ಮುಂಬೈ: ಏರ್​ ಇಂಡಿಯಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಹಿಳೆ

ಮುಂಬೈ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಏರ್​ ಇಂಡಿಯಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಡ್ಯೂಟಿ ಮ್ಯಾನೇಜರ್ ಕೂಡಲೇ ಸಿಐಎಸ್‌ಎಫ್‌ಗೆ ಸೂಚಿಸಿದರು ಮತ್ತು ಪ್ರಯಾಣಿಕರನ್ನು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ ಪ್ರಕಾರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಮುಂಬೈ: ಏರ್​ ಇಂಡಿಯಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಹಿಳೆ
ಏರ್​ಪೋರ್ಟ್​
Image Credit source: Wikivoyage

Updated on: Sep 04, 2024 | 8:27 AM

ಮುಂಬೈ ವಿಮಾನ ನಿಲ್ದಾಣದ ಏರ್ ಇಂಡಿಯಾ ಎಕ್ಸ್ ಪ್ರೆಸ್ (ಎಐ ಎಕ್ಸ್ ಪ್ರೆಸ್) ಕೌಂಟರ್ ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿ ಗೊಂದಲ ಉಂಟಾಯಿತು.

ಇದಾದ ನಂತರ ಭದ್ರತಾ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮಹಿಳೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆಪ್ಟೆಂಬರ್ 1 ರಂದು, ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಏರ್​ ಇಂಡಿಯಾ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿದ್ದಾರೆ.

ಡ್ಯೂಟಿ ಮ್ಯಾನೇಜರ್ ಕೂಡಲೇ ಸಿಐಎಸ್‌ಎಫ್‌ಗೆ ಸೂಚಿಸಿದರು ಮತ್ತು ಪ್ರಯಾಣಿಕರನ್ನು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ ಪ್ರಕಾರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಬೋರ್ಡಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕರು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು.
ಸ್ವಲ್ಪ ಸಮಯ ಕಾಯುವಂತೆ ಕೇಳಿದ್ದಕ್ಕೆ ಆಕ್ರೋಶಗೊಂಡ ಮಹಿಳೆ ನಿಂದಿಸಲು ಶುರು ಮಾಡಿದ್ದರು.

ಮತ್ತಷ್ಟು ಓದಿ: ಏರ್​ಇಂಡಿಯಾ ವಿಮಾನದಿಂದ ಕೆಳಗೆ ಹಾರುತ್ತೇನೆ ಎಂದು ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ

ವಿಮಾನಯಾನ ಸಂಸ್ಥೆಯು ಸಂಬಂಧಪಟ್ಟ ವ್ಯಕ್ತಿಯ ಮೇಲೆ 30 ದಿನಗಳವರೆಗೆ ತಕ್ಷಣದ ನಿಷೇಧವನ್ನು ವಿಧಿಸಬಹುದು ಮತ್ತು ನಿಯಂತ್ರಕರು ನಿರ್ವಹಿಸುವ ನೋ-ಫ್ಲೈ ಪಟ್ಟಿಗೆ ಅವರನ್ನು ಸೇರಿಸಲು ಡಿಜಿಸಿಎಗೆ ತಿಳಿಸಬಹುದು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ