19 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನ ಏಕಾಏಕಿ ಕೆಳಗೆ ಬಂದೇ ಬಿಡ್ತು, ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ಘರ್ಷಣೆ

ಏರ್​ ಇಂಡಿಯಾ ಹಾಗೂ ನೇಪಾಳ ಏರ್​ಲೈನ್ಸ್​ ವಿಮಾನ ಪರಸ್ಪರ ಡಿಕ್ಕಿಯಾಗುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಳಗ್ಗೆ ಕಠ್ಮಂಡುವಿನಿಂದ ಮಲೇಷ್ಯಾದ ಕೌಲಾಲಂಪುರಕ್ಕೆ ತೆರಳುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನ ಮತ್ತು ಕಠ್ಮಂಡುವಿನಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಗಳು ಡಿಕ್ಕಿ ಹೊಡೆಯುವಷ್ಟು ಹತ್ತಿರ ತಲುಪಿದ್ದವು.

19 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನ ಏಕಾಏಕಿ ಕೆಳಗೆ ಬಂದೇ ಬಿಡ್ತು, ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ಘರ್ಷಣೆ
ವಿಮಾನ
Follow us
ನಯನಾ ರಾಜೀವ್
|

Updated on:Mar 27, 2023 | 9:17 AM

ಏರ್​ ಇಂಡಿಯಾ ಹಾಗೂ ನೇಪಾಳ ಏರ್​ಲೈನ್ಸ್​ ವಿಮಾನ ಪರಸ್ಪರ ಡಿಕ್ಕಿಯಾಗುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಳಗ್ಗೆ ಕಠ್ಮಂಡುವಿನಿಂದ ಮಲೇಷ್ಯಾದ ಕೌಲಾಲಂಪುರಕ್ಕೆ ತೆರಳುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನ ಮತ್ತು ಕಠ್ಮಂಡುವಿನಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಗಳು ಡಿಕ್ಕಿ ಹೊಡೆಯುವಷ್ಟು ಹತ್ತಿರ ತಲುಪಿದ್ದವು.

ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎಎನ್) ಡಿಜಿಸಿಎಗೆ ಪತ್ರ ಬರೆದು ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದೆ. ಸಿಎಎಎನ್ ವಕ್ತಾರ ಜಗನ್ನಾಥ್ ನಿರೋಲಾ ಮಾತನಾಡಿ, ನೇಪಾಳದ ವಾಯುಯಾನ ನಿಯಂತ್ರಕವು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಅದರ ಮಾಹಿತಿಯನ್ನು ಹಂಚಿಕೊಳ್ಳಲು ಭಾರತೀಯ ನಿಯಂತ್ರಕರನ್ನು ಕೇಳಿದೆ.

ಏತನ್ಮಧ್ಯೆ, ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪದ ಮೇಲೆ ಸಿಎಎಎನ್ ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದ ಮೂವರು ಉದ್ಯೋಗಿಗಳನ್ನು ಅಮಾನತುಗೊಳಿಸಿದೆ. ಅಧಿಕಾರಿಯ ಪ್ರಕಾರ, ಭಾರತೀಯ ಪೈಲಟ್‌ಗಳು ನೇಪಾಳಿ ಅಧಿಕಾರಿಗಳ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ.

ಮತ್ತಷ್ಟು ಓದಿ: Nepal Aircraft Crash: ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ಪತನ

ನವದೆಹಲಿಯಿಂದ 19,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ಏರ್ ಇಂಡಿಯಾ ವಿಮಾನವು ಶುಕ್ರವಾರ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ಹಠಾತ್ 15,000 ಅಡಿ ಕೆಳಗೆ ಬಂದುಬಿಟ್ಟಿತ್ತು. ಇದು ಕೌಲಾಲಂಪುರ್‌ನಿಂದ ಕಠ್ಮಂಡುವಿಗೆ ಬರುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನಕ್ಕೆ ಬಹಳ ಹತ್ತಿರ ಬಂದಂತಾಗಿತ್ತು ಮತ್ತು ನೇಪಾಳ ಏರ್‌ಲೈನ್ಸ್ ಪೈಲಟ್‌ಗಳು ತಮ್ಮ ವಿಮಾನವನ್ನು 7,000 ಅಡಿಗಳಿಗೆ ಇಳಿಸಿ ಅಪಘಾತ ತಪ್ಪಿಸಿದ್ದರು.

ನೇಪಾಳ ಏರ್‌ಲೈನ್ಸ್ ವಿಮಾನವು 15,000 ಅಡಿ ಎತ್ತರದಲ್ಲಿತ್ತು, ಏರ್ ಇಂಡಿಯಾ ವಿಮಾನವು ಅದೇ ಎತ್ತರಕ್ಕೆ ಇದ್ದಕ್ಕಿದ್ದಂತೆ ಬಂದಿತ್ತು.

ಕಾಕ್‌ಪಿಟ್‌ಗಳಲ್ಲಿ ಸ್ವಯಂಚಾಲಿತವಾಗಿ ಅಲರ್ಟ್ ಸದ್ದು ಮಾಡಿದ್ದು, ಸಂಭಾವ್ಯ ಮಾರಣಾಂತಿಕ ಅಪಘಾತವನ್ನು ತಪ್ಪಿಸಲಾಗಿದೆ ಎಂದು ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎಎನ್) ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 am, Mon, 27 March 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್