AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಶಂಕರ್ ಮಿಶ್ರಾಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಈ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ

ಏರ್ ಇಂಡಿಯಾದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಶಂಕರ್ ಮಿಶ್ರಾಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್
ಶಂಕರ್ ಮಿಶ್ರಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 11, 2023 | 8:38 PM

Share

ನ್ಯೂಯಾರ್ಕ್‌ನಿಂದ ನವದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಹಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ  ಆರೋಪದಲ್ಲಿ ಶಂಕರ್ ಮಿಶ್ರಾಗೆ (Shankar Mishra)ದೆಹಲಿಯ ಪಟಿಯಾಲ ಹೌಸ್ ಕೋರ್ಟ್ (Delhi’s Patiala House court) ಜಾಮೀನು ನಿರಾಕರಿಸಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಈ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಶನಿವಾರ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಪೊಲೀಸರ ಕಸ್ಟಡಿಯನ್ನು ನಿರಾಕರಿಸಿದೆ.

ಘಟನೆಯ ಸಮಯದಲ್ಲಿ ಮಿಶ್ರಾ ಅವರು ಕುಡಿದಿದ್ದು  ಮಹಿಳಾ ಸಹ-ಪ್ರಯಾಣಿಕರ ಮೇಲೆ ಮೂತ್ರ ಮಾಡಿದ್ದರು.  ನವೆಂಬರ್ 26, 2022 ರಲ್ಲಿ ಈ ಘಟನೆ ನಡೆದಿತ್ತು.

ವಿಮಾನದಲ್ಲಿ ನಡೆದದ್ದೇನು?

ನ್ಯೂಯಾರ್ಕ್‌ನಿಂದ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಲ್ಲಿ ಪ್ಯಾಂಟ್ ಅನ್ನು ಬಿಚ್ಚಿ ಸಹ-ಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದರು. ಪ್ರತ್ಯಕ್ಷದರ್ಶಿಗಳ ವರದಿಗಳು ಮತ್ತು ಹೇಳಿಕೆಗಳ ಪ್ರಕಾರ, ಆ ವ್ಯಕ್ತಿ ಮತ್ತೆ ಅಲ್ಲಿ ನಿಂತಿದ್ದರು, ಅವರನ್ನು ಅಲ್ಲಿಂದ ಇತರ ಪ್ರಯಾಣಿಕರು ಅಲ್ಲಿಂದ ತೆರಳುವಂತೆ ಕೇಳಿಕೊಂಡ ನಂತರ ಅಲ್ಲಿಂದ ಹೋಗಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್

ಈ ವಿಷಯವನ್ನು ಸಿಬ್ಬಂದಿಯ ಗಮನಕ್ಕೆ ತಂದರು ಯಾವುದೇ ಪರಿಣಾಮಕಾರಿ ಪ್ರತಿಕ್ರಿಯೆ ಬಂದಿರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ, ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದಿದ್ದಾರೆ. ಜನವರಿ 4ರಂದು ಆಕೆ ಶಂಕರ್ ಮಿಶ್ರಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು, ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮಿಶ್ರಾ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯ ಆರೋಪ ಹೊರಿಸಲಾಗಿದ್ದು, ಅವರು 30 ದಿನಗಳ ಕಾಲ ವಿಮಾನಯಾನದೊಂದಿಗೆ ಹಾರಾಟ ನಡೆಸದಂತೆ ನಿರ್ಬಂಧಿಸಲಾಗಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ಏರ್ ಇಂಡಿಯಾ ಮತ್ತು ಆ ವಿಮಾನದಲ್ಲಿದ್ದ ಸಿಬ್ಬಂದಿಗೆ ನೋಟಿಸ್ ನೀಡಿದೆ ಮತ್ತು ಅವರ ನಡವಳಿಕೆಯನ್ನು ‘ವೃತ್ತಿಪರವಲ್ಲ’ ಎಂದು ಹೇಳಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ