AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಭಾರತೀಯ ವಾಯುಪಡೆಯ (ಐಎಎಫ್) ನೂತನ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಪ್ರಸ್ತುತ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ನಿವೃತ್ತಿಯ ನಂತರ ದೀಕ್ಷಿತ್ ಅವರು ಈ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರು ಸ್ವದೇಶಿ ನಿರ್ಮಿತ ಎಲ್.ಸಿ.ಎ ತೇಜಸ್ ಮತ್ತು ಇತರ ದೇಶೀಯ ಯುದ್ಧ ವಿಮಾನ ಯೋಜನೆಗಳಿಗೆ ಉತ್ತೇಜನ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರು 3,500ಕ್ಕೂ ಹೆಚ್ಚು ಗಂಟೆಗಳ ವಿಮಾನ ಹಾರಾಟದ ಅನುಭವವನ್ನು ಹೊಂದಿದ್ದಾರೆ.

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಅಶುತೋಷ್ ದೀಕ್ಷಿತ್Image Credit source: PTI
ಸುಷ್ಮಾ ಚಕ್ರೆ
|

Updated on: Oct 06, 2026 | 7:19 PM

Share

ನವದೆಹಲಿ, ಅಕ್ಟೋಬರ್ 6: ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರು ಅಮರ್ ಪ್ರೀತ್ ಸಿಂಗ್ ಅವರ ಸ್ಥಾನಕ್ಕೆ ನೂತನ ವಾಯುಪಡೆ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸುಮಾರು ನಾಲ್ಕು ದಶಕಗಳ ಸೇವಾನುಭವ ಹೊಂದಿರುವ ಫೈಟರ್ ಪೈಲಟ್ ಆದ ಅವರು, ದೇಶೀಯ ತಂತ್ರಜ್ಞಾನದ ಲಘು ಯುದ್ಧ ವಿಮಾನ (ಎಲ್​ಸಿಎ) ತೇಜಸ್ ಕಾರ್ಯಕ್ರಮ ಮತ್ತು ಇತರ ಭಾರತೀಯ ವಿಮಾನ ಯೋಜನೆಗಳಲ್ಲಿ ನಿಕಟವಾಗಿ ತೊಡಗಿಸಿಕೊಂಡಿದ್ದಾರೆ.

ವಾಯುಪಡೆಯ ಉಪ ಮುಖ್ಯಸ್ಥರಾಗುವ ಮೊದಲು, ಅವರು ಸೆಂಟ್ರಲ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಮತ್ತು ನಂತರ ಸ್ವೀಫ್ಸ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಿಗೆ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಅನಿಲ್ ಕೌಶಲ್ ನಂತರ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಅಶುತೋಷ್ ದೀಕ್ಷಿತ್ ಭಾರತೀಯ ವಾಯುಪಡೆಯಲ್ಲಿ ಸುಮಾರು 4 ದಶಕಗಳ ಸುದೀರ್ಘ ಸೇವಾ ಅನುಭವವನ್ನು ಹೊಂದಿದ್ದಾರೆ. ಇವರು ತಮ್ಮ ವೃತ್ತಿಜೀವನದಲ್ಲಿ ಒಟ್ಟು 3,500ಕ್ಕೂ ಹೆಚ್ಚು ಗಂಟೆಗಳ ಕಾಲ ವಿಮಾನ ಹಾರಾಟ ನಡೆಸಿದ ಅನುಭವ ಹೊಂದಿದ್ದಾರೆ.

ಅಶುತೋಷ್ ದೀಕ್ಷಿತ್ ಯಾರು?:

ಅಶುತೋಷ್ ದೀಕ್ಷಿತ್ 1986ರ ಡಿಸೆಂಬರ್ 6ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ಸೇರ್ಪಡೆಗೊಂಡರು. ಇವರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್​ಡಿಎ), ಬಾಂಗ್ಲಾದೇಶದ ಡಿಫೆನ್ಸ್ ಸ್ಟಾಫ್ ಸರ್ವಿಸ್ ಕಾಲೇಜು ಮತ್ತು ನ್ಯಾಷನಲ್ ಡಿಫೆನ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇವರು 3,500ಕ್ಕೂ ಹೆಚ್ಚು ಗಂಟೆಗಳ ವಿಮಾನ ಹಾರಾಟದ ಅನುಭವವನ್ನು ಹೊಂದಿದ್ದಾರೆ.

ಇದನ್ನೂ ಓದಿ: ಭಾರತೀಯ ವಾಯುಪಡೆಯ ನೂತನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

ಫೈಟರ್ ಸ್ಟ್ರೀಮ್‌ಗೆ ಸೇರಿದ ಏರ್ ಮಾರ್ಷಲ್ ದೀಕ್ಷಿತ್ ಡಿಸೆಂಬರ್ 6, 1991ರಂದು ಫ್ಲೈಟ್ ಲೆಫ್ಟಿನೆಂಟ್, ಮೇ 5, 2003ರಂದು ವಿಂಗ್ ಕಮಾಂಡರ್, ಮಾರ್ಚ್ 1, 2009ರಂದು ಗ್ರೂಪ್ ಕ್ಯಾಪ್ಟನ್ ಮತ್ತು ಜೂನ್ 17, 2013ರಂದು ಏರ್ ಕಮೋಡೋರ್ ಆಗಿ ಬಡ್ತಿ ಪಡೆದರು. ನಂತರ ಜೂನ್ 11, 2019ರಂದು ಏರ್ ವೈಸ್ ಮಾರ್ಷಲ್, ಅಕ್ಟೋಬರ್ 1, 2022ರಂದು ಏರ್ ಮಾರ್ಷಲ್ ಮತ್ತು ಸೆಪ್ಟೆಂಬರ್ 1, 2024ರಂದು ಕಮಾಂಡರ್-ಇನ್-ಚೀಫ್ ಆಗಿ ಬಡ್ತಿ ಪಡೆದರು. ಇವರು ಕೆಡೆಟ್ ಆಗಿ 69ನೇ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಕೋರ್ಸ್ ಮತ್ತು ಏರ್ ಕಮೋಡೋರ್ ಆಗಿ 57ನೇ ನ್ಯಾಷನಲ್ ಡಿಫೆನ್ಸ್ ಕಾಲೇಜು ಕೋರ್ಸ್ ಪೂರ್ಣಗೊಳಿಸಿದ್ದಾರೆ.

ಅಶುತೋಷ್ ದೀಕ್ಷಿತ್ ಅವರು ಡಿಸೆಂಬರ್ 15, 2003ರಿಂದ ಜನವರಿ 15, 2006ರವರೆಗೆ ಗ್ವಾಲಿಯರ್‌ನಲ್ಲಿರುವ ನಂ. 9 ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸಿದರು. ದೆಹಲಿಯ ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಏರ್ ಸ್ಟಾಫ್ ರಿಕ್ವೈರ್‌ಮೆಂಟ್ಸ್‌ನ ಪ್ರಿನ್ಸಿಪಾಲ್ ಡೈರೆಕ್ಟರ್ ಆಗಿಯೂ ಕಾರ್ಯನಿರ್ವಹಿಸಿದರು. ಜನವರಿ 2018ರಿಂದ ಮೇ 2019ರವರೆಗೆ ಬೀದರ್‌ನ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಏರ್ ಆಫೀಸರ್ ಕಮಾಂಡಿಂಗ್ ಆಗಿ ಮತ್ತು ನಂತರ ತಿರುವನಂತಪುರಂನ ಸದರ್ನ್ ಏರ್ ಕಮಾಂಡ್‌ನಲ್ಲಿ ಏರ್ ಡಿಫೆನ್ಸ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದರು.

ಅಕ್ಟೋಬರ್ 2020ರಿಂದ ಸೆಪ್ಟೆಂಬರ್ 2021ರವರೆಗೆ ದೆಹಲಿಯ ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಪ್ರೊಜೆಕ್ಟ್ಸ್ ವಿಭಾಗದ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ಆಗಿ ಹಾಗೂ ಅಕ್ಟೋಬರ್ 2021ರಿಂದ ಸೆಪ್ಟೆಂಬರ್ 2022ರವರೆಗೆ ಪ್ಲಾನ್ಸ್ ವಿಭಾಗದ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ಆಗಿ ಕಾರ್ಯನಿರ್ವಹಿಸಿದರು.

ಏರ್ ಮಾರ್ಷಲ್ ಆಗಿ, ಸೌತ್ ವೆಸ್ಟರ್ನ್ ಏರ್ ಕಮಾಂಡ್‌ನಲ್ಲಿ ಸೀನಿಯರ್ ಏರ್ ಸ್ಟಾಫ್ ಆಫೀಸರ್, ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಡೆಪ್ಯೂಟಿ ಚೀಫ್ ಆಫ್ ಏರ್ ಸ್ಟಾಫ್ ಮತ್ತು ಅಲಹಾಬಾದ್‌ನ ಸೆಂಟ್ರಲ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದಾರೆ. ಜುಲೈ 2026ರಿಂದ ದೆಹಲಿಯ ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಆಪರೇಷನ್ಸ್ ವಿಭಾಗದ ಪ್ರಿನ್ಸಿಪಾಲ್ ಸ್ಟಾಫ್ ಆಫೀಸರ್ ಹಾಗೂ ವಾಯುಪಡೆಯ ಉಪ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Video: ರಾಮಮಂದಿರ ಟ್ರಸ್ಟ್‌ಗೆ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಮೊದಲ CEO ಆಗಿ ನೇಮಕ

ಏರ್ ಮಾರ್ಷಲ್ ದೀಕ್ಷಿತ್ ಅವರು ವಾಯು ಸೇನಾ ಪದಕ, ವಿಶಿಷ್ಟ ಸೇವಾ ಪದಕ ಮತ್ತು ಅತಿ ವಿಶಿಷ್ಟ ಸೇವಾ ಪದಕಗಳನ್ನು ಪಡೆದಿದ್ದಾರೆ. 2006ರಲ್ಲಿ ಅವರ ಅತ್ಯುತ್ತಮ ಕರ್ತವ್ಯ ನಿಷ್ಠೆಗಾಗಿ ‘ವಾಯು ಸೇನಾ ಪದಕ’ ನೀಡಿ ಗೌರವಿಸಲಾಯಿತು. ಫೈಟರ್ ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್ ಆಗಿ, ಇವರು ಮಿರಾಜ್-2000 ವಿಮಾನಗಳ ಆಧುನೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫ್ರಾನ್ಸ್‌ನಿಂದ ಭಾರತಕ್ಕೆ 10 ಹೊಸ ಮಿರಾಜ್-2000 ವಿಮಾನಗಳನ್ನು ತರುವ ಪ್ರಕ್ರಿಯೆಯಲ್ಲಿಯೂ ಇವರು ಪ್ರಮುಖ ಪಾತ್ರ ವಹಿಸಿದ್ದರು.

2011ರಲ್ಲಿ ಇವರಿಗೆ ‘ವಿಶಿಷ್ಟ ಸೇವಾ ಪದಕ’ ಒಲಿದುಬಂದಿತು. ಇವರು ಅರ್ಹತಾ ವಿಮಾನ ತರಬೇತುದಾರ ಮತ್ತು ಪರೀಕ್ಷಾ ಪೈಲಟ್ ಆಗಿ 20ಕ್ಕೂ ಹೆಚ್ಚು ಮಾದರಿಯ ವಿಮಾನಗಳಲ್ಲಿ 3,200 ಗಂಟೆಗಳ ಕಾಲ ಹಾರಾಟ ನಡೆಸಿದ ಅನುಭವ ಹೊಂದಿದ್ದಾರೆ. ಜಾಗ್ವಾರ್ ಮತ್ತು ಮಿಗ್-27 ವಿಮಾನಗಳ ಸ್ವದೇಶಿ ಆಧುನೀಕರಣ ಯೋಜನೆಗಳು ಹಾಗೂ ಎಮ್.ಎಮ್.ಆರ್.ಸಿ.ಎ ಕಾರ್ಯಕ್ರಮದ ಅಡಿಯಲ್ಲಿ ವಿಮಾನಗಳ ತಾಂತ್ರಿಕ ಮೌಲ್ಯಮಾಪನ ಮತ್ತು ಫೀಲ್ಡ್ ಟ್ರಯಲ್ಸ್‌ನಲ್ಲೂ ಇವರು ಕಾರ್ಯನಿರ್ವಹಿಸಿದ್ದಾರೆ. ಇವರ ಗಣನೀಯ ಸೇವೆಯನ್ನು ಗುರುತಿಸಿ 2023 ರಲ್ಲಿ ‘ಅತಿ ವಿಶಿಷ್ಟ ಸೇವಾ ಪದಕ’ ನೀಡಿ ಗೌರವಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ಕೈದಿ ಬಿಡುಗಡೆಗೆ ಪತ್ನಿ ಮೇಲೆ ಆಸೆ: ಅಪರಾಧಿ ಪತ್ನಿಗೆ ಡಿಐಜಿ ವಿಡಿಯೋ ಕಾಲ್!
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ