Baba Siddique: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ

ಬಾಬಾ ಸಿದ್ದಿಕಿ ಕಚೇರಿ ಸಮೀಪದ ರಾಮಮಂದಿರ ಬಳಿಯೇ ಕೃತ್ಯವೆಸಗಲಾಗಿದೆ. ಬಾಬಾ ಸಿದ್ದಿಕಿ ಮೇಲೆ ಎರಡು ಮೂರು ಸುತ್ತು ಗುಂಡು ಹಾರಿಸಲಾಗಿದೆ. ಅದರಲ್ಲಿ ಒಂದು ಗುಂಡು ಅವರ ಎದೆಗೆ ತಗುಲಿತು. ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Baba Siddique: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ
ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 12, 2024 | 11:16 PM

ಮುಂಬೈ, ಅಕ್ಟೋಬರ್​ 12: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಬಣದ ಎನ್​ಸಿಪಿ ಹಿರಿಯ ನಾಯಕ ಬಾಬಾ ಸಿದ್ದಿಕಿ (Baba Siddique) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವಂತಹ ಘಟನೆ ಮುಂಬೈನ ಬಾಂದ್ರಾ ಪಶ್ಚಿಮ ಭಾಗದಲ್ಲಿ ನಡೆದಿದೆ. ಎದೆ, ಹೊಟ್ಟೆ ಭಾಗಕ್ಕೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಗಂಭೀರ ಗಾಯಗೊಂಡಿದ್ದ ಸಿದ್ದಿಕಿರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುರಿಸೆಳೆದಿದ್ದಾರೆ.

ಇಂದು ರಾತ್ರಿ 9.15 ರ ಸುಮಾರಿಗೆ ನಿರ್ಮಲ್ ನಗರ ಪ್ರದೇಶದಲ್ಲಿ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿ ಹತ್ಯೆಗೈಯಲಾಗಿದೆ. ಬಾಬಾ ಸಿದ್ದಿಕಿ ಕಚೇರಿ ಸಮೀಪದ ರಾಮಮಂದಿರ ಬಳಿಯೇ ಕೃತ್ಯವೆಸಗಲಾಗಿದೆ. ಬಾಬಾ ಸಿದ್ದಿಕಿ ಮೇಲೆ ಎರಡು ಮೂರು ಸುತ್ತು ಗುಂಡು ಹಾರಿಸಲಾಗಿದೆ. ಅದರಲ್ಲಿ ಒಂದು ಗುಂಡು ಅವರ ಎದೆಗೆ ತಗುಲಿತು. ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ರೈಲು ಅಪಘಾತಕ್ಕೆ ಕಾರಣವೇನು? ರೈಲ್ವೆ ಅಧಿಕಾರಿ ಹೀಗಂತಾರೆ…

ಬಾಬಾ ಸಿದ್ದಿಕಿ ಜೊತೆಗಿದ್ದ ಸಹೋದ್ಯೋಗಿ ಕಾಲಿಗೆ ಕೂಡ ಗುಂಡು ತಗುಲಿದೆ. ಸದ್ಯ ವಿಡಿಯೋ ಒಂದು ವೈರಲ್ ಆಗಿದೆ. ಕಳೆದ 15 ದಿನಗಳ ಹಿಂದೆ ಬಾಬಾ ಸಿದ್ದಿಕಿ ಅವರಿಗೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಬಾಬಾ ಸಿದ್ದಿಕಿ ನಿಧನದ ಸುದ್ದಿ ತಿಳಿದ ತಕ್ಷಣ ಸಾಕಷ್ಟು ಕಾರ್ಯಕರ್ತರು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ. ಆಶಿಶ್ ಶೇಲಾರ್ ಇತ್ತೀಚೆಗೆ ಲೀಲಾವತಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಾಬಾ ಸಿದ್ದಿಕಿ ಶಾಸಕ ಜೀಶನ್ ಸಿದ್ದಿಕಿ ಅವರ ತಂದೆ. ಕೆಲ ದಿನಗಳ ಹಿಂದೆ ಎನ್‌ಸಿಪಿ ಸೇರಿದ್ದರು. ನಟ ಸಯಾಜಿ ಶಿಂಧೆ ಅವರ ಪಾರ್ಟಿ ಸೇರ್ಪಡೆ ಸಂದರ್ಭದಲ್ಲಿ ಅವರು ಉಪಸ್ಥಿತರಿದ್ದರು.

ಬಾಬಾ ಸಿದ್ದಿಕಿ ಯಾರು?

ಬಾಬಾ ಸಿದ್ದಿಕಿ ರಾಜಕಾರಣಿ ಮಾತ್ರವಲ್ಲದೆ ಅವರ ಹೆಸರು ಬಾಲಿವುಡ್‌ನಲ್ಲೂ ಪ್ರಸಿದ್ಧವಾಗಿದೆ. ಪ್ರತಿ ವರ್ಷ ಇವರು ಆಯೋಜಿಸುವ ಇಫ್ತಾರ್ ಕೂಟ ಮನೆಮಾತಾಗಿದೆ. ಬಾಲಿವುಡ್ ಸೆಲೆಬ್ರಿಟಿಗಳು ಮಾತ್ರವಲ್ಲದೆ ಅನೇಕ ಕಿರುತೆರೆ ತಾರೆಯರು ಕೂಡ ಈ ಪಾರ್ಟಿಯಲ್ಲಿ ಭಾಗವಹಿಸುತ್ತಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಕೂಡ ಸಿದ್ದಿಕಿ ಅವರ ಪಾರ್ಟಿಗೆ ತಪ್ಪದೇ ಬರುತ್ತಿದ್ದರು. ಸಲ್ಮಾನ್ ಖಾನ್ ಬಾಬಾ ಸಿದ್ದಿಕಿ ಜೊತೆ ನಿಕಟ ಸಂಬಂಧ ಹೊಂದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:53 pm, Sat, 12 October 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ