AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಹಾರುವಾಗ ಎಂಜಿನ್ ಆಯಿಲ್ ದಿಢೀರ್ ಕುಸಿತ; ಕೊಚ್ಚಿಗೆ ವಾಪಸ್ಸಾದ ಏರ್ ಇಂಡಿಯಾ ವಿಮಾನ; ತಪ್ಪಿದ ದೊಡ್ಡ ಅನಾಹುತ

ಕೊಚ್ಚಿಯಿಂದ ಅಬುಧಾಬಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನವೊಂದು ಭಾರೀ ಅಪಘಾತವಾಗುವುದರಿಂದ ತಪ್ಪಿಸಿಕೊಂಡಿದೆ. ವಿಮಾನ ಹಾರುವಾಗ ಎಂಜಿನ್ ಆಯಿಲ್​ನ ಮಟ್ಟ ದಿಢೀರ್ ಕುಸಿದಿದ್ದರಿಂದ ಪೈಲಟ್​ಗಳು ವಿಮಾನವನ್ನು ವಾಪಸ್ ತಿರುಗಿಸಿ ತಂದಿದ್ದಾರೆ. ಪೈಲಟ್​ಗಳ ಸಮಯಪ್ರಜ್ಞೆಯಿಂದ ದೊಡ್ಡ ವಿಮಾನ ಅಪಘಾತವೊಂದು ತಪ್ಪಿದೆ. ಪ್ರಯಾಣಿಕರಿಗೆ ಇದ್ಯಾವುದರ ಅರಿವೂ ಆಗದಂತೆ ಸುರಕ್ಷಿತವಾಗಿ ಲ್ಯಾಂಡ್ ಆಗುವಂತೆ ಮಾಡಿದ್ದಾರೆ.

ವಿಮಾನ ಹಾರುವಾಗ ಎಂಜಿನ್ ಆಯಿಲ್ ದಿಢೀರ್ ಕುಸಿತ; ಕೊಚ್ಚಿಗೆ ವಾಪಸ್ಸಾದ ಏರ್ ಇಂಡಿಯಾ ವಿಮಾನ; ತಪ್ಪಿದ ದೊಡ್ಡ ಅನಾಹುತ
ಏರ್ ಇಂಡಿಯಾ ವಿಮಾನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 07, 2026 | 2:04 PM

Share

ಕೊಚ್ಚಿ, ಸೆಪ್ಟೆಂಬರ್ 7: ಕೊಚ್ಚಿಯಿಂದ ಅಬುಧಾಬಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಬೋಯಿಂಗ್ 737 (IX 415) ವಿಮಾನದ ಎಂಜಿನ್‌ನಲ್ಲಿ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ, ವಿಮಾನವನ್ನು ತುರ್ತಾಗಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ತಂದು ಸುರಕ್ಷಿತವಾಗಿ ಇಳಿಸಲಾಗಿದೆ. ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ಸಮಯಪ್ರಜ್ಞೆ ಮತ್ತು ನಿರ್ಧಾರದಿಂದಾಗಿ ಭಾರಿ ಅಪಾಯವೊಂದು ತಪ್ಪಿದ್ದು, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ.

ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನವು ಕೊಚ್ಚಿಯಿಂದ ಹೊರಟು ಸುಮಾರು 50 ನಿಮಿಷಗಳ ನಂತರ, 36,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದಾಗ ಎಂಜಿನ್-1 (Engine 1) ರಲ್ಲಿದ್ದ ಆಯಿಲ್ (Engine Oil) ವೇಗವಾಗಿ ಕಡಿಮೆಯಾಗುತ್ತಿರುವುದು ಪೈಲಟ್‌ಗಳ ಗಮನಕ್ಕೆ ಬಂದಿದೆ. ಎಂಜಿನ್ ಆಯಿಲ್ ಪ್ರೆಶರ್ ‘ಡೆಂಜರ್ ಜೋನ್’ (Danger Zone) ತಲುಪುತ್ತಿದ್ದಂತೆ, ಮುನ್ನೆಚ್ಚರಿಕೆಯ ಕ್ರಮವಾಗಿ ಪೈಲಟ್‌ಗಳು ತಕ್ಷಣವೇ ಎಂಜಿನ್-1 ಅನ್ನು ಆಫ್ (Shut Down) ಮಾಡಿ, ವಿಮಾನವನ್ನು ಕೊಚ್ಚಿಯತ್ತ ಹಿಂತಿರುಗಿಸಿದರು.

ಇದನ್ನೂ ಓದಿ: ವೈದ್ಯರ ಮೇಲೆ ಹಲ್ಲೆ ಎಸಗುವ ರಾಜಕಾರಣಿಗಳನ್ನು ಸುಮ್ಮನೆ ಬಿಡಬಾರದು, ಕಸ್ಟಡಿಗೆ ತೆಗೆದುಕೊಳ್ಳಬೇಕು: ಸುಪ್ರೀಂಕೋರ್ಟ್

ವಿಮಾನವು ಒಂದೇ ಎಂಜಿನ್ ಬೆಂಬಲದೊಂದಿಗೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು.

ಪ್ರಯಾಣಿಕರಿಗೆ ಅರಿವಿರಲಿಲ್ಲ: ಗಾಬರಿ ಉಂಟಾಗದಂತೆ ಪೈಲಟ್‌ಗಳು ಸನ್ನಿವೇಶವನ್ನು ಸಮರ್ಥವಾಗಿ ನಿಭಾಯಿಸಿದ್ದು, ವಿಮಾನ ಸುರಕ್ಷಿತವಾಗಿ ಇಳಿಯುವವರೆಗೂ ತಾಂತ್ರಿಕ ಸಮಸ್ಯೆಯ ಗಂಭೀರತೆಯ ಕುರಿತು ಪ್ರಯಾಣಿಕರಿಗೆ ಸುಳಿವು ಸಿಕ್ಕಿರಲಿಲ್ಲ.

ಇದನ್ನೂ ಓದಿ: ‘ಪ್ರತಿಯೊಬ್ಬರ ಮೇಲಿನ ಸಾತ್ವಿಕ ಪ್ರೇಮವೇ ಹಿಂದೂವಿನ ಮೂಲ ಸ್ವಭಾವ’: ಲಂಡನ್​ನಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ಸಂಸ್ಥೆಯ ತಾಂತ್ರಿಕ ತಂಡವು ವಿಮಾನದ ಎಂಜಿನ್‌ನಲ್ಲಿ ಉಂಟಾದ ತಾಂತ್ರಿಕ ದೋಷ ಹಾಗೂ ಎಣ್ಣೆ ಸೋರಿಕೆಗೆ ಕಾರಣವೇನು ಎಂಬುದರ ಕುರಿತು ವಿವರವಾದ ತನಿಖೆ ಆರಂಭಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Mon, 7 September 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ