AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್​ನಲ್ಲಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ

ವೆಂಟಿಲೇಟರ್​ನಲ್ಲಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿ ದೈಹಿಕ ಸಂಪರ್ಕ ಬೆಳೆಸಲು ಮುಂದಾಗಿದ್ದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಈಜುಕೊಳದಲ್ಲಿ ಈಜಾಡುತ್ತಿದ್ದ ಸಂದರ್ಭದಲ್ಲಿ ಆಕೆ ಮುಳುಗಿ ಸಾಯುವ ಹಂತಕ್ಕೆ ತಲುಪಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಸ್ಥಿತಿ ತೀರಾ ಹದಗೆಟ್ಟಿದ್ದ ಪರಿಣಾಮ ಅವರನ್ನ ವೆಂಟಿಲೇಟರ್​ನಲ್ಲಿರಿಸಲಾಯಿತು. ಆಗ ಆಸ್ಪತ್ರೆ ಸಿಬ್ಬಂದಿಯೊಬ್ಬರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ವೆಂಟಿಲೇಟರ್​ನಲ್ಲಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ
ವೆಂಟಿಲೇಟರ್ Image Credit source: Max Healthcare
ನಯನಾ ರಾಜೀವ್
|

Updated on: Apr 16, 2025 | 9:06 AM

Share

ಗುರುಗ್ರಾಮ, ಏಪ್ರಿಲ್ 16: ವೆಂಟಿಲೇಟರ್​ನಲ್ಲಿದ್ದ ಗಗನಸಖಿ(Air Hostess) ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಸೌರ್ಜನ್ಯವೆಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ರೋಗಿಯನ್ನು ಗುಣಪಡಿಸಬೇಕಾದವರೇ ಆಕೆಯ ಜತೆ ಅನುಚಿತವಾಗಿ ವರ್ತಿಸಿದ್ದು, ಇದೀಗ ಆಕ್ರೋಶವನ್ನು ಹುಟ್ಟುಹಾಕಿದೆ. ಗಗನಸಖಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಮತ್ತು ವೆಂಟಿಲೇಟರ್‌ನಲ್ಲಿದ್ದಾಗ ಆಸ್ಪತ್ರೆ ಸಿಬ್ಬಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

ವಿಮಾನಯಾನ ತರಬೇತಿಗಾಗಿ ಗುರುಗ್ರಾಮಕ್ಕೆ ಬಂದಿದ್ದ ಅವರು, ತಾನು ತಂಗಿದ್ದ ಹೋಟೆಲ್​ನ ಈಜುಕೊಳದಲ್ಲಿ ಈಜಾಡಲು ಹೋಗಿ ಮುಳುಗಿ ಸಾಯುವ ಹಂತಕ್ಕೆ ತಲುಪಿದ್ದರು. ತುರ್ತು ಆರೈಕೆಗಾಗಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ, ಏಪ್ರಿಲ್ 6 ರಂದು, ಆಕೆಯ ಆರೋಗ್ಯ ಹದಗೆಟ್ಟ ಕಾರಣ, ಆಕೆಯ ಪತಿ ಸದರ್ ಪ್ರದೇಶದ ಮತ್ತೊಂದು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಿದರು, ಅಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ತಾನು ಪ್ರಜ್ಞಾಹೀನಳಾಗಿ, ವೆಂಟಿಲೇಟರ್​ ಸಪೋರ್ಟ್​ನಲ್ಲಿರುವಾಗ ಆಸ್ಪತ್ರೆ ಸಿಬ್ಬಂದಿಯಿಂದ ಅನುಚಿತವಾಗಿ ವರ್ತಿಸಿದ್ದು, ದೈಹಿಕ ಸಂಪರ್ಕ ಬೆಳೆಸಲು ಮುಂದಾಗಿದ್ದ, ಆಗ ನನಗೆ ಎಚ್ಚರವಾದರೂ ಕೂಗಿಕೊಳ್ಳಲು ಅಥವಾ ಓಡಲು ಸಾಧ್ಯವಾಗಲಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಮತ್ತಷ್ಟು ಓದಿ: ಬೆಂಗಳೂರು: ಗಗನಸಖಿಗೆ ವಂಚಿಸಿ ಸೀನ್ ಕ್ರಿಯೇಟ್ ಮಾಡಿದ ಬ್ಯಾಂಕ್ ಮ್ಯಾನೇಜರ್; ಯುವತಿ ದೂರು ನೀಡುತ್ತಿದ್ದಂತೆ ಅಸಲಿಯತ್ತು ಬಯಲಿಗೆ

ಏಪ್ರಿಲ್ 13 ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮನೆಗೆ ಹಿಂದಿರುಗಿದ ನಂತರ, ಅವರು ತಮ್ಮ ಪತಿಗೆ ನಡೆದ ಹಲ್ಲೆಯ ಬಗ್ಗೆ ಮಾಹಿತಿ ನೀಡಿದರು ಮತ್ತು ಸಹಾಯವಾಣಿ ಸಂಖ್ಯೆ 112 ಅನ್ನು ಸಂಪರ್ಕಿಸಿದರು. ನಂತರ ದಂಪತಿಗಳು ತಮ್ಮ ಕಾನೂನು ಸಲಹೆಗಾರರ ​​ಸಹಾಯದಿಂದ ಸದರ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದರು.

ದೂರಿನ ನಂತರ, ಗುರುಗ್ರಾಮ ಪೊಲೀಸರು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಪೂರ್ಣ ಪ್ರಮಾಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಪಿಆರ್‌ಒ ದೃಢಪಡಿಸಿದ್ದಾರೆ.

ನಾವು ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ, ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಣೆ ಮಾಡಲಾಗುತ್ತಿದೆ ಮತ್ತು ಆಸ್ಪತ್ರೆ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ