AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವಧುವನ್ನು ವೇಶ್ಯೆಗೆ, ಪುರುಷರನ್ನು ಹಂದಿಗೆ ಹೋಲಿಸಿದ ಎಐಎಂಐಎಂ ನಾಯಕ ಅಖ್ತರುಲ್ ವಿರುದ್ಧ ಆಕ್ರೋಶ

ಎಐಎಂಐಎಂ ನಾಯಕ ಅಖ್ತರುಲ್ ಇಮಾಮ್ ಮುಸ್ಲಿಂ ವಧುವನ್ನು ವೇಶ್ಯೆಗೆ, ಪುರುಷರನ್ನು ಹಂದಿಗೆ ಹೋಲಿಸಿ ವಿವಾದ ಸೃಷ್ಟಿಸಿದ್ದಾರೆ. ಮಹಿಳೆಯರು ಪರ್ದಾ ಧರಿಸದೆ ಇರುವುದನ್ನೂ ಟೀಕಿಸಿದ್ದಾರೆ. ಈ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಧಾರ್ಮಿಕ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ಹೇಳಿಕೆ ಸಮರ್ಥಿಸಿಕೊಂಡರೂ, ಇದು ಮುಸ್ಲಿಂ ಸಮುದಾಯದಲ್ಲಿ ಮಹಿಳಾ ಗೌರವದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಮುಸ್ಲಿಂ ವಧುವನ್ನು ವೇಶ್ಯೆಗೆ, ಪುರುಷರನ್ನು ಹಂದಿಗೆ ಹೋಲಿಸಿದ ಎಐಎಂಐಎಂ ನಾಯಕ ಅಖ್ತರುಲ್ ವಿರುದ್ಧ ಆಕ್ರೋಶ
ಮದುವೆ
ನಯನಾ ರಾಜೀವ್
|

Updated on: Nov 24, 2026 | 12:03 PM

Share

ಬಿಹಾರ, ನವೆಂಬರ್ 24: ಮುಸ್ಲಿಂ ವಧುವನ್ನು ವೇಶ್ಯೆಗೆ, ಪುರುಷರನ್ನು ಹಂದಿಗೆ ಹೋಲಿಕೆ ಮಾಡಿರುವ ಎಐಎಂಐಎಂ ನಾಯಕ ಅಖ್ತರುಲ್ ಇಮಾಮ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಸ್ಲಿಂ ಮದುವೆಗಳಲ್ಲಿ ವಧುವನ್ನು ಅತಿಥಿಗಳ ಮುಂದೆ ಕೂರಿಸುವ ಪದ್ಧತಿ, ಮಹಿಳೆಯರು ಪರ್ದಾ ಧರಿಸದೆ ಇರುವುದು ಮತ್ತು ಪುರುಷರು ಮಹಿಳೆಯರನ್ನು ನೋಡುವ ರೀತಿಯನ್ನು ಅವರು ಟೀಕಿಸಿದ್ದಾರೆ. ಈ ವೇಳೆ ಮಹಿಳೆಯರನ್ನು ಅವಹೇಳನ ಮಾಡುವ ಪದಗಳನ್ನು ಬಳಸಿರುವುದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಮುಸ್ಲಿಂ ಮದುವೆಗಳಲ್ಲಿ ನಡೆಯುವ ಕೆಲವು ಆಚರಣೆಗಳ ಬಗ್ಗೆ ಮಾತನಾಡುವಾಗ ಅಖ್ತರುಲ್ ಇಮಾನ್, ವಧುವನ್ನು ಎಲ್ಲರ ಮುಂದೆ ಕೂರಿಸಿ ಮುಖ ತೋರಿಸುವ ಪದ್ಧತಿಯನ್ನು ‘ತವಾಯಿಫ್’ (ವೇಶ್ಯೆ) ಪದ್ಧತಿಗೆ ಹೋಲಿಸಿದ್ದಾರೆ. ಮದುವೆಗೆ ಬಂದ ಪುರುಷರು ಮಹಿಳೆಯರನ್ನು ನೋಡುವ ರೀತಿಯನ್ನು ಹಂದಿಗಳ ವರ್ತನೆಗೆ ಹೋಲಿಸಿ ಮಾತನಾಡಿದ್ದಾರೆ. ಅವರ ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಧಾರ್ಮಿಕ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪರ್ದಾ ಪದ್ಧತಿ ಬಗ್ಗೆ ಏನು ಹೇಳಿದರು?

ಮದುವೆಗಳಲ್ಲಿ ಮಹಿಳೆಯರು ತಲೆ ಮುಚ್ಚಿಕೊಳ್ಳದೆ ಭಾಗವಹಿಸುವುದರ ಬಗ್ಗೆಯೂ ಅಖ್ತರುಲ್ ಇಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ಲಾಂ ಧರ್ಮದಲ್ಲಿ ಮಹಿಳೆಯರಿಗೆ ಪರ್ದಾ ಅತ್ಯಗತ್ಯ ಎಂದು ಪ್ರತಿಪಾದಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗಿಂತ ಪುರುಷರೇ ಹೆಚ್ಚಾಗಿ ತಲೆಗೆ ಟೋಪಿ ಧರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಮಹಿಳೆಯರು ಮದುವೆ ಸಮಾರಂಭಗಳಲ್ಲಿ ಮುಖಕ್ಕೆ ಮುಸುಕು ಹಾಕದೆ ಕುಳಿತುಕೊಳ್ಳುವುದು ಮತ್ತು ಪುರುಷರು ಅವರನ್ನು ದಿಟ್ಟಿಸಿ ನೋಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಾಗಿ, ಹೆಚ್ಚು ಮಕ್ಕಳನ್ನು ಹೆರಿ: ಮುಸ್ಲಿಮರ ಜನಸಂಖ್ಯೆ ಹೆಚ್ಚಳ ವರದಿ ಬೆನ್ನಲ್ಲೇ ಅಮೆರಿಕನ್ನರಿಗೆ ಕರೋಲಿನ್ ಲೆವಿಟ್ ಕರೆ!

“ನಮ್ಮ ಪುರುಷರು ನಾಚಿಕೆ ಎಂಬುದನ್ನೇ ಮರೆತಿದ್ದಾರೆಯೇ? ಮದುವೆಗಳಲ್ಲಿ ಈ ರೀತಿಯಾಗಿ ಮುಕ್ತವಾಗಿ ಬೆರೆಯುವುದು ಹಂದಿಗಳ ವರ್ತನೆಯಂತಿದೆ” ಎಂಬ ಅರ್ಥದಲ್ಲಿ ಅವರು ಮಾತನಾಡಿರುವುದು ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ಟೀಕೆ

ಅಖ್ತರುಲ್ ಇಮಾನ್ ಅವರ ಹೇಳಿಕೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಹಾರ ಬಿಜೆಪಿ ಮಾಧ್ಯಮ ವಿಭಾಗದ ಮುಖ್ಯಸ್ಥ ಡ್ಯಾನಿಶ್ ಇಕ್ಬಾಲ್ ಮಾತನಾಡಿ, ಮಹಿಳೆಯರ ಗೌರವ ಮತ್ತು ಹಕ್ಕುಗಳಿಗೆ ಧಕ್ಕೆ ತರುವ ರೀತಿಯಲ್ಲಿ ಶಾಸಕರು ಮಾತನಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ. ಮಹಿಳೆಯರು ಇಂದು ಶಿಕ್ಷಣ, ವೈದ್ಯಕೀಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಷರಿಯಾ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಅಫ್ಘಾನಿಸ್ತಾನಕ್ಕೆ ಹೋಗಿ ವಾಸಿಸಲಿ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಮುಮ್ತಾಜ್ ಪಟೇಲ್ ಕೂಡ ಹೇಳಿಕೆಯನ್ನು ಖಂಡಿಸಿದ್ದಾರೆ. ಮಹಿಳೆಯರನ್ನು ಈ ರೀತಿ ಅವಮಾನಿಸುವುದಕ್ಕೆ ಇಸ್ಲಾಂನಲ್ಲಿ ಅವಕಾಶವಿಲ್ಲ. ಮಹಿಳೆಯರ ಬಗ್ಗೆ ಇಂತಹ ಕೀಳುಮಟ್ಟದ ಭಾಷೆ ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಧಾರ್ಮಿಕ ಮುಖಂಡರಿಂದಲೂ ವಿರೋಧ

ಲಕ್ನೋದ ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾದ ಅಧ್ಯಕ್ಷ ಮೌಲಾನಾ ಖಾಲಿದ್ ರಶೀದ್ ಫರಂಗಿ ಮಹ್ಲಿ ಕೂಡ ಅಖ್ತರುಲ್ ಇಮಾನ್ ಅವರ ಭಾಷೆಯನ್ನು ವಿರೋಧಿಸಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಪದಗಳಿಗೆ ಸ್ಥಾನವಿಲ್ಲ. ಧಾರ್ಮಿಕ ವಿಚಾರಗಳನ್ನು ಮಾತನಾಡುವಾಗಲೂ ಇಂತಹ ಅವಹೇಳನಕಾರಿ ಪದಗಳನ್ನು ಬಳಸಬಾರದು ಎಂದು ಹೇಳಿದ್ದಾರೆ.

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಎಐಎಂಐಎಂ ನಾಯಕ

ವಿವಾದ ತೀವ್ರಗೊಂಡರೂ ಅಖ್ತರುಲ್ ಇಮಾನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಪರ್ದಾ ಪದ್ಧತಿ ಎಷ್ಟು ಮುಖ್ಯವೋ, ಹಿಂದೂ ವಿವಾಹಿತ ಮಹಿಳೆಯರಿಗೆ ಸಿಂಧೂರವೂ ಅಷ್ಟೇ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. ತಾವು ಕಠಿಣ ಪದಗಳನ್ನು ಬಳಸಿರಬಹುದು. ಆದರೆ ಸರಿಯಾದ ಸಮಯಕ್ಕೆ ಎಚ್ಚರಗೊಳ್ಳಲು ನಿರಾಕರಿಸುವ ಹಠಮಾರಿ ಮಗುವನ್ನು ಎಚ್ಚರಿಸಲು ಕೆನ್ನೆಗೆ ಹೊಡೆದಂತೆ ತಮ್ಮ ಮಾತುಗಳಿದ್ದವು ಎಂದು ಸಮರ್ಥಿಸಿಕೊಂಡಿದ್ದಾರೆ. ತಮ್ಮ ಹೇಳಿಕೆ ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಮುಸ್ಲಿಮರನ್ನು ಉದ್ದೇಶಿಸಿ ಮಾಡಿದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿವಾದದ ಹಿಂದಿರುವ ಆಚರಣೆಗಳೇನು?

– ಮುಹ್ ದಿಖಾಯ್ (Muh Dikhai): ಮದುವೆಯ ನಂತರ ವಧುವಿನ ಮುಖವನ್ನು ಕುಟುಂಬದವರು ಮತ್ತು ಅತಿಥಿಗಳಿಗೆ ತೋರಿಸುವ ಸಂಪ್ರದಾಯ. – ಪರ್ದಾ (Purdah): ಮಹಿಳೆಯರು ದೇಹ ಮತ್ತು ತಲೆಯನ್ನು ಮುಚ್ಚಿಕೊಳ್ಳುವ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಪದ್ಧತಿ. – ವಲಿಮಾ (Walima): ಮುಸ್ಲಿಂ ವಿವಾಹದ ನಂತರ ವರನ ಕುಟುಂಬ ಆಯೋಜಿಸುವ ಔತಣಕೂಟ.

ಅಖ್ತರುಲ್ ಇಮಾನ್ ಅವರ ಭಾಷಣದ ವಿಡಿಯೋ ವೈರಲ್ ಆದ ಬಳಿಕ ಮದುವೆಯ ಆಚರಣೆಗಳು, ಧಾರ್ಮಿಕ ಸಂಪ್ರದಾಯಗಳು, ಮಹಿಳೆಯರ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಜೀವನದಲ್ಲಿ ರಾಜಕಾರಣಿಗಳ ಭಾಷೆಯ ಬಗ್ಗೆ ಚರ್ಚೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ