ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶ
ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಗುಜರಾತಿನಲ್ಲಿ ನಡೆದ ವಿಮಾನ ಪತನದ ನಂತರ ಈ ಬೆದರಿಕೆ ಬಂದಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ದೆಹಲಿ, ಜೂ.13: ಥಾಯ್ಲೆಂಡ್‌ನ ಫುಕೆಟ್ (Thailand) ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (Air India flight ) ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಇದೀಗ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ. ಅಹಮದಾಬಾದ್ ವಿಮಾನ ದುರಂತ ಇನ್ನು ಮಾಸಿಲ್ಲ, ಈ ಹೊತ್ತಿನಲ್ಲೇ ಮತ್ತೊಂದು ಬೆದರಿಕೆ ಕಾರಣವಾಗಿದೆ. ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇದೀಗ ಈ ವಿಚಾರ ಸಾರ್ವಜನಿಕರಲ್ಲಿ ಹಾಗೂ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.
ಇದೀಗ ಬಾಂಬ್ ಬೆದರಿಕೆಯ ನಂತರ ಏರ್ ಇಂಡಿಯಾ ವಿಮಾನ ಸಿಬ್ಬಂದಿಗಳು ವಿಮಾನ AI 379ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರದುಕೊಂಡು ಬಂದಿದ್ದಾರೆ ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಪ್ರಾಥಮಿಕ ಶೋಧದ ನಂತರ ಸಂಬಂಧಪಟ್ಟ ಏರ್ ಇಂಡಿಯಾ ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ವಿಮಾನದಲ್ಲಿ 156 ಪ್ರಯಾಣಿಕರಿದ್ದರು. ಈ ವೇಳೆ ಯಾರು ಭಯಪಡಬೇಡಿ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಪ್ರಯಾಣಿಕರಿಗೂ ಹೇಳಿದ್ದಾರೆ.
ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ: ಕೊನೆಯ ಕ್ಷಣದಲ್ಲಿ ಕೈಕೊಟ್ಟ ನೊಗ ಪಂಪರ್, ಲಿಫ್ಟ್ ಗೇರ್
ANI ಪೋಸ್ಟ್ ಇಲ್ಲಿದೆ ನೋಡಿ:
Reuters reports that, “an Air India flight from Thailand’s Phuket to India’s capital New Delhi received a bomb threat on Friday and made an emergency landing on the island, airport authorities said.” pic.twitter.com/iMwR2DOTci
— ANI (@ANI) June 13, 2025
ಶುಕ್ರವಾರ ಬೆಳಿಗ್ಗೆ 9:30 ಕ್ಕೆ (0230) ಫುಕೆಟ್ ವಿಮಾನ ನಿಲ್ದಾಣದಿಂದ ಭಾರತದ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ್ಟಿತ್ತು. ಅಂಡಮಾನ್ ಸಮುದ್ರದ ಸುತ್ತಲೂ ವಿಶಾಲವಾದ ಲೂಪ್ ಮಾಡಿ ಥಾಯ್ ದ್ವೀಪದಲ್ಲಿ ಮತ್ತೆ ಇಳಿಯಿತು ಎಂದು ಫ್ಲೈಟ್ ಟ್ರ್ಯಾಕರ್ ಫ್ಲೈಟ್‌ರಾಡರ್ 24 ತಿಳಿಸಿದೆ. ಬಾಂಬ್ ಬೆದರಿಕೆಯ ಕುರಿತು AOT ಯಾವುದೇ ವಿವರಗಳನ್ನು ನೀಡಿಲ್ಲ ಎಂದು ಹೇಳಿದೆ.
ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:49 am, Fri, 13 June 25




