ವಿಮಾನದಲ್ಲಿ ಸುಟ್ಟ ವಾಸನೆ, ಕೊಚ್ಚಿ ನಿಲ್ದಾಣಕ್ಕೆ ಹಿಂದಿರುಗಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್
ಕೊಚ್ಚಿಯಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಚ್ಚಿಗೆ ವಾಪಸಾಗಿದೆ. ವಿಮಾನದಲ್ಲಿ ಸುಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣವೇ ಕೊಚ್ಚಿಗೆ ಹಿಂದಿರುಗಿಸಲಾಯಿತು,
ಕೊಚ್ಚಿಯಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್(Air India Express) ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಚ್ಚಿಗೆ ವಾಪಸಾಗಿದೆ. ವಿಮಾನದಲ್ಲಿ ಸುಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣವೇ ಕೊಚ್ಚಿಗೆ ಹಿಂದಿರುಗಿಸಲಾಯಿತು. ಆಗಸ್ಟ್ 2 ರ ರಾತ್ರಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವಿಮಾನಯಾನ ಮೂಲಗಳು ಗುರುವಾರ ತಿಳಿಸಿವೆ.
ಮೂಲಗಳ ಪ್ರಕಾರ, ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆದ ಕೂಡಲೇ ವಿಮಾನ ಪ್ರಯಾಣಿಕರೊಬ್ಬರಿಗೆ ಸುಟ್ಟ ವಾಸನೆ ಬಂದಿತ್ತು, ಅವರು ತಕ್ಷಣವೇ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್
ಬುಧವಾರ ತಡರಾತ್ರಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ವಿಮಾನವನ್ನು ತಪಾಸಣೆ ನಡೆಸಲಾಗಿದ್ದು, ಯಾವುದೇ ದೋಷ ಕಂಡುಬಂದಿಲ್ಲ ಎಂದು ಅದು ಹೇಳಿದೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಿತ್ತು, ಅದು ಸುಮಾರು 175 ಪ್ರಯಾಣಿಕರನ್ನು ಹೊತ್ತು ತಡವಾಗಿ ಶಾರ್ಜಾಕ್ಕೆ ಹೊರಟಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ