Air India Express: ಯುಎಇಯಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕೊವಿಡ್ ಮಾರ್ಗಸೂಚಿ ಘೋಷಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್

ಯುಎಇಯಿಂದ ಭಾರತಕ್ಕೆ ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್‌ಗಳ ಬಳಕೆ ಮಾಡಬೇಕು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Air India Express: ಯುಎಇಯಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕೊವಿಡ್ ಮಾರ್ಗಸೂಚಿ ಘೋಷಿಸಿದ ಏರ್ ಇಂಡಿಯಾ ಎಕ್ಸ್​ಪ್ರೆಸ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 28, 2022 | 9:08 AM

ಕೊಚ್ಚಿ: ಯುನೈಟೆಡ್ ಅರಬ್ ಎಮಿರೇಟ್ಸ್ (UAE)ನಿಂದ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ಯಾವ ರೀತಿಯ ಕೊವಿಡ್ ನಿಯಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಯುಎಇಯಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರು ತಮ್ಮ ದೇಶದಲ್ಲಿ ಕೋವಿಡ್ ಲಸಿಕೆ (Covid Vaccine) ಹಾಕಿಸಿಕೊಂಡಿರುವ ಪ್ರಮಾಣಪತ್ರವನ್ನು ಹೊಂದಿರಬೇಕು. ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್‌ಗಳ ಬಳಕೆ ಮಾಡಬೇಕು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

“ಎಲ್ಲಾ ಪ್ರಯಾಣಿಕರು ತಮ್ಮ ದೇಶದಲ್ಲಿ ಕೊವಿಡ್-19 ವಿರುದ್ಧ ವ್ಯಾಕ್ಸಿನೇಷನ್‌ನ ಅನುಮೋದಿತ ಪ್ರಾಥಮಿಕ ವೇಳಾಪಟ್ಟಿಯ ಪ್ರಕಾರ ಸಂಪೂರ್ಣವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲಾ ಅತಿಥಿಗಳು ಮೇಲಾಗಿ ಮಾಸ್ಕ್​ಗಳನ್ನು ಬಳಸಬೇಕು ಮತ್ತು ವಿಮಾನಗಳಲ್ಲಿ ಸಾಮಾಜಿಕ ಅಂತರವನ್ನು ಅನುಸರಿಸಬೇಕು” ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: Omicron BF.7: ವಿದೇಶದಿಂದ ಬಂದಿದ್ದ ನಾಲ್ವರಿಗೆ ಕೊವಿಡ್ ದೃಢ, ಬೆಂಗಳೂರು ಆಸ್ಪತ್ರೆಗಳಲ್ಲಿ ಇಂದಿನಿಂದ ಮಾಕ್ ಡ್ರಿಲ್

ಕೇರಳದ ಕೊಚ್ಚಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಭಾರತದ ಮೊದಲ ಅಂತಾರಾಷ್ಟ್ರೀಯ ಬಜೆಟ್ ವಾಹಕವಾಗಿದೆ. ಇದು ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾಕ್ಕೆ ಸಂಪರ್ಕವನ್ನು ನೀಡುತ್ತದೆ. ಇದನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಲಿಮಿಟೆಡ್ ನಡೆಸುತ್ತದೆ. ಆದರೂ 12 ವರ್ಷದೊಳಗಿನ ಮಕ್ಕಳಿಗೆ ರ್ಯಾಂಡಮ್ ಪರೀಕ್ಷೆಯ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳು ಹೇಳಿವೆ.

ಇದನ್ನೂ ಓದಿ: ಚೀನಾದಲ್ಲಿ ಕೊವಿಡ್ ನಾವ್ ಬಿಟ್ಟಿದೀವಾ ಎಂದು ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟ ಸಚಿವ ಅಶ್ವಥ್ ನಾರಾಯಣ್

“12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಗಮನದ ನಂತರದ ರ್ಯಾಂಡಮ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದರೂ ವಿಮಾನ ನಿಲ್ದಾಣದಲ್ಲಿ ಆಗಮನದ ಸಮಯದಲ್ಲಿ ಆ ಮಕ್ಕಳಿಗೆ COVID-19 ರೋಗಲಕ್ಷಣ ಕಂಡುಬಂದರೆ ಅವರು ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಪ್ರೋಟೋಕಾಲ್ ಪ್ರಕಾರ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ” ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ