ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪುಣೆಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದ ಬಳಿ ಈ ದುರಂತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಕೇವಲ 20 ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದ ಪವಾರ್ ಅವರ ದಿಢೀರ್ ಸಾವು ರಾಜ್ಯಕ್ಕೆ ಆಘಾತ ತಂದಿದೆ. ಅವರ ರಾಜಕೀಯ ಜೀವನ ಮತ್ತು ಜನಸೇವೆಯನ್ನು ಸ್ಮರಿಸಲಾಗುತ್ತಿದೆ.

ಪುಣೆ, ಜನವರಿ 28: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇಂದು ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಅಜಿತ್ ಪವಾರ್ ಗುಣವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಕೇವಲ 20 ದಿನಗಳ ಹಿಂದೆ, ಜನವರಿ 8 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಅಜಿತ್ ಪವಾರ್ ಸಹಾಯ ಮಾಡಿದ್ದರು.
ಅಪಘಾತದ ಸ್ಥಳದಲ್ಲಿ ಹೋಗುತ್ತಿದ್ದ ಅಜಿತ್ ಪವಾರ್, ಶಿಷ್ಟಾಚಾರವನ್ನು ಮುರಿದು, ಅಜಿತ್ ಪವಾರ್ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದರು. ಇದಲ್ಲದೆ, ಅವರು ತಕ್ಷಣವೇ ಗಾಯಗೊಂಡ ಯುವಕನಿಗೆ ಸ್ಥಳದಲ್ಲೇ ಸಹಾಯ ಮಾಡಿದ್ದರು ಮತ್ತು ತಕ್ಷಣದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲು ಸಹಾಯ ಮಾಡಿದ್ದರು.
ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡುವುದನ್ನು ಅವರು ಹೆಚ್ಚು ಮುಖ್ಯವೆಂದು ಅವರು ಭಾವಿಸಿದ್ದರು. ಅವರನ್ನು ಚಿಕಿತ್ಸೆಗೆ ಕರೆದೊಯ್ಯಲು ಶಿಷ್ಟಾಚಾರವನ್ನು ಮುರಿದಿದ್ದರು. ಆ ದಿನ, ಅಜಿತ್ ಪವಾರ್ ಪುಣೆಯಲ್ಲಿರುವ ತಮ್ಮ ನಿವಾಸ ಜಿಜೈನಿಂದ ಪಿಂಪ್ರಿ-ಚಿಂಚ್‌ವಾಡ್‌ಗೆ ಪ್ರಯಾಣಿಸುತ್ತಿದ್ದಾಗ, ಅಪಘಾತದಿಂದ ಗಾಯಗೊಂಡಿದ್ದ ಬೈಕ್ ಸವಾರನನ್ನು ಕಂಡಿದ್ದರು.
ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 8.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಮುಂಬೈನಿಂದ ಬಾರಾಮತಿಗೆ ಹಾರುತ್ತಿದ್ದ ಖಾಸಗಿ ಚಾರ್ಟರ್ ವಿಮಾನವು ಇಳಿಯುವ ಕೆಲವೇ ಕ್ಷಣಗಳ ಮೊದಲು ಕೆಳಗೆ ಅಪ್ಪಳಿಸಿದೆ. ಪೈಲಟ್ ನಿಯಂತ್ರಣ ಕಳೆದುಕೊಂಡಿದ್ದರಿಂದ ವಿಮಾನವನ್ನು ಕ್ರ್ಯಾಶ್ ಲ್ಯಾಂಡಿಂಗ್ ಮಾಡಿದ ಕಾರಣ ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು ಎಂದು ವರದಿಯಾಗಿದೆ.
ಅಜಿತ್ ಪವಾರ್ 1982 ರಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಂಡಳಿಯಲ್ಲಿ ಸ್ಥಾನ ಪಡೆಯುವ ಮೂಲಕ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. 1991 ರಲ್ಲಿ, ಅವರು ಪುಣೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದರು.
ಮತ್ತಷ್ಟು ಓದಿ: ಅಜಿತ್ ಪವಾರ್ ಇದ್ದ ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಅವರು ಮೊದಲು 1991 ರಲ್ಲಿ ಬಾರಾಮತಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು ಆದರೆ ನಂತರ ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಟ್ಟರು. ಪವಾರ್ ಅವರು ಬಾರಾಮತಿಯಿಂದ ಏಳು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದರು. 1991 ರ ಉಪಚುನಾವಣೆಯಲ್ಲಿ ಮತ್ತು ನಂತರ 1995, 1999, 2004, 2009 ಮತ್ತು 2014 ರಲ್ಲಿ ಗೆದ್ದಿದ್ದರು.
ನವೆಂಬರ್ 2019 ರಲ್ಲಿ, ಅವರು NCPಯನ್ನು ಒಡೆದು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರವನ್ನು ಸೇರಿಕೊಂಡಿದ್ದರು ಮತ್ತು ಉಪಮುಖ್ಯಮಂತ್ರಿಯಾಗಿದ್ದರು. ಫೆಬ್ರವರಿ 2024 ರಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
