ಐಶ್ವರ್ಯ ರೈ -ಮಗಳು ಆರಾಧ್ಯ ಕೊರೊನಾದಿಂದ ಬಚಾವ್, ಮನೆಗೆ ವಾಪಸ್

| Updated By:

Updated on: Jul 28, 2020 | 12:53 AM

ಮುಂಬೈ: ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕುಟುಂಬದಿಂದ ಅವರ ಅಭಿಮಾನಿಗಳಿಗೆ ಖುಷಿಯ ಸುದ್ಧಿಯೊಂದು ಹೊರಬಿದ್ದಿದೆ. ಅಮಿತಾಬ್ ಬಚ್ಚನ್, ಮಗ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈ ನಾಲ್ವರಲ್ಲಿ ಐಶ್ವರ್ಯ ರೈ ಬಚ್ಚನ್ ಹಾಗೂ ಮಗಳು ಆರಾಧ್ಯ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ವಿಚಾರವನ್ನು […]

ಐಶ್ವರ್ಯ ರೈ -ಮಗಳು ಆರಾಧ್ಯ ಕೊರೊನಾದಿಂದ ಬಚಾವ್, ಮನೆಗೆ ವಾಪಸ್
Follow us on

ಮುಂಬೈ: ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕುಟುಂಬದಿಂದ ಅವರ ಅಭಿಮಾನಿಗಳಿಗೆ ಖುಷಿಯ ಸುದ್ಧಿಯೊಂದು ಹೊರಬಿದ್ದಿದೆ.

ಅಮಿತಾಬ್ ಬಚ್ಚನ್, ಮಗ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈ ನಾಲ್ವರಲ್ಲಿ ಐಶ್ವರ್ಯ ರೈ ಬಚ್ಚನ್ ಹಾಗೂ ಮಗಳು ಆರಾಧ್ಯ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ವಿಚಾರವನ್ನು ಅಭಿಷೇಕ್ ಬಚ್ಚನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ಇಬ್ಬರೂ ಗುಣಮುಖರಾಗಲು ಸಹಕರಿಸಿದ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ತಾವು ಹಾಗೂ ತಂದೆ ಅಮಿತಾ ಬಚ್ಚನ್ ಇನ್ನೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು ಆದಷ್ಟು ಬೇಗ ಗುಣಮುಖರಾಗಿ ಹೊರಬರುವುದಾಗಿ ತಿಳಿಸಿದ್ದಾರೆ.

Published On - 5:12 pm, Mon, 27 July 20