ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ, ವೈದ್ಯರ ಸಲಹೆ ಮೇರೆಗೆ ಸೋನಿಯಾಗಾಂಧಿ ಜೈಪುರಕ್ಕೆ ಶಿಫ್ಟ್​

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದು, ಹಲವು ಊಹಾಪೋಹಗಳನ್ನು ಸೃಷ್ಟಿ ಮಾಡಿದೆ. ಆದರೆ ದೆಹಲಿಯಲ್ಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ಕಳಪೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸೋನಿಯಾ ಜೈಪುರಕ್ಕೆ ಶಿಫ್ಟ್​ ಆಗಿದ್ದಾರೆ.

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ, ವೈದ್ಯರ ಸಲಹೆ ಮೇರೆಗೆ ಸೋನಿಯಾಗಾಂಧಿ ಜೈಪುರಕ್ಕೆ ಶಿಫ್ಟ್​
ಸೋನಿಯಾ ಗಾಂಧಿImage Credit source: Mint
Follow us
ನಯನಾ ರಾಜೀವ್
|

Updated on: Nov 15, 2023 | 9:06 AM

ರಾಜಸ್ಥಾನ(Rajasthan)ದಲ್ಲಿ ವಿಧಾನಸಭಾ ಚುನಾವಣೆ(Assembly Election)ಯ ಹೊಸ್ತಿಲಲ್ಲಿ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದು, ಹಲವು ಊಹಾಪೋಹಗಳನ್ನು ಸೃಷ್ಟಿ ಮಾಡಿದೆ. ಆದರೆ ದೆಹಲಿಯಲ್ಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ಕಳಪೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸೋನಿಯಾ ಜೈಪುರಕ್ಕೆ ಶಿಫ್ಟ್​ ಆಗಿದ್ದಾರೆ.

ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಯಾವುದೇ ಚುನಾವಣಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿಲ್ಲ. ದೆಹಲಿಯಲ್ಲಿ ಮಾಲಿನ್ಯದಿಂದ ಉಂಟಾಗುವ ವಿಷಪೂರಿತ ಗಾಳಿಯನ್ನು ತಪ್ಪಿಸಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈಗ ಜೈಪುರದಲ್ಲಿ ಕೆಲವು ದಿನಗಳ ಕಾಲ ತಂಗಲಿದ್ದಾರೆ.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಲು ನವೆಂಬರ್ 14 ರಂದು ಬೆಳಿಗ್ಗೆ ಶಾಂತಿವನ ಸ್ಮಾರಕವನ್ನು ತಲುಪಿದ ಸೋನಿಯಾ ಗಾಂಧಿ ಅವರು ಮಾಸ್ಕ್​ ಧರಿಸಿದ್ದರು.

ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಇದ್ದರು. ಪಕ್ಷದ ಮೂಲಗಳ ಪ್ರಕಾರ, ದೆಹಲಿಯಲ್ಲಿ ಕಳಪೆ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಮಟ್ಟದಿಂದಾಗಿ, ದೆಹಲಿಯ ವಿಷಕಾರಿ ಗಾಳಿಯು ಸೋನಿಯಾಗೆ ಅಪಾಯಕಾರಿ ಎಂದು ವೈದ್ಯರು ಹೇಳಿದ್ದಾರೆ, ಸೋನಿಯಾ ಗಾಂಧಿ ಬಹಳ ದಿನಗಳಿಂದ ಅಸ್ತಮಾ ಎದುರಿಸುತ್ತಿದ್ದಾರೆ.

ಮತ್ತಷ್ಟು ಓದಿ: ದೆಹಲಿ: ಎರಡು ದಿನದಿಂದ ಮಳೆಯಾಗುತ್ತಿದ್ದರೂ, ಗಾಳಿಯ ಗುಣಮಟ್ಟ ಕಳಪೆಯಾಗಿಯೇ ಉಳಿದಿದೆ

ರಾಜಧಾನಿ ದೆಹಲಿಯಲ್ಲಿ ದೀಪಾವಳಿ ನಂತರ ಮಾಲಿನ್ಯ ಮತ್ತೊಮ್ಮೆ ಹೆಚ್ಚಾಗಿದೆ. ಮಂಗಳವಾರ ಬೆಳಗಿನ ಜಾವವೂ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿ ದಾಖಲಾಗಿದೆ. ದೆಹಲಿಯಲ್ಲಿ ಬೆಳಗ್ಗೆ 8 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 435ರಲ್ಲಿ ದಾಖಲಾಗಿದೆ. ಆದರೆ AQI ನೋಯ್ಡಾದಲ್ಲಿ 418 ಮತ್ತು ಗುರುಗ್ರಾಮ್‌ನಲ್ಲಿ 391 ತಲುಪಿದೆ. ದೆಹಲಿ NCR ನಲ್ಲಿ ವೇಗವಾಗಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ, ಜನರು ಮತ್ತೊಮ್ಮೆ ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಉಸಿರಾಟದ ತೊಂದರೆ ಅನುಭವಿಸಲು ಪ್ರಾರಂಭಿಸಿದ್ದಾರೆ.

ದೆಹಲಿಯಲ್ಲಿ ಮಾಲಿನ್ಯದ ಕಾರಣ ಸೋನಿಯಾ ಗಾಂಧಿ ಅವರು ರಾಜಧಾನಿ ದೆಹಲಿಯಿಂದ ಹೊರಗೆ ಹೋಗುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ವೈದ್ಯರ ಸಲಹೆಯ ಮೇರೆಗೆ, 2020 ರಲ್ಲಿ, ದೆಹಲಿಯಲ್ಲಿ ವೇಗವಾಗಿ ಹೆಚ್ಚುತ್ತಿರುವ ಮಾಲಿನ್ಯದ ನಂತರ ಸೋನಿಯಾ ಗಾಂಧಿ ಗೋವಾಕ್ಕೆ ಸ್ಥಳಾಂತರಗೊಂಡಿದ್ದರು. ನವೆಂಬರ್ 25 ರಂದು ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ