AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ; ನಾಳೆಯಿಂದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

"ವಾಯು ಗುಣಮಟ್ಟ ಸುಧಾರಿಸುವ ಮುನ್ಸೂಚನೆಯನ್ನು ಪರಿಗಣಿಸಿ ನಾವು ಶಾಲೆಗಳನ್ನು ಪುನರಾರಂಭಿಸಿದ್ದೇವೆ. ಆದಾಗ್ಯೂ, ವಾಯು ಮಾಲಿನ್ಯದ ಮಟ್ಟವು ಮತ್ತೆ ಹೆಚ್ಚಾಗಿದೆ ಮತ್ತು ಮುಂದಿನ ಆದೇಶದವರೆಗೆ ನಾವು ಶುಕ್ರವಾರದಿಂದ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದೇವೆ" ಎಂದು ಗೋಪಾಲ್ ರಾಯ್ ಹೇಳಿದರು.

ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ; ನಾಳೆಯಿಂದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ
ದೆಹಲಿಯಲ್ಲಿ ವಾಯುಮಾಲಿನ್ಯ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 02, 2021 | 3:39 PM

Share

ದೆಹಲಿ:  ವಾಯು ಮಾಲಿನ್ಯ ಬಿಕ್ಕಟ್ಟು (air crisis) ಕುರಿತು ಮುಂದಿನ ಆದೇಶದವರೆಗೆ ದೆಹಲಿಯ ಶಾಲೆಗಳನ್ನು ನಾಳೆಯಿಂದ ಮುಚ್ಚಲಾಗುವುದು ಎಂದು ರಾಜ್ಯ ಪರಿಸರ ಸಚಿವ ಗೋಪಾಲ್ ರಾಯ್ (Gopal Rai) ಬುಧವಾರ ಹೇಳಿದ್ದಾರೆ. ವಾಯುಮಾಲಿನ್ಯ ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕ 24ಗಂಟೆಗಳ ಡೆಡ್ ಲೈನ್ ಕೊಟ್ಟು ಸುಪ್ರೀಂಕೋರ್ಟ್‌ (Supreme Court) ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ತೀರ್ಮಾನ ಬಂದಿದೆ. “ವಾಯು ಗುಣಮಟ್ಟ ಸುಧಾರಿಸುವ ಮುನ್ಸೂಚನೆಯನ್ನು ಪರಿಗಣಿಸಿ ನಾವು ಶಾಲೆಗಳನ್ನು ಪುನರಾರಂಭಿಸಿದ್ದೇವೆ. ಆದಾಗ್ಯೂ, ವಾಯು ಮಾಲಿನ್ಯದ ಮಟ್ಟವು ಮತ್ತೆ ಹೆಚ್ಚಾಗಿದೆ ಮತ್ತು ಮುಂದಿನ ಆದೇಶದವರೆಗೆ ನಾವು ಶುಕ್ರವಾರದಿಂದ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದೇವೆ” ಎಂದು ಗೋಪಾಲ್ ರಾಯ್ ಹೇಳಿದರು. ಕಠಿಣ ಕ್ರಮದ ಎಚ್ಚರಿಕೆ, ಕೈಗಾರಿಕಾ ಮತ್ತು ವಾಹನ ಮಾಲಿನ್ಯದ ವಿರುದ್ಧ ಕ್ರಮಕೈಗೊಳ್ಳಲು ಕೇಂದ್ರ, ದೆಹಲಿ ಮತ್ತು ನೆರೆಯ ರಾಜ್ಯಗಳಿಗೆ ಸುಪ್ರೀಂಕೋರ್ಟ್ 24 ಗಂಟೆಗಳ ಡೆಡ್ ಲೈನ್ ನೀಡಿದೆ.ಶಾಲೆಗಳ ಪುನರಾರಂಭದ ಕುರಿತು ಅರವಿಂದ್ ಕೇಜ್ರಿವಾಲ್ (Arvind Kejriwal) ಸರ್ಕಾರವನ್ನು ಟೀಕಿಸಿದ ಸುಪ್ರೀಂಕೋರ್ಟ್, “ಮೂರು ವರ್ಷದ ಮಕ್ಕಳು ಮತ್ತು ನಾಲ್ಕು ವರ್ಷದ ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ ಆದರೆ ವಯಸ್ಕರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದೆ. ನಿಮ್ಮ ಸರ್ಕಾರದ ಮೇಲ್ವಿಚಾರಣೆ ನಡೆಸಲು ನಾವು ಯಾರನ್ನಾದರೂ ನೇಮಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಹೇಳಿದರು.

ನವೆಂಬರ್ 13 ರಿಂದ ಮುಚ್ಚಲ್ಪಟ್ಟ ನಂತರ, ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿಗಳು ಸೋಮವಾರದಿಂದ ಪುನರಾರಂಭಗೊಂಡವು.  ಕಳೆದ ತಿಂಗಳು ದೀಪಾವಳಿಯ ನಂತರ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟಿದೆ. ಬೆಳೆ ತ್ಯಾಜ್ಯ ಸುಡುವುದು ಸಹ ಇದಕ್ಕೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಒಂದು ತಿಂಗಳಿನಿಂದ ದೆಹಲಿ ಈ ರೀತಿ ವಾಯುಮಾಲಿನ್ಯದಿಂದ ಕಂಗೆಟ್ಟಿದೆ. ಮುಂದಿನ ಆದೇಶದವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧವಿದೆ.

ಸುಪ್ರೀಂಕೋರ್ಟ್ ಹೇಳಿದ್ದೇನು?  ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ ಎಂದು ಸರ್ಕಾರ ಪ್ರತಿಪಾದಿಸುತ್ತಿದೆ. ಆದರೆ ಇಲ್ಲಿ ಸ್ವಲ್ಪವೂ ಮಾಲಿನ್ಯ ಕಡಿಮೆಯಾಗಿಲ್ಲ. ಬದಲಾಗಿ ಹೆಚ್ಚಾಗಿದೆ ಎಂದು ಇಂದು ಸುಪ್ರೀಂಕೋರ್ಟ್ ಹೇಳಿದೆ. ಅಷ್ಟೇ ಅಲ್ಲ, ಕೈಗಾರಿಕಾ ಮತ್ತು ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯದ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಮತ್ತು ದೆಹಲಿ ಆಪ್​ ಸರ್ಕಾರಕ್ಕೆ 24 ಗಂಟೆಗಳ ಡೆಡ್​​ಲೈನ್​​ನ್ನೂ ನೀಡಿದೆ.  ದೆಹಲಿಯಲ್ಲಿ ಕಳೆದ ಹಲವು ದಿನಗಳಿಂದಲೂ ಮಾಲಿನ್ಯ ಮಟ್ಟ ಏರಿಕೆಯಾಗಿದ್ದು, ವಾಯುಗುಣಮಟ್ಟ ಸೂಚ್ಯಂಕ 500ಕ್ಕೆ ತಲುಪಿದ್ದು, ಮಾಲಿನ್ಯ ಅತ್ಯಂತ ಗಂಭೀರ ಸ್ವರೂಪದ ಹಂತ ತಲುಪಿದೆ.

ಇನ್ನು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಪಿಐಎಲ್​​ಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್​ ಸಿಜೆಐ ಎನ್​.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್​ ಮತ್ತು ಡಿ.ವೈ.ಚಂದ್ರಚೂಡ್​ ಅವರನ್ನೊಳಗೊಂಡ ಪೀಠ, ಇಂದು ಕೂಡ ದೆಹಲಿ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.  ಮಾಲಿನ್ಯ ತಡೆಗಟ್ಟಲು ಏನೇನೂ ಮಾಡಲಾಗಿಲ್ಲ. ಹಾಗಾಗಿ ಮಾಲಿನ್ಯ ಹೆಚ್ಚುತ್ತಲೇ ಇದೆ..ಕೇವಲ ಸಮಯ ಹಾಳು ಮಾಡಲಾಗುತ್ತಿದೆಯಷ್ಟೇ ಎಂಬುದು ನಮ್ಮ ಭಾವನೆ ಎಂದು ಸಿಜೆಐ ಎನ್​.ವಿ ರಮಣ ಇಂದು ಹೇಳಿದ್ದಾರೆ. ಅಂದಹಾಗೆ, ದೆಹಲಿ ಮತ್ತು ಸುತ್ತಲಿನ ನಗರಗಳಲ್ಲಿ ಮಾಲಿನ್ಯ ಮಟ್ಟ ಏರಿಕೆಯಾಗುತ್ತಿರುವ ಕಾರಣಕ್ಕೆ ಸುಪ್ರೀಂಕೋರ್ಟ್​ ನಿರಂತರವಾಗಿ ಕಳೆದ ನಾಲ್ಕು ವಾರಗಳಿಂದ ಅಸಮಾಧಾನ ವ್ಯಕ್ತಪಡಿಸುತ್ತಲೇ ಬರುತ್ತಿದೆ.

ಇಂದಿನ ವಿಚಾರಣೆ ವೇಳೆ ಎನ್​.ವಿ.ರಮಣ ಇನ್ನೂ ಖಡಕ್​ ಆಗಿಯೇ ಸರ್ಕಾರಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನೀವು ಆನ್​ಲೈನ್​ ಕ್ಲಾಸ್​ಗಳು, ವರ್ಕ್​ ಫ್ರಂ ಹೋಂ ಪದ್ಧತಿ ಮೂಲಕ ಮಾಲಿನ್ಯ ಮಟ್ಟ ನಿಯಂತ್ರಣ ಮಾಡುವುದಾಗಿ ಹೇಳಿದ್ದಿರಿ. ಆದರೆ ಅದೂ ಕೂಡ ಆಯ್ಕೆ ಎಂದು ಹೇಳುತ್ತೀರಿ. ಹೀಗೆ ಹೇಳಿದರೆ ಯಾರು ಮನೆಯಲ್ಲಿ ಇರುತ್ತಾರೆ? ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ನಾಳೆಯೊಳಗೆ ಕಠಿಣ ಕ್ರಮ ವಹಿಸಬೇಕು. ನಾವು ನಿಮಗೆ 24 ತಾಸುಗಳ ಗಡುವು ಕೊಡುತ್ತಿದ್ದೇವೆ. ಅದಾಗದೆ ಇದ್ದರೆ, ಮುಂದಿನ ಆದೇಶ ನಾವೇ ಹೊರಡಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ ಸರ್ಕಾರಗಳಿಗೆ 24 ಗಂಟೆಗಳ ಡೆಡ್​ಲೈನ್ ಕೊಟ್ಟು, ವಾರ್ನ್​ ಮಾಡಿದ ಸುಪ್ರೀಂಕೋರ್ಟ್​​

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ