Air India: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ ಏರ್ ಇಂಡಿಯಾ ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ, ರಷ್ಯಾದಲ್ಲಿ ಲ್ಯಾಂಡಿಂಗ್

|

Updated on: Jun 06, 2023 | 6:11 PM

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ್ದ ​​​ಏರ್ ಇಂಡಿಯಾ (Air India) ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ರಷ್ಯಾದ ಮಗದನ್‌ಗೆ ತಿರುಗಿಸಲಾಗಿದೆ.

Air India: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ ಏರ್ ಇಂಡಿಯಾ ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ, ರಷ್ಯಾದಲ್ಲಿ ಲ್ಯಾಂಡಿಂಗ್
ಏರ್ ಇಂಡಿಯಾ
Follow us on

ಸ್ಯಾನ್ ಫ್ರಾನ್ಸಿಸ್ಕೋ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸಿದ್ದ ​​​ಏರ್ ಇಂಡಿಯಾ (Air India) ವಿಮಾನದ ಎಂಜಿನ್​​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ರಷ್ಯಾದ ಮಗದನ್‌ಗೆ ತಿರುಗಿಸಲಾಗಿದೆ. ರಷ್ಯಾದಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI173 ಎಂಜಿನ್‌ನಲ್ಲಿ ತಾಂತ್ರಿಕ ದೋಷವನ್ನು ಪತ್ತೆ ಮಾಡಿ ಅಭಿವೃದ್ಧಿಪಡಿಸಲಾಗಿದೆ. 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ಗಮ್ಯಸ್ಥಾನಗಳಿಗೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಈಗಾಗಲೇ ವಿಮಾನವನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.