ಪ್ರಯಾಗ್ ರಾಜ್: ಅಖಿಲ ಭಾರತೀಯ ಅಖಾಡ ಪರಿಷತ್ತಿನ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಮಹಾರಾಜ್ (Mahant Narendra Giri) ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿರುವ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೆ, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೂಲಗಳ ಪ್ರಕಾರ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು ಅದನ್ನು ಮುರಿಯಬೇಕಾಯಿತು. ನರೇಂದ್ರ ಗಿರಿ ಮಹಾರಾಜ್ ನೈಲಾನ್ ಹಗ್ಗಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಟಿಪ್ಪಣಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವರು ಮಾನಸಿಕವಾಗಿ ಕುಸಿದಿದ್ದರು ಎಂದು ಉಲ್ಲೇಖಿಸಲಾಗಿದೆ.
ನರೇಂದ್ರ ಗಿರಿ ಮಹಾರಾಜ್ ಅವರಿಗೆ 72 ವರ್ಷ ವಯಸ್ಸಾಗಿತ್ತು ಮತ್ತು ಏಪ್ರಿಲ್‌ನಲ್ಲಿಅವರು ಕೊವಿಡ್ -19 ಸೋಂಕಿಗೆ ಒಳಗಾಗಿದ್ದರು. ಅವರು ತನ್ನ ಆಶ್ರಮದೊಳಗೆ ಕ್ವಾರಂಟೈನ್ ಆಗಿದ್ದರು.
Prayagraj: President of Akhil Bharatiya Akhada Parishad, Mahant Narendra Giri found dead at his Baghambari Math located residence. A forensic team & a special team is carrying out the investigation, senior officials also present. Details awaited.
(File photo) pic.twitter.com/f8E6Y0mZTL
— ANI UP (@ANINewsUP) September 20, 2021
ನರೇಂದ್ರ ಗಿರಿ ಮಹಾರಾಜ್ ನಿಧನಕ್ಕೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಸಂತಾಪ ಸೂಚಿಸಿದ್ದಾರೆ.
अखिल भारतीय अखाड़ा परिषद के अध्यक्ष महंत नरेंद्र गिरि जी का ब्रह्मलीन होना आध्यात्मिक जगत की अपूरणीय क्षति है।
प्रभु श्री राम से प्रार्थना है कि दिवंगत पुण्यात्मा को अपने श्री चरणों में स्थान तथा शोकाकुल अनुयायियों को यह दुःख सहने की शक्ति प्रदान करें।
ॐ शांति!
— Yogi Adityanath (@myogiadityanath) September 20, 2021
ಅಖಿಲ ಭಾರತೀಯ ಅಖಾಡ ಪರಿಷತ್ತಿನ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅವರ ನಿಧನ ಆಧ್ಯಾತ್ಮಿಕ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಭಗವಂತ ರಾಮನಿಗೆ ಅವರ ಚೈತನ್ಯವನ್ನು ಅವರ ಪಾದದಲ್ಲಿ ನೀಡಲಿ ಮತ್ತು ಅವರ ನೋವನ್ನು ಭರಿಸುವ ಶಕ್ತಿಯನ್ನು ಅನುಯಾಯಿಗಳಿಗೆ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ ಟ್ವೀಟ್ ಮಾಡಿದ್ದಾರೆ.
अखाड़ा परिषद के अध्यक्ष श्री नरेंद्र गिरि जी का देहावसान अत्यंत दुखद है। आध्यात्मिक परंपराओं के प्रति समर्पित रहते हुए उन्होंने संत समाज की अनेक धाराओं को एक साथ जोड़ने में बड़ी भूमिका निभाई। प्रभु उन्हें अपने श्री चरणों में स्थान दें। ॐ शांति!!
— Narendra Modi (@narendramodi) September 20, 2021
ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅವರ ನಿಧನ ಅತ್ಯಂತ ದುಃಖಕರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕುಮಾರವ್ಯಾಸನ ಪದ್ಯ ಓದಿ ಸಿದ್ದರಾಮಯ್ಯಗೆ ಟಾಂಗ್; ಮೋದಿ ಪ್ರಧಾನಿ ಆದ್ಮೇಲೆ ದೇಶದ ಬೆಲೆ ಹೆಚ್ಚಾಗಿದೆ: ಸಿಎಂ ಬೊಮ್ಮಾಯಿ
ಇದನ್ನೂ ಓದಿ: ಪಂಜಾಬ್ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಅಭಿನಂದನೆ; ಜನರ ಒಳಿತು ನಮ್ಮ ಆದ್ಯತೆಯಾಗಲಿ ಎಂದ ಮೋದಿ
(Akhara Parishad head Mahant Narendra Giri Maharaj found dead at Prayagraj)