ಸೀಟು ಹಂಚಿಕೆ ಕುರಿತು ಅಂತಿಮ ತೀರ್ಮಾನಕ್ಕೆ ಬರುವವರೆಗೂ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ: ಅಖಿಲೇಶ್​

ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಭಾಗವಹಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಎಸ್ಪಿ ಭಾಗವಹಿಸುವುದಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಸೀಟು ಹಂಚಿಕೆ ಕುರಿತು ಅಂತಿಮ ತೀರ್ಮಾನಕ್ಕೆ ಬರುವವರೆಗೂ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ: ಅಖಿಲೇಶ್​
ಅಖಿಲೇಶ್ ಯಾದವ್

Updated on: Feb 19, 2024 | 1:59 PM

ಕಾಂಗ್ರೆಸ್​ನ ಭಾರತ್​ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra)ಯಲ್ಲಿ ಪಾಲ್ಗೊಳ್ಳಬೇಕಾದರೆ ಒಂದು ಷರತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್(Akhilesh Yadav) ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿನ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳ್ಳದ ಹೊರತು ತಾನು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅಖಿಲೇಶ್​ ಹೇಳಿದ್ದಾರೆ. ಸೀಟುಗಳ ಸಂಖ್ಯೆ ಮತ್ತು ಸ್ಥಾನಗಳ ಹೆಸರುಗಳನ್ನು ಈಗಾಗಲೇ ನಿರ್ಧರಿಸಲಾಗಿದೆ, ಆದರೆ ರಾಹುಲ್ ಗಾಂಧಿ ಕೆಲವು ಸ್ಥಾನಗಳಲ್ಲಿ ಅಚಲವಾಗಿದ್ದು, ಮೈತ್ರಿಯನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ಮಾತುಕತೆ ನಡೆದಿದೆ, ಆದರೆ ಸೀಟುಗಳ ಬಗ್ಗೆ ಇನ್ನೂ ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಲೋಕಸಭೆ ಚುನಾವಣೆಗೂ ಮುನ್ನ ಅಮೇಥಿಯಲ್ಲಿ ಮತ್ತೆ ರಾಜಕೀಯ ಬಿಸಿ ಏರುತ್ತಿದೆ. ಒಂದೆಡೆ ಇಂದು ಅಮೇಥಿ ಮಾಜಿ ಸಂಸದ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯೊಂದಿಗೆ ಬಹಳ ದಿನಗಳ ನಂತರ ಅಮೇಥಿಗೆ ಬರುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸಚಿವೆ ಹಾಗೂ ಸಂಸದೆ ಸ್ಮೃತಿ ಇರಾನಿ ಕೂಡ  ತಮ್ಮ ಸಂಸದೀಯ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಅಮೇಥಿಯಲ್ಲಿ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಜೈರಾಮ್ ರಮೇಶ್ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಾತನಾಡಿ, ಭಾರತ್ ಜೋಡೋ ನ್ಯಾಯ ಯಾತ್ರೆಯ 37ನೇ ದಿನ ಇಂದು. ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಬಾಬುಗಂಜ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ರಾತ್ರಿ ನಾವು ಅಮೇಥಿಯಲ್ಲಿ ಉಳಿಯುತ್ತೇವೆ. ಅಖಿಲೇಶ್ ಯಾದವ್ ಕೂಡ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದಿದ್ದರು.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಎಸ್​ಪಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ: ಮಾಯಾವತಿ

ಫೆಬ್ರವರಿ 5 ರಂದು ರಾಹುಲ್ ಗಾಂಧಿ ಭೇಟಿಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಹ್ವಾನವನ್ನು ಅಖಿಲೇಶ್ ಯಾದವ್ ಸ್ವೀಕರಿಸಿದ್ದರು. ಫೆಬ್ರವರಿ 16 ರಂದು ಯಾತ್ರೆ ಉತ್ತರ ಪ್ರದೇಶವನ್ನು ಪ್ರವೇಶಿಸಿದ ನಂತರ ಅಮೇಥಿ ಅಥವಾ ರಾಯ್ ಬರೇಲಿಯಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಎಸ್ಪಿ ಮುಖ್ಯಸ್ಥರು ಒಪ್ಪಿಗೆ ನೀಡಿದ್ದರು.

ಈ ಯಾತ್ರೆಯು ಉತ್ತರ ಪ್ರದೇಶವನ್ನು ಪ್ರವೇಶಿಸುತ್ತದೆ ಮತ್ತು PDA (ಹಿಂದುಳಿದ, ದಲಿತ, ಅಲ್ಪಸಂಖ್ಯಾತ) ತಂತ್ರದೊಂದಿಗೆ ಸಂಪರ್ಕ ಸಾಧಿಸುತ್ತದೆ ಮತ್ತು ನಮ್ಮ ಸಾಮಾಜಿಕ ನ್ಯಾಯ ಮತ್ತು ಪರಸ್ಪರ ಸಾಮರಸ್ಯದ ಆಂದೋಲನವನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ 11 ಸ್ಥಾನಗಳನ್ನು ಎಸ್‌ಪಿ ನೀಡುವುದಾಗಿ ಹೇಳಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us