AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puducherry Elections 2021: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಐಎನ್​ಆರ್​ಸಿ; ತಟ್ಟನ್​ಚವಡಿ, ಯಾನಂನಿಂದ ಸ್ಪರ್ಧಿಸಲಿದ್ದಾರೆ ಎನ್.ರಂಗಸ್ವಾಮಿ

AINRC Announces Candidates: ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ ಎಐಎನ್​ಆರ್​ಸಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ, ಪುದುಚೇರಿಯ ಮಾಜಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ ತಟ್ಟನ್​ಚವಡಿ ಮತ್ತು ಯಾನಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ

Puducherry Elections 2021: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಐಎನ್​ಆರ್​ಸಿ; ತಟ್ಟನ್​ಚವಡಿ, ಯಾನಂನಿಂದ ಸ್ಪರ್ಧಿಸಲಿದ್ದಾರೆ ಎನ್.ರಂಗಸ್ವಾಮಿ
ಎನ್.ರಂಗಸ್ವಾಮಿ
ರಶ್ಮಿ ಕಲ್ಲಕಟ್ಟ
|

Updated on: Mar 19, 2021 | 7:37 PM

Share

ನವದೆಹಲಿ : ಆಲ್ ಇಂಡಿಯಾ ಎನ್​ಆರ್ ಕಾಂಗ್ರೆಸ್ (AINRC) ಪಕ್ಷ ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಎಐಎನ್​ಆರ್​ಸಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ, ಪುದುಚೇರಿಯ ಮಾಜಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ ತಟ್ಟನ್​ಚವಡಿ ಮತ್ತು ಯಾನಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ರಂಗಸ್ವಾಮಿ ಅವರು ವಾರದ ಹಿಂದೆ ಹೇಳಿದ್ದರು. ಸೋಮವಾರ ಅವರು ತಟ್ಟನ್​ಚವಡಿಯಿಂದ ನಾಮಪತ್ರ ಸಲ್ಲಿಸಿದ್ದರು. ತಟ್ಟನ್​​ಚವಡಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು ವಾರಾಂತ್ಯದಲ್ಲಿ ಯಾನಂ ಚುನಾವಣೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.

ಮಾರ್ಚ್ 9ರಂದು ಎಐಎನ್​ಆರ್ಸಿ ನೇತೃತ್ವದ ಮೈತ್ರಿಕೂಟವು ಬಿಜೆಪಿ ಮತ್ತು ಎಐಎಡಿಎಂಕೆ ಜತೆಗೆ ಸೀಟು ಹಂಚಿಕೆ ಮಾಡಿಕೊಂಡಿತ್ತು. ಮೈತ್ರಿಕೂಟದ ಒಪ್ಪಂದದ ಪ್ರಕಾರ ಎನ್​ಆರ್ ಕಾಂಗ್ರೆಸ್ ಪಕ್ಷ 16 ಸೀಟುಗಳಲ್ಲಿ , ಬಿಜೆಪಿ ಮತ್ತು ಎಐಎಡಿಎಂಕೆ 14 ಸೀಟುಗಳಲ್ಲಿ ಸ್ಪರ್ಧಿಸಲಿದೆ.

ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ 10 ಸೀಟುಗಳಲ್ಲಿ ಬಿಜೆಪಿ (BJP), 4 ಸೀಟುಗಳಲ್ಲಿ ಎಐಎಡಿಎಂಕೆ (AIADMK) ಸ್ಪರ್ಧಿಸಲಿದೆ. ಮಾರ್ಚ್ 10ರಂದು ಸೀಟು ಹಂಚಿಕೆ ಬಗ್ಗೆ ನಡೆದ ಚರ್ಚೆಯಲ್ಲಿ  ಎಐಎನ್​​ಆರ್ ಕಾಂಗ್ರೆಸ್ (AINRC) 18 ಸೀಟುಗಳಿಗೆ ಬೇಡಿಕೆಯೊಡ್ಡಿ ಕೊನೆಗೆ 16 ಸೀಟುಗಳಿಗೆ ತೃಪ್ತವಾಗಿತ್ತು. ಅದೇ ವೇಳೆ ಉಳಿದ 14 ಸೀಟುಗಳಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಸ್ಪರ್ಧಿಸಲಿದೆ. ಸೀಟು ಹಂಚಿಕೆ ಬಗ್ಗೆ ನಿರ್ಧಾರ ಪ್ರಕಟಿಸಿದ ಪುದುಚೇರಿ ಬಿಜೆಪಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ ಎನ್​​ಆರ್ ಕಾಂಗ್ರೆಸ್ ಮತ್ತು ಎಐಎಡಿಎಂಕೆ ಜತೆಗೆ ಸೀಟು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಎಐಎನ್​​ಆರ್​ಸಿ, ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟ ಪುದುಚೇರಿ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕಣಕ್ಕಿಳಿಯಲಿದೆ.

ಬಿಜೆಪಿ ಜತೆ ಚುನಾವಣೆ ಸ್ಪರ್ಧಿಸಲು ಐಎಎನ್​ಆರ್​ಸಿ ಪಕ್ಷಕ್ಕೆ ಇಷ್ಟವಿರಲಿಲ್ಲ . ಆದರೆ ಪುದುಚೇರಿಯಲ್ಲುಂಟಾದ ದಿಢೀರ್ ರಾಜಕೀಯ ಬೆಳವಣಿಗೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾತುಕತೆಯಿಂದ ಎಐಎನ್​ಆರ್​ಸಿ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿತ್ತು. ಪುದುಚೇರಿಯ ಮಾಜಿ ಮುಖ್ಯಮಂತ್ರಿಯವರ ಮಾಜಿ ಸಂಸದೀಯ ಕಾರ್ಯದರ್ಶಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಶಾಸರು ಐಎಎನ್​ಆರ್​ಸಿ ಸೇರಿರುವುದರಿಂದ ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಸೀಟುಗಳನ್ನು ಗೆಲ್ಲುವ ನಿರೀಕ್ಷೆ ಪಕ್ಷಕ್ಕಿದೆ.

ಈ ನಡುವೆ ಅದೇ ವೇಳೆ ಪಿಎಂಕೆ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದೆ. ಎಐಎಡಿಎಂಕೆ,ಬಿಜೆಪಿ, ಎಐಎನ್​ಆರ್​ಸಿ ಯಾವುದೇ ಪಕ್ಷ ಸೀಟು ಹಂಚಿಕೆ ಮಾಡಿಕೊಳ್ಳುತ್ತಿರುವುದರ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಪಿಎಂಕೆ ಪುದುಚೇರಿ ಘಟಕದ ಸಂಚಾಲಕ ಕೆ.ಧನರಾಜು ಹೇಳಿದ್ದರು. ಎನ್​ಡಿಎ ಮೈತ್ರಿಕೂಟದ ಅಂಗವಾದರೆ ಪಿಎಂಕೆ ಪಕ್ಷಕ್ಕೆ 5 ಸೀಟುಗಳನ್ನು ನೀಡಬೇಕು ಎಂದು ತಾನು  ಬಿಜೆಪಿಗೆ ಪತ್ರ ಬರೆದಿದ್ದೆ. ಆದರೆ ಎಐಎನ್ಆರ್​ಸಿ, ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಸೀಟು ಹಂಚಿಕೆ ಮಾತುಕತೆಗಳು ನಡೆದಿರುವ ಬಗ್ಗೆ ನಮಗೆ ತಿಳಿದಿರಲಿಲ್ಲ ಎಂದು ಧನರಾಜು ಹೇಳಿದ್ದಾರೆ. ಇಡೀ ಪ್ರಕ್ರಿಯೆ ಬಗ್ಗೆ ತಮ್ಮ ಪಕ್ಷಕ್ಕೆ ಏನೂ ಹೇಳದಿರುವುದರ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಅವರು, ಪಿಎಂಕೆ ಅಧಿಕೃತವಾಗಿ ಗುರುತಿಸಲ್ಪಟ್ಟ ಪಕ್ಷ, ನಾವು ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ. ಪುದುಚೇರಿಯಲ್ಲಿ 30 ವಿಧಾನಸಭಾ ಸೀಟುಗಳಿವೆ. ಈ ಎಲ್ಲ ಸೀಟುಗಳಲ್ಲಿ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದಿದ್ದಾರೆ.

ಏಪ್ರಿಲ್ 6 ರಂದು ಪುದುಚೇರಿಯಲ್ಲಿ ಚುನಾವಣೆ ನಡೆಯಲಿದ್ದು ಮೇ.2ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ:  Puducherry Assembly Elections 2021: ಪುದುಚೇರಿ ಚುನಾವಣೆಯಲ್ಲಿ10 ಸೀಟುಗಳಲ್ಲಿ ಸ್ಪರ್ಧಿಸಲಿದೆ ಬಿಜೆಪಿ

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?