ಮಹಾರಾಷ್ಟ್ರ: ಪುಣೆ ವಿಮಾನ ನಿಲ್ದಾಣದಲ್ಲಿ ಟಗ್ ಟ್ರ್ಯಾಕ್ಟರ್‌ಗೆ ಏರ್ ಇಂಡಿಯಾ ವಿಮಾನ ಡಿಕ್ಕಿ

ಪುಣೆಯ ವಿಮಾನ ನಿಲ್ದಾಣದ ರನ್​ವೇಯಲ್ಲಿ ಏರ್​ ಇಂಡಿಯಾ ವಿಮಾನವು ಟಗ್ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿ 180 ಪ್ರಯಾಣಿಕರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹಾರಾಷ್ಟ್ರ: ಪುಣೆ ವಿಮಾನ ನಿಲ್ದಾಣದಲ್ಲಿ ಟಗ್ ಟ್ರ್ಯಾಕ್ಟರ್‌ಗೆ ಏರ್ ಇಂಡಿಯಾ ವಿಮಾನ ಡಿಕ್ಕಿ
ಏರ್​ ಇಂಡಿಯಾ ವಿಮಾನ (ಪ್ರಾತಿನಿಧಿಕ ಚಿತ್ರ)Image Credit source: Amarujala.com
Follow us
ನಯನಾ ರಾಜೀವ್
|

Updated on:May 17, 2024 | 11:33 AM

ಪುಣೆಯ ವಿಮಾನ ನಿಲ್ದಾಣದ ರನ್​ವೇಯಲ್ಲಿ ಏರ್​ ಇಂಡಿಯಾ ವಿಮಾನ(Air India Flight)ವು ಟಗ್ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿ 180 ಪ್ರಯಾಣಿಕರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಯಾಣಿಕರು, ಪೈಲಟ್ ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ, ಆದರೆ ವಿಮಾನವು ಹಾನಿಗೊಳಗಾಗಿದೆ. ಘಟನೆಯ ಕುರಿತು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್‌ಐಗೆ ಮಾಹಿತಿ ನೀಡಿದ್ದಾರೆ. ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇಯಲ್ಲಿ ಟಗ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ.

ಘರ್ಷಣೆ ಸಂಭವಿಸಿದ ತಕ್ಷಣ, ಪ್ರಯಾಣಿಕರಲ್ಲಿ ಭೀತಿಯನ್ನು ಸೃಷ್ಟಿಸಿತ್ತು, ಮಾನದ ಮುಂಭಾಗ ಮತ್ತು ಲ್ಯಾಂಡಿಂಗ್ ಗೇರ್ ಬಳಿಯ ಟೈರ್‌ಗೆ ಹಾನಿಯಾಗಿದೆ. ಬಿಗಿ ಭದ್ರತೆಯ ನಡುವೆ ಪ್ರಯಾಣಿಕರನ್ನು ಎಚ್ಚರಿಕೆಯಿಂದ ವಿಮಾನದಿಂದ ಕೆಳಗಿಳಿಸಲಾಗಿದೆ. ಇದಾದ ಬಳಿಕ ವಿಮಾನವನ್ನು ದುರಸ್ತಿಗಾಗಿ ಕಾರ್ಯಾಗಾರಕ್ಕೆ ಕಳುಹಿಸಲಾಗಿತ್ತು.

ನಿನ್ನೆ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇದೆ ಎಂಬ ವದಂತಿ ಹಬ್ಬಿತ್ತು. ಬಾಂಬ್ ಮತ್ತು ಶ್ವಾನ ದಳದ ತಪಾಸಣೆಯಲ್ಲಿ ಅನುಮಾನಾಸ್ಪದ ಏನೂ ಪತ್ತೆಯಾಗದಿದ್ದರೂ, ವದಂತಿ ಹರಡಿರುವುದು ವಿಮಾನ ನಿಲ್ದಾಣದ ಅಧಿಕಾರಿಗಳು, ಪ್ರಯಾಣಿಕರು ಮತ್ತು ಸಿಬ್ಬಂದಿಗಳಲ್ಲಿ ಭೀತಿಯನ್ನು ಸೃಷ್ಟಿಸಿತ್ತು.

ಮತ್ತಷ್ಟು ಓದಿ: ಏರ್​ ಇಂಡಿಯಾ ವಿಮಾನದ ಟಾಯ್ಲೆಟ್​ನ ಟಿಶ್ಯೂ ಪೇಪರ್​ನಲ್ಲಿತ್ತು ಬಾಂಬ್​ ಬೆದರಿಕೆ ಸಂದೇಶ

ಏರ್ ಇಂಡಿಯಾ ವಿಮಾನ ಗುಜರಾತ್ ನ ವಡೋದರಾಕ್ಕೆ ಟೇಕ್ ಆಫ್ ಆಗಬೇಕಿತ್ತು. ಪ್ರಯಾಣಿಕರೊಬ್ಬರಿಗೆ ವಿಮಾನದ ಶೌಚಾಲಯದಲ್ಲಿ ಟಿಶ್ಯೂ ಪೇಪರ್ ಸಿಕ್ಕಿದ್ದು, ಅದರಲ್ಲಿ ಬಾಂಬ್​ ಬೆದರಿಕೆ ಸಂದೇಶ ಇತ್ತು.

ಪ್ರಯಾಣಿಕರು ಆ ಟಿಶ್ಯೂ ಪೇಪರ್ ಅನ್ನು ವಿಮಾನದ ಸಿಬ್ಬಂದಿಗೆ ನೀಡಿದರು ಮತ್ತು ನಂತರ ವಿಮಾನದ ಟೇಕ್ ಆಫ್ ವಿಳಂಬವಾಯಿತು. ಪ್ರಯಾಣಿಕರನ್ನು ವಿಮಾನದಿಂದ ಇಳಿಸಿದ ನಂತರ ಸಂಪೂರ್ಣ ವಿಮಾನ ಮತ್ತು ಪ್ರಯಾಣಿಕರ ಲಗೇಜ್‌ಗಳನ್ನು ಪರಿಶೀಲಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:26 am, Fri, 17 May 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್