AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Flight: ವಿಮಾನದ ಕಿಟಕಿಯಲ್ಲಿ ಬಿರುಕು; ಸೌದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್​ ತುರ್ತು ಭೂಸ್ಪರ್ಶ

Air India Express: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ಕಿಟಕಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ತಿರುವನಂತಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

Air India Flight: ವಿಮಾನದ ಕಿಟಕಿಯಲ್ಲಿ ಬಿರುಕು; ಸೌದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್​ ತುರ್ತು ಭೂಸ್ಪರ್ಶ
ಏರ್ ಇಂಡಿಯಾ ವಿಮಾನ
TV9 Web
| Edited By: |

Updated on: Jul 31, 2021 | 3:54 PM

Share

ತಿರುವನಂತಪುರಂ: ಕೇರಳದಿಂದ ಸೌದಿ ಅರೇಬಿಯಾಕ್ಕೆ (Saudi Arabia) ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ವಿಮಾನದ ಕಿಟಕಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ತಿರುವನಂತಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಈ ವಿಮಾನದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ, ಕೇವಲ ವಿಮಾನದ ಸಿಬ್ಬಂದಿಗಳು ಮಾತ್ರ ಇದ್ದರು.

ಶನಿವಾರ ಬೆಳಗ್ಗೆ 7.52ಕ್ಕೆ ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನ ತಿರುವನಂತಪುರ ವಿಮಾನ ನಿಲ್ದಾಣದಿಂದ ಟೇಕ್​ಆಫ್‌ ಆಗಿತ್ತು. ಆದರೆ, ವಿಮಾನ ಮೇಲಕ್ಕೇರಿದ ಬಳಿಕ ಕಿಟಕಿಯೊಂದರಲ್ಲಿ ಸಣ್ಣ ಬಿರುಕು ಮೂಡಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ವಿಮಾನ ಟೇಕ್​ಆಫ್ ಆದ 1 ಗಂಟೆಯೊಳಗೆ ಆ ವಿಮಾನ ಮತ್ತೆ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ. ಇಂದು ಬೆಳಗ್ಗೆ 8.50ಕ್ಕೆ ವಿಮಾನ ಮತ್ತೆ ವಾಪಾಸಾಗಿದೆ ಎಂದು ತಿರುವನಂತಪುರದ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಮಾರ್ಚ್ ತಿಂಗಳಿನಿಂದ ಕೋವಿಡ್ ಅಟ್ಟಹಾಸದಿಂದಾಗಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರಲಾಗಿದೆ. ಆಗಸ್ಟ್ 31ರವರೆಗೂ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ. ಕೇವಲ ಕಾರ್ಗೋ ವಿಮಾನಗಳು ಹಾಗೂ ಪೂರ್ವ ಅನುಮತಿ ಪಡೆದವರಿಗೆ ಮಾತ್ರ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಇಂದು ಕೇರಳದಿಂದ ಸೌದಿ ಅರೇಬಿಯಾಗೆ ಹೊರಟಿದ್ದ ವಿಮಾನದಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಈ ವಿಮಾನದಲ್ಲಿ ಸರಕುಗಳು ಮತ್ತು ಎಂಟು ಸಿಬ್ಬಂದಿ ಮಾತ್ರ ಇದ್ದರು.

ವಿಮಾನದ ಪೈಲಟ್‌ಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ವಿಮಾನ ಟೇಕ್‌ ಆಫ್‌ ಆಗುವುದಕ್ಕಿಂತ ಮೊದಲು ವಿಮಾನವನ್ನು ಪರಿಶೀಲನೆ ಮಾಡಿದಾಗ ಯಾವುದೇ ಬಿರುಕುಗಳು ಕಂಡುಬಂದಿರರಲಿಲ್ಲ. ಬಹುಶಃ ಟೇಕ್ ಆಫ್ ವೇಳೆ ಈ ಬಿರುಕು ಉಂಟಾಗಿರಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: International Flights: ಭಾರತದಲ್ಲಿ ಆ. 31ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ

(Air India Express flight makes emergency landing in Thiruvananthapuram Airport due to windshield crack)

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!