ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ

ಕೆಟ್ಟ ಹವಾಮಾನದಿಂದಾಗಿ ವಿಮಾನ ಭೂಸ್ಪರ್ಶ ಮಾಡಲಾಗಿದೆ. ವಿರೋಧ ಪಕ್ಷಗಳ ಎರಡು ದಿನಗಳ ಚಿಂತನ-ಮಂಥನ ಅಧಿವೇಶನದಲ್ಲಿ ಭಾಗವಹಿಸಿದ ನಂತರ ಅಮ್ಮ  ಮಗ ಬೆಂಗಳೂರಿನಿಂದ ದೆಹಲಿಗೆ ಹಿಂತಿರುಗುತ್ತಿದ್ದರು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ
ಸೋನಿಯಾ- ರಾಹುಲ್
Edited By:

Updated on: Jul 18, 2023 | 10:11 PM

ದೆಹಲಿ ಜುಲೈ 18:  ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ (Sonia Gandhi) ಮತ್ತು ರಾಹುಲ್ ಗಾಂಧಿ (Rahul Gandhi) ಪ್ರಯಾಣಿಸುತ್ತಿದ್ದ ವಿಮಾನವನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ (emergency landing )ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಭೂಸ್ಪರ್ಶ ಮಾಡಲಾಗಿದೆ. ವಿರೋಧ ಪಕ್ಷಗಳ ಎರಡು ದಿನಗಳ ಚಿಂತನ-ಮಂಥನ ಅಧಿವೇಶನದಲ್ಲಿ ಭಾಗವಹಿಸಿದ ನಂತರ ಅಮ್ಮ  ಮಗ ಬೆಂಗಳೂರಿನಿಂದ ದೆಹಲಿಗೆ ಹಿಂತಿರುಗುತ್ತಿದ್ದರು. ದೆಹಲಿಗೆ ತೆರಳುತ್ತಿದ್ದ ಖಾಸಗಿ ಚಾರ್ಟರ್ಡ್ ವಿಮಾನ ತುರ್ತು ಭೂಸ್ಪರ್ಶ ಮಾಡಲೇಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಹುಲ್ ಮತ್ತು  ಸೋನಿಯಾ ರಾತ್ರಿ 9.30 ರ ಸುಮಾರಿಗೆ ಭೋಪಾಲ್-ದೆಹಲಿ ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: INDIA: ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ನಾಮಕರಣ; ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಬೆಂಗಳೂರಿನಲ್ಲಿ ಮಂಗಳವಾರ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಬಿಹಾರ ಮುಖ್ಯಮಂತ್ರಿಗಳು ಸೇರಿದಂತೆ ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂಗಳು ಮತ್ತು ಹಲವಾರು ಪಕ್ಷಗಳ ಅಧ್ಯಕ್ಷರು ಮತ್ತು ನಾಯಕರು ಸಹ ಭಾಗವಹಿಸಿದ್ದರು. ಈ ಕಾರ್ಯಕ್ರಮದ ಬಳಿಕ ರಾಹುಲ್ ಹಾಗೂ ಸೋನಿಯಾ ಗಾಂಧಿ ದೆಹಲಿಗೆ ವಾಪಸಾಗುತ್ತಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Tue, 18 July 23