹುಟ್ಟುಹಬ್ಬಕ್ಕಾಗಿ ಅದ್ದೂರಿ ತಯಾರಿ ನಡೆಸಿದ್ದಾರೆ.

ಚೆನ್ನೈ, ಚೆಂಗಲ್‌ಪಟ್ಟು, ಕಾಂಚೀಪುರಂ ಮತ್ತು ತಿರುವಳ್ಳೂರ್‌ನಲ್ಲಿರುವ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅದ್ದೂರಿ ಸ್ವಾಗತ ನೀಡುವಂತೆ ಒತ್ತಾಯಿಸಲಾಗಿದೆ. “ಈ ಸನ್ನಿವೇಶವು ತಮಿಳುನಾಡಿನ ಜಾತ್ಯತೀತ ಪ್ರಗತಿಪರ ಶಕ್ತಿಗಳಿಗೆ ದೊಡ್ಡ ಹುರುಪು ನೀಡಲಿದೆ ಎಂದು ನನಗೆ ಅಪಾರ ನಂಬಿಕೆ ಇದೆ” ಎಂದು ಅಳಗಿರಿ ಹೇಳಿದರು.

ಇದನ್ನೂ ಓದಿ: ಎಂಕೆ ಸ್ಟಾಲಿನ್​​​ರ 70ನೇ ಹುಟ್ಟುಹಬ್ಬದಂದು ಚೆನ್ನೈನಲ್ಲಿ ಮೊದಲ ಬಾರಿಗೆ ನಡೆಯಲಿದೆ ಜಲ್ಲಿಕಟ್ಟು

ಭಾರತ್ ಜೋಡೋ ಯಾತ್ರೆ ಕೈಗೊಂಡು ಭಾರತೀಯರ ಗಮನ ಸೆಳೆದ ಬಳಿಕ ರಾಯ್‌ಪುರದಲ್ಲಿ ನಡೆದ ಕಾಂಗ್ರೆಸ್‌ನ 85ನೇ ಸರ್ವಸದಸ್ಯರ ಅಧಿವೇಶನದಲ್ಲಿ ರಾಹುಲ್ ಗಾಂಧಿ ಐತಿಹಾಸಿಕ ಭಾಷಣ ಮಾಡಿದರು. ಜನವಿರೋಧಿ ಬಿಜೆಪಿ ತೊಲಗಿಸುವ ನಿರ್ಣಯಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಖರ್ಗೆ ಅವರಿಗೆ ನೀಡುವ ಸ್ವಾಗತವು ಚಾರಿತ್ರಿಕವಾಗಿರಬೇಕು’ ಎಂದು ಅಳಗಿರಿ ತಿಳಿಸಿದ್ದಾರೆ.

ನವಜಾತ ಶಿಶುಗಳಿಗೆ ಚಿನ್ನದ ಉಂಗುರ ಉಡುಗೊರೆ

ಎಂಕೆ ಸ್ಟಾಲಿನ್ ಹುಟ್ಟುಹಬ್ಬಕ್ಕೆ ಡಿಎಂಕೆ ನಾಯಕರು ಭಾರಿ ಸಿದ್ಧತೆ ನಡೆಸುತ್ತಿದ್ದಾರೆ. ಮಾರ್ಚ್ 1 ರಂದು ಸ್ಟಾಲಿನ್ ತಮ್ಮ 70 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಸ್ಟಾಲಿನ್ ಅವರ ಹುಟ್ಟುಹಬ್ಬಕ್ಕೆ ಡಿಎಂಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡುವುದು, ಕಲ್ಯಾಣ ಯೋಜನೆಗಳು, ಸಾರ್ವಜನಿಕ ಸಭೆಗಳು ಮತ್ತು ಕ್ರೀಡಾಕೂಟಗಳು ಇದರಲ್ಲಿ ಸೇರಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:15 am, Wed, 1 March 23

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ