ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಇಂದು ಪ್ರಧಾನಿ ಮೋದಿ ನೇರ ಸಂವಾದ -ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಭಾಗಿ

PM Narendra Modi Virtual Conference: ಈ ಯೋಜನೆಗಳ ಮೂಲಕ ನಾಗರಿಕರ ಜೀವನ ಪ್ರಕ್ರಿಯೆ ಸುಗಮಗೊಳಿಸಲು ನೆರವಾಗುವಂತೆ ಅಳವಡಿಸಿಕೊಂಡಿರುವ ಜನ-ಕೇಂದ್ರಿತ ಮಾರ್ಗಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯವನ್ನು ಈ ಸಂವಾದವು ಮಾಡುವುದಲ್ಲದೇ, ರಾಷ್ಟ್ರದ ಪ್ರಗತಿಯ ಹಾದಿಯಲ್ಲಿ ಯಾರೊಬ್ಬರೂ ಹಿಂದುಳಿದಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಜನರ ಆಕಾಂಕ್ಷೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನವನ್ನೂ ಮಾಡಲಿದೆ

ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಇಂದು ಪ್ರಧಾನಿ ಮೋದಿ ನೇರ ಸಂವಾದ -ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಭಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 01, 2022 | 4:18 PM

ಬೆಂಗಳೂರು: ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥವಾಗಿ “ಆಜಾದಿ ಕಾ ಅಮೃತ್ ಮಹೋತ್ಸವ” ವನ್ನು (Ajadi Ka amriuth mahotsav) ರಾಷ್ಟ್ರದೆಲ್ಲೆಡೆ ಆಚರಿಸುತ್ತಿದ್ದು, ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು (PM Narendra Modi) ಕೇಂದ್ರ ಸರ್ಕಾರದ ಒಂಬತ್ತು ಸಚಿವಾಲಯಗಳು, ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಸುಮಾರು 16 ಯೋಜನೆಗಳ ಫಲಾನುಭವಿಗಳೊಂದಿಗೆ (beneficiaries) ವರ್ಚುಯಲ್ ವೇದಿಕೆ ಮೂಲಕ ನೇರ ಸಂವಾದ (Virtual Conference) ನಡೆಸಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರು ತಿಳಿಸಿದ್ದಾರೆ.

ಅವರು ಈ ಕುರಿತು ತಮ್ಮ ಕಚೇರಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಮಟ್ಟದಲ್ಲಿ ಈ ವರ್ಚುಯಲ್ ನೇರ ಸಂವಾದ ಕಾರ್ಯಕ್ರಮವನ್ನು ಇಂದು (ಮೇ 31ರಂದು) ಬೆಳಗ್ಗೆ 9.30 ಕ್ಕೆ ನಗರದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಪುಟ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು ಎಂದವರು ತಿಳಿಸಿದರು.

ಶಿಮ್ಲಾದಿಂದ ವರ್ಚುಯಲ್ ವೇದಿಕೆಯಲ್ಲಿ… ಗೌರವಾನ್ವಿತ ಪ್ರಧಾನ ಮಂತ್ರಿ ಶಿಮ್ಲಾದಿಂದ ವರ್ಚುಯಲ್ ವೇದಿಕೆಯಲ್ಲಿ ನೇರವಾಗಿ ದೇಶದ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಈ ರಾಷ್ಟ್ರೀಯ ಕಾರ್ಯಕ್ರಮದೊಂದಿಗೆ ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಲಿಂಕ್ ಮಾಡಲಾಗುವುದು ಎಂದ ಅವರು ಈ ಕಾರ್ಯಕ್ರಮಕ್ಕೆ “ಗರೀಬ್ ಕಲ್ಯಾಣ್ ಸಮ್ಮೇಳನ” ಎಂದೇ ಹೆಸರಿಡಲಾಗಿದೆ. ಸಮಾಜದ ಬಡ ವರ್ಗದ ಕೋಟ್ಯಂತರ ಫಲಾನುಭವಿಗಳು ಈ ಯೋಜನೆಗಳಡಿ ಸೌಲಭ್ಯ ಪಡೆದಿರುವವರಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಮ್ಮೇಳನದ ಮೂಲ ಉದ್ದೇಶ ಕೇವಲ ನಾಗರಿಕರ ಜೀವನ ಮಟ್ಟ ಸುಧಾರಿಸುವುದು ಮತ್ತು ಸುಗಮಗೊಳಿಸುವುದು ಮಾತ್ರವಲ್ಲದೇ, ವಿವಿಧ ಯೋಜನೆಗಳನ್ನು ಒಂದುಗೂಡಿಸುವ ಸಾಧ್ಯತೆಗಳನ್ನು ಕಂಡುಕೊಳ್ಳುವ ಒಂದು ಪ್ರಯತ್ನವಾಗಿದೆ. ಈ ಸಮ್ಮೇಳನವು 2047ನೇ ಸಾಲಿನಲ್ಲಿ ಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ನಾಗರಿಕರ ಭವಿಷ್ಯದ ಆಕಾಂಕ್ಷೆಗಳನ್ನು ಅವಲೋಕಿಸುವ ಅವಕಾಶವನ್ನೂ ಸಹ ನೀಡುವ ಒಂದು ವೇದಿಕೆಯಾಗಲಿದೆ ಎಂದವರು ತಿಳಿಸಿದರು.

ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ವಸತಿ, ಕುಡಿಯುವ ನೀರು ಪೂರೈಕೆ, ಆಹಾರ, ಆರೋಗ್ಯ, ಜೀವನೋಪಾಯ, ಆರ್ಥಿಕ ಒಳಗೊಳ್ಳುವಿಕೆ ಯೋಜನೆಗಳ ಲಾಭವನ್ನು ನಾಗರಿಕರು ಪಡೆದಿರುವ ಬಗ್ಗೆ ಮತ್ತದರ ಪ್ರಭಾವದ ಕುರಿತು ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ರಾಷ್ಟ್ರಾದ್ಯಂತ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಏಕಕಾಲಕ್ಕೆ ಪ್ರಧಾನ ಮಂತ್ರಿ ಮೋದಿ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಅತಿ ದೊಡ್ಡ ಕಾರ್ಯಕ್ರಮ ಇದಾಗಿರುತ್ತದೆ ಎಂದು ಅವರು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ), ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪೋಷಣ್ ಅಭಿಯಾನ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ಮತ್ತು ನಗರ), ಜಲ ಜೀವನ್ ಮಿಷನ್ ಮತ್ತು ಅಮೃತ್ ಯೋಜನೆ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸೌಲಭ್ಯ ಪಡೆದಿರುವ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಯ್ದ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಈ ಯೋಜನೆಗಳ ಮೂಲಕ ನಾಗರಿಕರ ಜೀವನ ಪ್ರಕ್ರಿಯೆ ಸುಗಮಗೊಳಿಸಲು ನೆರವಾಗುವಂತೆ ಅಳವಡಿಸಿಕೊಂಡಿರುವ ಜನ-ಕೇಂದ್ರಿತ ಮಾರ್ಗಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯವನ್ನು ಈ ಸಂವಾದವು ಮಾಡುವುದಲ್ಲದೇ, ರಾಷ್ಟ್ರದ ಪ್ರಗತಿಯ ಹಾದಿಯಲ್ಲಿ ಯಾರೊಬ್ಬರೂ ಹಿಂದುಳಿದಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಜನರ ಆಕಾಂಕ್ಷೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನವನ್ನೂ ಮಾಡಲಿದೆ ಎಂಬ ನಿರೀಕ್ಷೆಯಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವೆಬ್‌ಕಾಸ್ಟ್ ಮೂಲಕ… ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮೋದಿ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತನ್ನು ಸಹ ಬಿಡುಗಡೆ ಮಾಡಲಿದ್ದಾರೆ. ರಾಷ್ಟ್ರೀಯ ಸಮ್ಮೇಳನವನ್ನು ದೂರದರ್ಶನದ ಮೂಲಕ ಅದರ ರಾಷ್ಟ್ರೀಯ ಮತ್ತು ಪ್ರಾದೇಶಿಕ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. MyGov ಮೂಲಕ ರಾಷ್ಟ್ರೀಯ ಕಾರ್ಯಕ್ರಮವನ್ನು ವೆಬ್‌ಕಾಸ್ಟ್ ಮಾಡಲು ಸಹ ನಿಬಂಧನೆಗಳನ್ನು ಮಾಡಲಾಗಿದೆ, ಇದಕ್ಕಾಗಿ ಜನರು ತಮ್ಮನ್ನು ನೋಂದಾಯಿಸಿಕೊಳ್ಳಬೇಕು. ಇದನ್ನು ಇತರ ಸಾಮಾಜಿಕ ಮಾಧ್ಯಮ ಚಾನಲ್‌ಗಳಾದ ಯೂಟ್ಯೂಬ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಇತ್ಯಾದಿಗಳ ಮೂಲಕವೂ ವೀಕ್ಷಿಸಬಹುದು ಎಂದು ಅವರು ತಿಳಿಸಿದರು.

Published On - 10:15 pm, Mon, 30 May 22

ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ