AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಪಡೆಯ ನೂತನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರು ಭಾರತೀಯ ವಾಯುಪಡೆಯ ಅತ್ಯಂತ ಅನುಭವಿ ಮತ್ತು ಗೌರವಾನ್ವಿತ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ. ಜುಲೈ 1ರಿಂದ ಜಾರಿಗೆ ಬರುವಂತೆ ಅವರನ್ನು ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಅಶುತೋಷ್ ದೀಕ್ಷಿತ್ ಅವರು ಡಿಸೆಂಬರ್ 6, 1986ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ (ಯುದ್ಧ ವಿಮಾನ ವಿಭಾಗ) ಅಧಿಕೃತವಾಗಿ ನಿಯೋಜನೆಗೊಂಡರು. ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರು ಕೇವಲ ಕಮಾಂಡರ್ ಮಾತ್ರವಲ್ಲದೆ, ಅತ್ಯುತ್ತಮ ತರಬೇತುದಾರ ಮತ್ತು ಟೆಸ್ಟ್ ಪೈಲಟ್ ಆಗಿದ್ದಾರೆ.

ಭಾರತೀಯ ವಾಯುಪಡೆಯ ನೂತನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
Ashutosh DixitImage Credit source: x
ಸುಷ್ಮಾ ಚಕ್ರೆ
|

Updated on: Jun 05, 2026 | 2:48 PM

Share

ನವದೆಹಲಿ, ಜೂನ್ 5: ಭಾರತೀಯ ವಾಯುಪಡೆಯ (IAF) ನೂತನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕಗೊಂಡಿದ್ದಾರೆ. ಜುಲೈ 1ರಿಂದ ಅವರು ಈ ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಅವರು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್‌ನ ಪ್ರಧಾನ ಕಚೇರಿಯಲ್ಲಿ ಚೀಫ್ ಆಫ್ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ (CISC) ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ತಮ್ಮ ವಿವಿಧ ಅಧಿಕಾರಾವಧಿಯಲ್ಲಿ ವಾಯುಪಡೆಯ ಆಧುನೀಕರಣ ಮತ್ತು ವಾಯುಪಡೆಯಲ್ಲಿ ದೇಶೀಯ ಫೈಟರ್ ಜೆಟ್ ಯೋಜನೆಗಳನ್ನು ಉತ್ತೇಜಿಸುವಲ್ಲಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಪ್ರಮುಖ ಕೊಡುಗೆ ನೀಡಿದ್ದಾರೆ. ಅಲ್ಲದೆ, ಮೀಡಿಯಂ ಮಲ್ಟಿ-ರೋಲ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (MMRCA) ಪ್ರಯೋಗಗಳ ಯೋಜನೆ ಮತ್ತು ನಿರ್ವಹಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಇವರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (NDA) ಖಡಕ್ವಾಸ್ಲಾ, ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜ್ (ಬಾಂಗ್ಲಾದೇಶ) ಮತ್ತು ನವದೆಹಲಿಯ ನ್ಯಾಷನಲ್ ಡಿಫೆನ್ಸ್ ಕಾಲೇಜ್‌ನ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

ಇದನ್ನೂ ಓದಿ: Agniveer Vayu Recruitment 2026: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು!

ಇವರು ಅರ್ಹ ಫ್ಲೈಯಿಂಗ್ ಇನ್ಸ್ಟ್ರಕ್ಟರ್ ಮತ್ತು ಎಕ್ಸ್‌ಪೆರಿಮೆಂಟಲ್ ಟೆಸ್ಟ್ ಪೈಲಟ್ ಆಗಿದ್ದು, ಮಿರಾಜ್-2000 (Mirage-2000), ಮಿಗ್-21 (MiG-21) ಮತ್ತು ಜಾಗ್ವಾರ್ (Jaguar) ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಮಾದರಿಯ ವಿಮಾನಗಳಲ್ಲಿ 3,300ಕ್ಕೂ ಹೆಚ್ಚು ಗಂಟೆಗಳ ಹಾರಾಟದ ಅಪಾರ ಅನುಭವವನ್ನು ಹೊಂದಿದ್ದಾರೆ. ದಕ್ಷಿಣ ವಲಯದ ಪ್ರಮುಖ ಫೈಟರ್ ಟ್ರೈನಿಂಗ್ ಬೇಸ್‌ನ ಕಮಾಂಡರ್ ಆಗಿಯೂ ಕಾರ್ಯನಿರ್ವಹಿಸಿದ್ದ ಇವರ ಅತ್ಯುತ್ತಮ ನಾಯಕತ್ವದ ಪರಿಣಾಮವಾಗಿ ಆ ಬೇಸ್ ಇಡೀ ಕಮಾಂಡ್‌ನಲ್ಲೇ ‘ಅತ್ಯುತ್ತಮ ಬೇಸ್’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇವರ ಈ ಸುದೀರ್ಘ ಅನುಭವವು ಭಾರತೀಯ ವಾಯುಪಡೆಯನ್ನು ಮತ್ತಷ್ಟು ಬಲಪಡಿಸಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?