ಬಿಹಾರದಲ್ಲಿ ಪ್ರವಾಹದ ನೀರಿಗೆ ಸೇನಾ ಹೆಲಿಕಾಪ್ಟರ್ ಬಿದ್ದಿರುವ ಮಾಹಿತಿ ಲಭ್ಯವಾಗಿದೆ. ಬಿಹಾರದ ಮುಜಾಫರ್‌ಪುರದಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಪ್ರವಾಹದ ನೀರಿನಲ್ಲಿ ಬಿದ್ದಿದೆ. ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದೆ. ಈ ಅಪಘಾತದಲ್ಲಿ ಯಾರಿಗೂ ಯಾವುದೇ ಬಗೆಯ ಸಮಸ್ಯೆಗಳಾಗಿಲ್ಲ. ಔರೈನ ಮಧುಬನ್ ಬೆಸಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಹೆಲಿಕಾಪ್ಟರ್‌ನಲ್ಲಿ 4 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಎಲ್ಲರೂ ಗಾಯಗೊಂಡಿದ್ದಾರೆ ಆದರೆ ಅವರ ಸ್ಥಿತಿ ಸ್ಥಿರವಾಗಿದೆ.
बिहार औराई के मधुबन बेसी में हेलीकॉप्टर क्रैश, हेलीकॉप्टर में थे 4 लोग मौजूद सभी सुरक्षित हैं। #BiharFlood pic.twitter.com/B6qPdaCWAN
— SIDDHI KUMARI 🇮🇳 (@kumari_siddhi01) October 2, 2024
ಈ ಬಗ್ಗೆ ವಾಯುಪಡೆ ತನಿಖೆಗೆ ಆದೇಶಿಸಿದೆ. ಅಪಘಾತ ಏಕೆ ಸಂಭವಿಸಿತು ಎಂಬುದರ ಕುರಿತು ವಾಯುಪಡೆ ಇನ್ನೂ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:28 pm, Wed, 2 October 24