ನವದೆಹಲಿ: ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಕಟ್ಟಡ ನಿರ್ಮಾಣದ ಮೇಲೆ ಹೇರಿದ್ದ ನಿರ್ಬಂಧವನ್ನು ಮುಂದುವರಿಸಲಾಗುವುದು. ಮುಂದಿನ ಆದೇಶದವರೆಗೆ ಕಟ್ಟಡಗಳ ನಿರ್ಮಾಣ ನಿರ್ಬಂಧ ಮುಂದುವರೆಯಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಈ ನಿರ್ಬಂಧ ವಿಧಿಸಲಾಗಿದೆ. ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಕೂಲಿ ಕಾರ್ಮಿಕರ ಖಾತೆಗೆ 5,000 ರೂ. ಹಾಕಲು ನಿರ್ಧಾರ ಮಾಡಲಾಗಿದೆ. ಡಿಸೆಂಬರ್ 7ರವರೆಗೆ ಟ್ರಕ್‌ಗಳಿಗೆ ದೆಹಲಿ ಪ್ರವೇಶ ನಿಷೇಧಿಸಲಾಗಿದೆ.
ಅಗತ್ಯ ವಸ್ತುಗಳ ಸರಬರಾಜು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಸಿಎನ್ಜಿ, ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ದೆಹಲಿಯ ಪರಿಸರ ಇಲಾಖೆ ಸಚಿವ ಗೋಪಾಲ್ ರೈ ಮಾಹಿತಿ ನೀಡಿದ್ದಾರೆ.
Construction and demolition activities in Delhi to remain banned till further orders. Rs 5000 each will be given to all construction workers: Environment minister Gopal Rai pic.twitter.com/AZ7SaQ1eR8
— ANI (@ANI) November 29, 2021
ದೆಹಲಿಯಲ್ಲಿ ತನ್ನ ಡೊಮೇನ್‌ಗೆ ಒಳಪಡುವ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ವಿಶೇಷ ಪೀಠವು ಡಿಸೆಂಬರ್ 2ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ. ನವೆಂಬರ್ 24ರಂದು ಮಧ್ಯಂತರ ಕ್ರಮವಾಗಿ ನ್ಯಾಯಾಲಯ ದೆಹಲಿ ಎನ್‌ಸಿಆರ್‌ನಲ್ಲಿ ನಿರ್ಮಾಣ ನಿಷೇಧವನ್ನು ವಿಧಿಸಿತ್ತು.
ಇದನ್ನೂ ಓದಿ: ಸಲ್ಮಾನ್ ಖುರ್ಷಿದ್ ಪುಸ್ತಕ ನಿಷೇಧಿಸಲಾಗದು, ನೀವೇ ಓದುವುದನ್ನು ಬಿಡಬಹುದು: ದೆಹಲಿ ಹೈಕೋರ್ಟ್
ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ; ಮುಂದಿನ ಆದೇಶದವರೆಗೆ ಶಾಲೆಗಳಿಗೆ ರಜೆ ಘೋಷಣೆ