AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಹಾಗೂ ಮಹಿಳೆಯ ನಡುವೆ ನಡೆದ ವಾಟ್ಸ್​ಆ್ಯಪ್ ಸಂಭಾಷಣೆಯಲ್ಲಿ ಏನಿದೆ?

ಏರ್​ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಆರೋಪಿ ಉದ್ಯಮಿ ಶಂಕರ್ ಮಿಶ್ರಾ ಎಂಬುವವರನ್ನು ಪೊಲೀಸರು ಹುಡುಕುತ್ತಿದ್ದಾರೆ.

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿ ಹಾಗೂ ಮಹಿಳೆಯ ನಡುವೆ ನಡೆದ ವಾಟ್ಸ್​ಆ್ಯಪ್ ಸಂಭಾಷಣೆಯಲ್ಲಿ ಏನಿದೆ?
ಏರ್ ಇಂಡಿಯಾ
TV9 Web
| Edited By: |

Updated on: Jan 06, 2023 | 6:30 PM

Share

ಏರ್​ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಆರೋಪಿ ಉದ್ಯಮಿ ಶಂಕರ್ ಮಿಶ್ರಾ ಎಂಬುವವರನ್ನು ಪೊಲೀಸರು ಹುಡುಕುತ್ತಿದ್ದಾರೆ.ಇದೀಗ ಮಹಿಳೆ ಹಾಗೂ ಆರೋಪಿಯ ನಡುವೆ ನಡೆದ ವಾಟ್ಸ್​ಆ್ಯಪ್  ಸಂಭಾಷಣೆ ಇದೀಗ ಬಹಿರಂಗಗೊಂಡಿದೆ. ಶಂಕರ್​ನನ್ನು ಕ್ಷಮಿಸಿದ್ದೇನೆ, ದೂರು ದಾಖಲಿಸುವ ಉದ್ದೇಶ ನನಗಿಲ್ಲ ಎನ್ನುವ ರೀತಿಯಲ್ಲಿ ಸಂಭಾಷಣೆ ನಡೆದಿದೆ. ಆರೋಪಿ ಮತ್ತು ಮಹಿಳೆಯ ನಡುವಿನ ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ, ಆರೋಪಿ ನವೆಂಬರ್ 28 ರಂದು ಬಟ್ಟೆ ಮತ್ತು ಬ್ಯಾಗ್‌ಗಳನ್ನು ಸ್ವಚ್ಛಗೊಳಿಸಿದ್ದಾರೆ ಮತ್ತು ನವೆಂಬರ್ 30 ರಂದು ಅದನ್ನು ತಲುಪಿಸಿದ್ದಾರೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಮಹಿಳೆ ಆಪಾದಿತನ ಕೃತ್ಯವನ್ನು ಸ್ಪಷ್ಟವಾಗಿ ಕ್ಷಮಿಸಿದ್ದಾರೆ ಮತ್ತು ದೂರು ದಾಖಲಿಸುವ ಉದ್ದೇಶವನ್ನು ಹೊಂದಿಲ್ಲ. ಮಹಿಳೆ ಏರ್ ಇಂಡಿಯಾಕ್ಕೆ ಪರಿಹಾರಕ್ಕಾಗಿ ಡಿಸೆಂಬರ್ 20 ರಂದು ದೂರು ನೀಡಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಮಿಶ್ರಾ ಅವರು ನವೆಂಬರ್ 28 ರಂದು ಇಬ್ಬರ ನಡುವೆ ಒಪ್ಪಂದ ಮಾಡಿಕೊಂಡು PayTM ನಲ್ಲಿ ಒಪ್ಪಂದದಂತೆ ಪರಿಹಾರವನ್ನು ಪಾವತಿಸಿದ್ದಾರೆ. ಘಟನೆಗೆ ಯಾವುದೇ ಪ್ರತ್ಯಕ್ಷದರ್ಶಿಗಳಿಲ್ಲ ಮತ್ತು ಕಕ್ಷಿದಾರರ ನಡುವಿನ ಒಪ್ಪಂದವು ಕ್ಯಾಬಿನ್ ಸಿಬ್ಬಂದಿಯ ಹೇಳಿಕೆಗಳಿಂದ ದೃಢೀಕರಿಸಲ್ಪಟ್ಟಿದೆ. ಶಂಕರ್ ಮಿಶ್ರಾ ಅವರು ತಮ್ಮ ವಕೀಲರಾದ ಇಶಾನಿ ಶರ್ಮಾ ಮತ್ತು ಅಕ್ಷತ್ ಬಾಜ್‌ಪೇಯ್ ಮೂಲಕ ಹೇಳಿಕೆಯೊಂದರಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ.

ಮತ್ತಷ್ಟು ಓದಿ: Air India ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಮತ್ತೊಂದು ಘಟನೆ ಬೆಳಕಿಗೆ

ಆರೋಪಿಯು ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದು, ತನಿಖಾ ಪ್ರಕ್ರಿಯೆಗೆ ಸಹಕರಿಸಲಿದ್ದಾರೆ ಹೇಳಿಕೆಯಲ್ಲಿ ತಿಳಿಸಲಾಗಿದೆ. ನವೆಂಬರ್ 26 ರಂದು AI 102 ಬೋರ್ಡ್‌ನಲ್ಲಿ ಮಧ್ಯಾಹ್ನದ ಊಟದ ಬಳಿಕ ದೀಪಗಳನ್ನು ಆಫ್ ಮಾಡಿದ ಸ್ವಲ್ಪ ಸಮಯದ ನಂತರ, ಬಿಸಿನೆಸ್ ಕ್ಲಾಸ್ ಸೀಟ್ 8A ನಲ್ಲಿ ಕುಳಿತಿದ್ದ ಶಂಕರ್ ಮಿಶ್ರಾ ಮಹಿಳೆಯೊಬ್ಬಳ ಸೀಟ್ ಬಳಿ ಹೋಗಿ ಆಕೆಯ ಮೇಲೆ ಮೂತ್ರ ವಿಸರ್ಜಿಸಿದ್ದ.  ಇದೀಗ ಆತ ತಲೆಮರೆಸಿಕೊಂಡಿದ್ದು, ಈ ವಿಚಾರವಾಗಿ ಪೊಲೀಸರು ಎರಡು ತಂಡಗಳನ್ನು ರಚನೆ ಮಾಡಿದ್ದು ಒಂದು ತಂಡ ಬೆಂಗಳೂರಿನಲ್ಲಿದ್ದರೆ ಮತ್ತೊಂದು ತಂಡ ಮುಂಬೈನಲ್ಲಿ ಬೀಡುಬಿಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?