ಮುಸ್ಲಿಮರೇ ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಗುಲಾಮಗಿರಿ ಮಾಡುತ್ತೀರಿ? ಓವೈಸಿ ಪ್ರಶ್ನೆ

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡಬೇಕು ಎಂದು ಕೆಂಡಕಾರಿದ್ದಾರೆ. ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗುಲಾಮ್‌ ನಬಿ ಅಜಾದ್‌ ಸೇರಿದಂತೆ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಶಾಮಿಲಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದರೆೆಂದು ವರದಿಯಾದ ಬೆನ್ನಲ್ಲೇ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. […]

ಮುಸ್ಲಿಮರೇ ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಗುಲಾಮಗಿರಿ ಮಾಡುತ್ತೀರಿ? ಓವೈಸಿ ಪ್ರಶ್ನೆ
Follow us
Guru
| Updated By: ಸಾಧು ಶ್ರೀನಾಥ್​

Updated on: Aug 24, 2020 | 4:57 PM

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಹಿರಂಗವಾದ ಬೆನ್ನಲ್ಲೇ, ಎಐಎಂಐಎಂ ನಾಯಕ ಅಸಾದುದ್ದಿನ್‌ ಓವೈಸಿ ಕಾಂಗ್ರೆಸ್‌ ಪಕ್ಷದ ಮೇಲೆ ಹರಿಹಾಯ್ದಿದ್ದು, ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡಬೇಕು ಎಂದು ಕೆಂಡಕಾರಿದ್ದಾರೆ.

ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗುಲಾಮ್‌ ನಬಿ ಅಜಾದ್‌ ಸೇರಿದಂತೆ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಶಾಮಿಲಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದರೆೆಂದು ವರದಿಯಾದ ಬೆನ್ನಲ್ಲೇ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಗುಲಾಮ್‌ ನಬಿ ಆಜಾದ್‌ ನಮಗೆ ಬಿಜೆಪಿ ‘ಬಿ’ ಟೀಮ್‌ ಎಂದು ಮೂದಲಿಸಿದ್ದರು. ಈಗ ಅವರೇ ಬಿಜೆಪಿ ಜತೆ ಶಾಮಿಲಾಗಿದ್ದಾರೆಂದು ಅವರ ಪಕ್ಷದ ನಾಯಕರೇ ಹೇಳುತ್ತಿದ್ದಾರೆ ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಅಷ್ಟೇ ಅಲ್ಲ ಮುಸ್ಲಿಂ ನಾಯಕರು ಇನ್ನೂ ಎಷ್ಟು ದಿನ ಕಾಂಗ್ರೆಸ್‌ ಪಕ್ಷದ ಗುಲಾಮಗಿರಿ ಮಾಡುತ್ತೀರಿ ಎಂದು ಕಾಂಗ್ರೆಸ್‌ ಪಕ್ಷದ ಮುಸ್ಲಿಂ ನಾಯಕರಿಗೆ ಓವೈಸಿ ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್‌ ಪಕ್ಷದಲ್ಲಿ ಮುಂದುವರಿಯುವ ಬಗ್ಗೆ ಮುಸ್ಲಿಂ ನಾಯಕರು ಚಿಂತಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದ್ರೆ ಈ ನಡುವೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಗುಲಾಮ್‌ ನಬಿ ಆಜಾದ್‌, ರಾಹುಲ್‌ ಗಾಂಧಿ ಹಾಗೇ ಹೇಳಿಲ್ಲ. ಇಂತಹ ಮಾತುಗಳೇ ಕಾಂಗ್ರೆಸ್‌ ಕಾರ್ಯಕಾರಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ವಿವಾದಕ್ಕೆ ತೇಪೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್