Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ವ್ಯಕ್ತಿ ಶಂಕರ್ ಮಿಶ್ರಾ ಅವರನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಇಂದು ಬಂಧಿಸಿದ್ದಾರೆ.
ದೆಹಲಿ: ಏರ್ ಇಂಡಿಯಾ (Air India) ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ವ್ಯಕ್ತಿ ಶಂಕರ್ ಮಿಶ್ರಾ ಅವರನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಇಂದು ಬಂಧಿಸಿದ್ದಾರೆ. ಆತ ಪರಾರಿಯಾಗಿದ್ದು, ಆತನ ಪತ್ತೆಗೆ ಲುಕ್‌ಔಟ್ ನೋಟಿಸ್ ಅಥವಾ ಏರ್‌ಪೋರ್ಟ್ ಅಲರ್ಟ್ ಹಾಕಲಾಗಿತ್ತು. ನವೆಂಬರ್ 26ರಂದು ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ, ಶಂಕರ್ ಮಿಶ್ರಾ ಅವರು ತಮ್ಮ ಪ್ಯಾಂಟ್ ಅನ್ನು ಬಿಚ್ಚಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರ ನೀಡಿದ್ದಾಳೆ. ನನಗೆ ಕುಟುಂಬವಿದೆ ದಯವಿಟ್ಟು ಪೊಲೀಸರಿಗೆ ದೂರು ನೀಡದಂತೆ ಮಹಿಳೆಯನ್ನು ಬೇಡಿಕೊಂಡಿದ್ದಾನೆ.
Air India passenger urinating case of Nov 26 | Accused S Mishra has been arrested from Bengaluru, says Delhi Police pic.twitter.com/sPJJrVlO9j
— ANI (@ANI) January 7, 2023
ಶಂಕರ್ ಮಿಶ್ರಾ ಅವರ ವಕೀಲರು ಅವರು ದೂರು ದಾಖಲಿಸಿದ ಮಹಿಳೆಯೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ 15,000 ರೂ. ಪರಿಹಾರವನ್ನು ಪಾವತಿಸಿದ್ದಾರೆ ಮತ್ತು ತನ್ನಿಂದ ಆಗಿರುವ ತಪ್ಪಿಗೆ ಅವರ ವಸ್ತುಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಹೇಳಿದರು. ಮಹಿಳೆಯ ಮಗಳು ಒಂದು ತಿಂಗಳ ನಂತರ ಹಣವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು ಎಂದು ವರದಿಯಾಗಿದೆ.
ಇದನ್ನು ಓದಿ:Air India Flight: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ವಿಮಾನ ನಿರ್ಬಂಧ
ಈ ಮಧ್ಯೆ ಶಂಕರ್ನನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ. ವೆಲ್ಸ್ ಫಾರ್ಗೋ ಉದ್ಯೋಗಿಗಳು ವೃತ್ತಿಪರ ಹಾಗೂ ವೈಯಕ್ತಿಕವಾಗಿ ಉತ್ತಮ ನಡವಳಿಕೆಯನ್ನು ಹೊಂದಿದ್ದಾರೆ, ಇವರ ಮೇಲಿನ ಆರೋಪಗಳು ಕಂಪನಿಗೆ ಕೆಟ್ಟ ಹೆಸರನ್ನು ತಂದಿದೆ ಹೀಗಾಗಿ ಅವರನ್ನು ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:19 am, Sat, 7 January 23