Air India Flight: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಕೆಲಸದಿಂದ ವಜಾ

| Updated By: ರಮೇಶ್ ಬಿ. ಜವಳಗೇರಾ

Updated on: Jan 06, 2023 | 7:36 PM

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿ ಶಂಕರ್​ನನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ. ವೆಲ್ಸ್​ ಫಾರ್ಗೋ ಉದ್ಯೋಗಿಗಳು ವೃತ್ತಿಪರ ಹಾಗೂ ವೈಯಕ್ತಿಕವಾಗಿ ಉತ್ತಮ ನಡವಳಿಕೆಯನ್ನು ಹೊಂದಿದ್ದಾರೆ,

Air India Flight: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಕೆಲಸದಿಂದ ವಜಾ
ಶಂಕರ್ ಮಿಶ್ರಾ
Follow us on

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿ ಶಂಕರ್​ನನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ. ವೆಲ್ಸ್​ ಫಾರ್ಗೋ ಉದ್ಯೋಗಿಗಳು ವೃತ್ತಿಪರ ಹಾಗೂ ವೈಯಕ್ತಿಕವಾಗಿ ಉತ್ತಮ ನಡವಳಿಕೆಯನ್ನು ಹೊಂದಿದ್ದಾರೆ, ಇವರ ಮೇಲಿನ ಆರೋಪಗಳು ಕಂಪನಿಗೆ ಕೆಟ್ಟ ಹೆಸರನ್ನು ತಂದಿದೆ ಹೀಗಾಗಿ ಅವರನ್ನು ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಶಂಕರ್ ನಾಪತ್ತೆಯಾಗಿದ್ದು ಆತನನ್ನು ಹುಡುಕಲು ಲುಕ್​ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಪೊಲೀಸರು ಎರಡು ತಂಡ ರಚಿಸಿ ಆತನ ಹುಡುಕಾಟದಲ್ಲಿದ್ದಾರೆ. ನವೆಂಬರ್ 26 ರಂದು ಆರೋಪಿ ಶಂಕರ್ ನ್ಯೂಯಾರ್ಕ್​-ದೆಹಲಿ ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಬಳಿಕ ತನ್ನ ಮೇಲೆ ದೂರು ನೀಡಬೇಡಿ, ನನಗೆ ಹೆಂಡತಿ, ಮಕ್ಕಳು ಇದ್ದಾರೆ ಅವರ ಮೇಲೆ  ಪರಿಣಾಮ ಬೀರುತ್ತೆ ಎಂದು ಬೇಡಿಕೊಂಡಿದ್ದ.

ಮತ್ತಷ್ಟು ಓದಿ: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನನಗೆ ಕುಟುಂಬ ಇದೆ ದೂರು ಕೊಡಬೇಡಿ ಎಂದು ಆರೋಪಿ ಬೇಡಿಕೊಂಡಿದ್ದ

ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ-ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಹೊತ್ತಿರುವ ಶಂಕರ್ ಮಿಶ್ರಾ ಅವರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವಿಷಯವನ್ನು ಇತ್ಯರ್ಥಗೊಳಿಸಲಾಗಿದೆ ಮತ್ತು ವೃದ್ಧ ಮಹಿಳೆಗೆ ಪರಿಹಾರವನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆರೋಪಿ ಮತ್ತು ಮಹಿಳೆಯ ನಡುವಿನ ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ, ಆರೋಪಿ ನವೆಂಬರ್ 28 ರಂದು ಬಟ್ಟೆ ಮತ್ತು ಬ್ಯಾಗ್‌ಗಳನ್ನು ಸ್ವಚ್ಛಗೊಳಿಸಿದ್ದಾರೆ ಮತ್ತು ನವೆಂಬರ್ 30 ರಂದು ಅದನ್ನು ತಲುಪಿಸಿದ್ದಾರೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 7:02 pm, Fri, 6 January 23