ಅಯೋಧ್ಯೆ ಅತ್ಯಾಚಾರ ಪ್ರಕರಣ; ಡಿಎನ್‌ಎ ಪರೀಕ್ಷೆಯಿಂದ ನ್ಯಾಯ ಸಿಗುತ್ತದೆಯೇ ವಿನಃ ರಾಜಕೀಯದಿಂದಲ್ಲ ಎಂದ ಅಖಿಲೇಶ್ ಯಾದವ್

Ayodhya Sexual Harassment Case: ಅಯೋಧ್ಯೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರದ ಕುರಿತಾದ ರಾಜಕೀಯದ ಬಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಡಿಎನ್‌ಎ ಪರೀಕ್ಷೆ ನಡೆಸಿ ನ್ಯಾಯ ದೊರಕಿಸಿಕೊಡುವಂತೆ ಅವರು ಒತ್ತಾಯಿಸಿದ್ದಾರೆ.

ಅಯೋಧ್ಯೆ ಅತ್ಯಾಚಾರ ಪ್ರಕರಣ; ಡಿಎನ್‌ಎ ಪರೀಕ್ಷೆಯಿಂದ ನ್ಯಾಯ ಸಿಗುತ್ತದೆಯೇ ವಿನಃ ರಾಜಕೀಯದಿಂದಲ್ಲ ಎಂದ ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Follow us
ಸುಷ್ಮಾ ಚಕ್ರೆ
|

Updated on: Aug 03, 2024 | 7:08 PM

ಲಕ್ನೋ: ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರೋಪಿ ಮೊಯಿದ್ ಖಾನ್ ಸಮಾಜವಾದಿ ಪಕ್ಷಕ್ಕೆ ಸೇರಿದವರು ಎಂದು ಹೇಳಿದ್ದರು. ಇದೀಗ ಅಯೋಧ್ಯೆ ಅತ್ಯಾಚಾರ ಪ್ರಕರಣದ ಕುರಿತು ಮೌನ ಮುರಿದಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ನಿಜವಾದ ಅಪರಾಧಿಯನ್ನು ಕಂಡುಹಿಡಿಯಲು ಆರೋಪಿಗಳಿಗೆ ಡಿಎನ್‌ಎ ಪರೀಕ್ಷೆ ಮಾಡಬೇಕು ಎಂದು ಇಂದು ಒತ್ತಾಯಿಸಿದ್ದಾರೆ. ಅಯೋಧ್ಯೆಯಲ್ಲಿ 12 ವರ್ಷದ ಬಾಲಕಿಯ ಮೇಲೆ ಸಮಾಜವಾದಿ ಪಕ್ಷದ ಸದಸ್ಯ ಸೇರಿದಂತೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದರು.

ಆರೋಪಿಗಳ ಡಿಎನ್‌ಎ ಪರೀಕ್ಷೆ ಮಾಡಿಸುವ ಮೂಲಕ ನ್ಯಾಯ ಸಿಗುತ್ತದೆಯೇ ಹೊರತು ಕೇವಲ ಆರೋಪ ಮಾಡಿ ರಾಜಕೀಯ ಮಾಡುವುದರಿಂದ ಅಲ್ಲ ಎಂದಿರುವ ಅಖಿಲೇಶ್ ಯಾದವ್ ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಸಂಪೂರ್ಣ ಶಿಕ್ಷೆಯಾಗಬೇಕು ಎಂದಿದ್ದಾರೆ. ಆದರೆ ಡಿಎನ್‌ಎ ಪರೀಕ್ಷೆಯ ನಂತರ ಆರೋಪಗಳು ಸುಳ್ಳು ಎಂದು ಸಾಬೀತಾದರೆ, ಅದರಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳನ್ನು ಸಹ ಬಿಡಬಾರದು. ಇದು ನ್ಯಾಯದ ಬೇಡಿಕೆಯಾಗಿದೆ ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Crime News: ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ

ವಿರೋಧ ಪಕ್ಷದ ನಾಯಕ ಮತ್ತು ಎಸ್‌ಪಿ ನಾಯಕ ಅವಧೇಶ್ ಪ್ರಸಾದ್ ಕೂಡ ಸತ್ಯವನ್ನು ಕಂಡುಹಿಡಿಯಬೇಕು ಮತ್ತು ಅಮಾಯಕರನ್ನು ಬಂಧಿಸಬಾರದು ಎಂದು ಹೇಳಿದ್ದಾರೆ. “ಈ ಘಟನೆಗೆ ಸಂಬಂಧಿಸಿದಂತೆ ಇದು ತುಂಬಾ ನೋವಿನ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲ ಜನರನ್ನು ತನಿಖೆ ಮಾಡಬೇಕು, ಸತ್ಯವನ್ನು ಕಂಡುಹಿಡಿಯಬೇಕು ಮತ್ತು ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಸಂಪೂರ್ಣ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಪಕ್ಷವು ಸಂತ್ರಸ್ತರ ಸಹಾಯಕ್ಕೆ ಸದಾ ಇರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು, ನೇಣು ಹಾಕಿದ ಪಾಪಿಗಳು

ಭಾರತೀಯ ಜನತಾ ಪಕ್ಷವು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ. ನಾನು ಅಂತಹ ಜನರಲ್ಲಿ ವಿನಮ್ರವಾಗಿ ವಿನಂತಿಸುತ್ತೇನೆ. ಇದು ರಾಜಕೀಯ ಮಾಡಬೇಕಾದ ಕ್ಷಣವಲ್ಲ. ಅಮಾಯಕರನ್ನು ಬಂಧಿಸಿ ಡಿಎನ್‌ಎ ಪರೀಕ್ಷೆ ನಡೆಸಬಾರದು. ಸಂತ್ರಸ್ತೆಗೆ ಸಹಾಯ ಮಾಡಬೇಕು. ಬಿಜೆಪಿ ಈ ರೀತಿಯ ರಾಜಕೀಯ ಮಾಡಬಾರದು ಎಂದು ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ