Air India: ವಿಮಾನದ ವಾಶ್ರೂಂನಲ್ಲಲ್ಲ ಪ್ರಯಾಣಿಕರಿರುವ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯ ಬಂಧನ
ಮುಂಬೈಯಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಪ್ರಯಾಣಿಕರಿದ್ದ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನನ್ನು ಬಂಧಿಸಲಾಗಿದೆ
ಮುಂಬೈಯಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಪ್ರಯಾಣಿಕರಿದ್ದ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನನ್ನು ಬಂಧಿಸಲಾಗಿದೆ. ಜೂನ್ 24 ರಂದು ಎಐಸಿ 866 ವಿಮಾನದಲ್ಲಿ ನಡೆದ ಘಟನೆ ಇದಾಗಿದೆ. 17 ಎಫ್ನಲ್ಲಿ ಕುಳಿತಿದ್ದ ರಾಮ್ ಸಿಂಗ್ ಎಂಬ ಪ್ರಯಾಣಿಕ ವಿಮಾನ 9ನೇ ಸಾಲಿನಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದ್ದಾನೆ ಮತ್ತು ಉಗುಳಿದ್ದಾನೆ ಎಂದು ಆರೋಪಿಸಲಾಗಿದೆ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕ್ಯಾಬಿನ್ ಸಿಬ್ಬಂದಿ ಪ್ರಯಾಣಿಕರಿಗೆ ಮೌಖಿಕ ಎಚ್ಚರಿಕೆ ನೀಡಿದರು ಮತ್ತು ದುರ್ವರ್ತನೆಯನ್ನು ಮೊದಲು ಗಮನಿಸಿದಾಗ ಅವರನ್ನು ಬೇರೆ ಪ್ರಯಾಣಿಕರಿಂದ ಪ್ರತ್ಯೇಕಿಸಿದ್ದಾರೆ. ವಿಮಾನದಿಂದ ಇಳಿದ ತಕ್ಷಣ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಲಾಯಿತು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಮತ್ತು 510ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಇದೇ ರೀತಿಯ ಘಟನೆ 2022ರ ನವೆಂಬರ್ನಲ್ಲಿ ವರದಿಯಾಗಿತ್ತು, ಈ ಘಟನೆಯಲ್ಲಿ ಮದ್ಯದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ನ್ಯೂಯಾರ್ಕ್ನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದರು.
ಹಾಗೆಯೇ ಡಿಸೆಂಬರ್ ತಿಂಗಳಿನಲ್ಲಿ ಪ್ಯಾರಿಸ್-ನವದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಘಟನೆ ವರದಿಯಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ