AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ಪ್ರಯಾಣಿಕರು ಸೇಫ್

ಹಾಂಕಾಂಗ್​​ನಿಂದ ಬಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೆ ಏರ್ ಇಂಡಿಯಾ ವಿಮಾನದ ಬಾಲದ ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಹೆಚ್ಚಿನ ತನಿಖೆಗಾಗಿ ಆ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಈ ವಿಮಾನವು ವಿಸ್ತಾರಾ ಏರ್ಲೈನ್ಸ್ ನದ್ದಾಗಿದ್ದು, ವಿಲೀನದ ನಂತರ ಈಗ ಏರ್ ಇಂಡಿಯಾದ ಒಡೆತನದಲ್ಲಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ಪ್ರಯಾಣಿಕರು ಸೇಫ್
Air India Fire Accident In Delhi
ಸುಷ್ಮಾ ಚಕ್ರೆ
|

Updated on: Jul 22, 2025 | 10:07 PM

Share

ನವದೆಹಲಿ, ಜುಲೈ 22: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಇಂದು ಹಾಂಕಾಂಗ್​​ನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನ (Air India Plane) ಇಳಿಯುತ್ತಿದ್ದಂತೆ ಅದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏರ್ ಇಂಡಿಯಾ ವಿಮಾನದ ಸಹಾಯಕ ವಿದ್ಯುತ್ ಘಟಕ (ಎಪಿಯು) ಬೆಂಕಿಗೆ ಆಹುತಿಯಾಗಿದೆ. ಪ್ರಯಾಣಿಕರು ವಿಮಾನದಿಂದ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಹಾನಿಯಾಗಿಲ್ಲ.

ಸಹಾಯಕ ವಿದ್ಯುತ್ ಘಟಕವು ವಾಣಿಜ್ಯ ವಿಮಾನದ ಬಾಲದ ತುದಿಯಲ್ಲಿರುತ್ತದೆ. ಈ ವಿಮಾನವು ವಿಸ್ತಾರಾ ಏರ್ಲೈನ್ಸ್ ನದ್ದಾಗಿದ್ದು, ವಿಲೀನದ ನಂತರ ಈಗ ಏರ್ ಇಂಡಿಯಾ ಇದನ್ನು ನಡೆಸುತ್ತಿದೆ. ಬೆಂಕಿಯಿಂದಾಗಿ ವಿಮಾನಕ್ಕೆ ಸ್ವಲ್ಪ ಹಾನಿಯಾಗಿದೆ. ಆದರೆ, ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಕೆಳಗೆ ಇಳಿದಿದ್ದಾರೆ ಎಂದು ಏರ್ ಇಂಡಿಯಾ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ನೆರವಾಗಲು ಟಾಟಾ ಸನ್ಸ್​ನಿಂದ 500 ಕೋಟಿ ರೂ. ಟ್ರಸ್ಟ್ ಸ್ಥಾಪನೆ

ಜುಲೈ 22, 2025ರಂದು ಹಾಂಗ್ ಕಾಂಗ್ ನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ ಫ್ಲೈಟ್ AI 315 ದೆಹಲಿ ಏರ್​ಪೋರ್ಟ್​ನಲ್ಲಿ ಇಳಿದು ಗೇಟ್ ನಲ್ಲಿ ನಿಲ್ಲಿಸಿದ ಸ್ವಲ್ಪ ಸಮಯದ ನಂತರ ಸಹಾಯಕ ವಿದ್ಯುತ್ ಘಟಕ (APU)ದಲ್ಲಿ ಬೆಂಕಿ ಕಾಣಿಸಿಕೊಂಡಿತು. ಪ್ರಯಾಣಿಕರು ಇಳಿಯಲು ಪ್ರಾರಂಭಿಸಿದಾಗ ಈ ಘಟನೆ ಸಂಭವಿಸಿದೆ. ಸಿಸ್ಟಮ್ ವಿನ್ಯಾಸದ ಪ್ರಕಾರ APU ಸ್ವಯಂಚಾಲಿತವಾಗಿ ಸ್ಥಗಿತಗೊಂಡಿತು. ಹೆಚ್ಚಿನ ತನಿಖೆಗಾಗಿ ವಿಮಾನವನ್ನು ಸ್ಥಗಿತಗೊಳಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

APU ಒಂದು ಸಣ್ಣ ಎಂಜಿನ್ (ಮುಖ್ಯ ಎಂಜಿನ್ ಅಲ್ಲ) ಆಗಿದ್ದು, ವಿಮಾನವು ನೆಲದ ಮೇಲೆ ಇರುವಾಗ ಅದಕ್ಕೆ ವಿದ್ಯುತ್ ಒದಗಿಸುತ್ತದೆ. ವಿಮಾನ ನೆಲದ ಮೇಲಿದ್ದಾಗ ಅದಕ್ಕೆ ಲೈಟ್, ಎಸಿ ಮತ್ತು ಮುಖ್ಯ ಎಂಜಿನ್‌ಗಳನ್ನು ಪ್ರಾರಂಭಿಸಲು ಇದು ಸಹಾಯ ಮಾಡುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!