ನ್ಯೂಯಾರ್ಕ್‌ನಿಂದ ನವದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಹಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಶಂಕರ್ ಮಿಶ್ರಾಗೆ (Shankar Mishra)ದೆಹಲಿಯ ಪಟಿಯಾಲ ಹೌಸ್ ಕೋರ್ಟ್ (Delhi’s Patiala House court) ಜಾಮೀನು ನಿರಾಕರಿಸಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗಾರ್ಗ್ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಈ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಶನಿವಾರ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಪೊಲೀಸರ ಕಸ್ಟಡಿಯನ್ನು ನಿರಾಕರಿಸಿದೆ.
ಘಟನೆಯ ಸಮಯದಲ್ಲಿ ಮಿಶ್ರಾ ಅವರು ಕುಡಿದಿದ್ದು ಮಹಿಳಾ ಸಹ-ಪ್ರಯಾಣಿಕರ ಮೇಲೆ ಮೂತ್ರ ಮಾಡಿದ್ದರು. ನವೆಂಬರ್ 26, 2022 ರಲ್ಲಿ ಈ ಘಟನೆ ನಡೆದಿತ್ತು.
ನ್ಯೂಯಾರ್ಕ್‌ನಿಂದ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಲ್ಲಿ ಪ್ಯಾಂಟ್ ಅನ್ನು ಬಿಚ್ಚಿ ಸಹ-ಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದರು. ಪ್ರತ್ಯಕ್ಷದರ್ಶಿಗಳ ವರದಿಗಳು ಮತ್ತು ಹೇಳಿಕೆಗಳ ಪ್ರಕಾರ, ಆ ವ್ಯಕ್ತಿ ಮತ್ತೆ ಅಲ್ಲಿ ನಿಂತಿದ್ದರು, ಅವರನ್ನು ಅಲ್ಲಿಂದ ಇತರ ಪ್ರಯಾಣಿಕರು ಅಲ್ಲಿಂದ ತೆರಳುವಂತೆ ಕೇಳಿಕೊಂಡ ನಂತರ ಅಲ್ಲಿಂದ ಹೋಗಿದ್ದಾರೆ.
ಇದನ್ನೂ ಓದಿ: ಏರ್ ಇಂಡಿಯಾದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್
ಈ ವಿಷಯವನ್ನು ಸಿಬ್ಬಂದಿಯ ಗಮನಕ್ಕೆ ತಂದರು ಯಾವುದೇ ಪರಿಣಾಮಕಾರಿ ಪ್ರತಿಕ್ರಿಯೆ ಬಂದಿರಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ, ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದಿದ್ದಾರೆ. ಜನವರಿ 4ರಂದು ಆಕೆ ಶಂಕರ್ ಮಿಶ್ರಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು, ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಮಿಶ್ರಾ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯ ಆರೋಪ ಹೊರಿಸಲಾಗಿದ್ದು, ಅವರು 30 ದಿನಗಳ ಕಾಲ ವಿಮಾನಯಾನದೊಂದಿಗೆ ಹಾರಾಟ ನಡೆಸದಂತೆ ನಿರ್ಬಂಧಿಸಲಾಗಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಏರ್ ಇಂಡಿಯಾ ಮತ್ತು ಆ ವಿಮಾನದಲ್ಲಿದ್ದ ಸಿಬ್ಬಂದಿಗೆ ನೋಟಿಸ್ ನೀಡಿದೆ ಮತ್ತು ಅವರ ನಡವಳಿಕೆಯನ್ನು ‘ವೃತ್ತಿಪರವಲ್ಲ’ ಎಂದು ಹೇಳಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ