AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು!

ಇಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಭೀಕರ ವಿಮಾನ ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಈ ವಿಮಾನ ಅಪಘಾತದಲ್ಲಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಅಜಿತ್ ಪವಾರ್ ಸೇರಿದಂತೆ ಐವರು ವಿಮಾನ ಪತನದಲ್ಲಿ ಮೃತಪಟ್ಟಿದ್ದಾರೆ. ಬೆಂಕಿ ಹೊತ್ತಿಕೊಂಡು ಛಿದ್ರವಾಗಿದ್ದ ಅಜಿತ್ ಪವಾರ್ ಅವರ ಮೃತದೇಹವನ್ನು ಪತ್ತೆಹಚ್ಚಲು ಸಹಾಯ ಮಾಡಿದ್ದು ಅವರ ಕೈಗೆ ಕಟ್ಟಿದ್ದ ವಾಚ್! ಇಂದು ಅಕ್ಷರಶಃ ಅಜಿತ್ ಪವಾರ್ ಅವರ ಟೈಂ ಚೆನ್ನಾಗಿರಲಿಲ್ಲ. ನಿಮಗೆ ಗೊತ್ತಿರಬಹುದು, ಅಜಿತ್ ಪವಾರ್ ಅವರ ಪಕ್ಷವಾದ ಎನ್‌ಸಿಪಿಯ ಅಧಿಕೃತ ಚುನಾವಣಾ ಚಿಹ್ನೆ ಕೂಡ ಗಡಿಯಾರ.

ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು!
Ajit Pawar's Plane CrashImage Credit source: PTI
ಸುಷ್ಮಾ ಚಕ್ರೆ
|

Updated on: Jan 28, 2026 | 5:14 PM

Share

ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ (Ajit Pawar) ಸೇರಿದಂತೆ ಒಟ್ಟು ಐವರು ಪ್ರಯಾಣಿಸುತ್ತಿದ್ದ ವಿಮಾನವೊಂದು ಇಂದು ಬೆಳಗ್ಗೆ ಮಹಾರಾಷ್ಟ್ರದ ಪುಣೆಯಲ್ಲಿ ಅಪಘಾತಕ್ಕೀಡಾಗಿ ಎಲ್ಲರೂ ಸಾವನ್ನಪ್ಪಿದ್ದಾರೆ. ದೆಹಲಿ ಮೂಲದ ವಿಎಸ್‌ಆರ್ ವೆಂಚರ್ಸ್ ನಿರ್ವಹಿಸುತ್ತಿದ್ದ ಲಿಯರ್‌ಜೆಟ್ 46 ಮುಂಬೈನಿಂದ ಟೇಕ್ ಆಫ್ ಆದ 35 ನಿಮಿಷಗಳ ನಂತರ ಇಂದು ಬೆಳಿಗ್ಗೆ 8.45ರ ಸುಮಾರಿಗೆ ಪತನವಾಗಿದೆ.

ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮಾತ್ರವಲ್ಲದೆ ಅಜಿತ್ ಪವಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ಫ್ಲೈಟ್ ಅಟೆಂಡೆಂಟ್ ಮತ್ತು ಇಬ್ಬರು ಸಿಬ್ಬಂದಿ (ಇಬ್ಬರು ಪೈಲಟ್​ಗಳು) ಕೂಡ ಈ ದುರಂತದಲ್ಲಿ ಮೃತಪಟ್ಟಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ. ದಟ್ಟ ಮಂಜಿನಿಂದಾಗಿ ಏನೂ ಗೋಚರವಾಗದ ಪರಿಸ್ಥಿತಿ ಇದ್ದುದರಿಂದ ಪೈಲಟ್ ತುರ್ತು ಲ್ಯಾಂಡಿಂಗ್​ಗೆ ಪ್ರಯತ್ನಿಸುತ್ತಿದ್ದರು.

ಇದನ್ನೂ ಓದಿ: ವಿಮಾನ ಪತನದಲ್ಲಿ ಅಜಿತ್ ಪವಾರ್ ಸಾವು: 2023ರಲ್ಲಿ ಕೂಡ ಈ ವಿಮಾನ ಪತನಗೊಂಡಿತ್ತು

ಆದರೆ, ಅಷ್ಟರಲ್ಲೇ ವಿಮಾನ ಅಪಘಾತಕ್ಕೀಡಾಗಿದೆ. ಪತನದ ಬಳಿಕ ವಿಮಾನಕ್ಕೆ ಬೆಂಕಿ ತಗುಲಿದೆ. ಇದರಿಂದ ವಿಮಾನದಲ್ಲಿದ್ದ ಎಲ್ಲರ ದೇಹವೂ ಛಿದ್ರವಾಗಿತ್ತು. ಅದನ್ನು ಗುರುತಿಸಲು ಸಾಧ್ಯವಾಗದ ಸ್ಥಿತಿಯಲ್ಲಿತ್ತು. ಈ ವೇಳೆ ಅಜಿತ್ ಪವಾರ್ ಅವರ ದೇಹವನ್ನು ಅವರ ಕೈಗಡಿಯಾರದಿಂದ ಗುರುತಿಸಲಾಗಿದೆ. ವಿಪರ್ಯಾಸವೆಂದರೆ ಎನ್‌ಸಿಪಿಯ ಅಧಿಕೃತ ಚುನಾವಣಾ ಚಿಹ್ನೆ ಕೂಡ ಗಡಿಯಾರ.

ಮಹಾರಾಷ್ಟ್ರದಲ್ಲಿ ಫೆಬ್ರವರಿ 5ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪ್ರಚಾರದ ಭಾಗವಾಗಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು 66 ವರ್ಷದ ಅಜಿತ್ ಪವಾರ್ ಬಾರಾಮತಿಗೆ ಪ್ರಯಾಣಿಸುತ್ತಿದ್ದರು. ಅಜಿತ್ ಪವಾರ್ ರಾಜ್ಯಸಭೆಯ ಸದಸ್ಯರಾದ ತಮ್ಮ ಪತ್ನಿ ಸುನೇತ್ರಾ ಮತ್ತು ಇಬ್ಬರು ಪುತ್ರರಾದ ಪಾರ್ಥ್ ಮತ್ತು ಜೇ ಅವರನ್ನು ಅಗಲಿದ್ದಾರೆ.

ಇದನ್ನೂ ಓದಿ: ಅಜಿತ್ ಪವಾರ್ ಆಸ್ತಿಮೌಲ್ಯ 120 ಕೋಟಿಗೂ ಅಧಿಕ; ಮನೆ, ಕಾರು, ಬಾಂಡ್, ಠೇವಣಿ, ಇನ್ಷೂರೆನ್ಸ್ ಇತ್ಯಾದಿ ಅವರ ಆಸ್ತಿ ವಿವರ

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಈಗಾಗಲೇ ತನ್ನ ತನಿಖೆಯನ್ನು ಆರಂಭಿಸಿದೆ. ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ಧ್ವನಿ ರೆಕಾರ್ಡರ್ ವಿಮಾನದ ಅಂತಿಮ ಕ್ಷಣಗಳನ್ನು ಸ್ಥಾಪಿಸುವಲ್ಲಿ ನಿರ್ಣಾಯಕವಾಗಿರುತ್ತದೆ. ಅಜಿತ್ ಪವಾರ್ ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಅವರು ಉಪಮುಖ್ಯಮಂತ್ರಿಯಾಗಿ ಆರನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದರು. ಆದರೆ, ಅವರಿಂದು ದುರಂತವಾಗಿ ಮೃತಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!
ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!
ಅಜಿತ್ ಪವಾರ್ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಸಂತಾಪ
ಅಜಿತ್ ಪವಾರ್ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಸಂತಾಪ
ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ
ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ
ಜಾತ್ರೆಯ ರಥಕ್ಕೇ ಹೋಗಿ ಡಿಕ್ಕಿ ಹೊಡೆಯಿತು ಎತ್ತಿನಗಾಡಿ!
ಜಾತ್ರೆಯ ರಥಕ್ಕೇ ಹೋಗಿ ಡಿಕ್ಕಿ ಹೊಡೆಯಿತು ಎತ್ತಿನಗಾಡಿ!
VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್
VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್
‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ
‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ