ದೆಹಲಿಯ ಏಮ್ಸ್​ ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮನ

ದೆಹಲಿಯ ಏಮ್ಸ್​ ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, AIIMS ನ ಎರಡನೇ ಮಹಡಿಯಲ್ಲಿ ಬೆಳಿಗ್ಗೆ 11.54 ಕ್ಕೆ ಬೆಂಕಿ ಕಾಣಿಸಿಕೊಂಡಿದೆ

ದೆಹಲಿಯ ಏಮ್ಸ್​ ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮನ
ಏಮ್ಸ್​ ಆಸ್ಪತ್ರೆ

Updated on: Aug 07, 2023 | 12:38 PM

ದೆಹಲಿಯ ಏಮ್ಸ್​ ಆಸ್ಪತ್ರೆಯ ಎಂಡೋಸ್ಕೋಪಿ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, AIIMS ನ ಎರಡನೇ ಮಹಡಿಯಲ್ಲಿ ಬೆಳಿಗ್ಗೆ 11.54 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಿವೆ.
ಅಹಿತಕರ ಘಟನೆ ಸಂಭವಿಸಿದ ತಕ್ಷಣ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಯಿತು. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ