AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ವಿಪಕ್ಷ ನಾಯಕ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ ಸಾಧ್ಯತೆ

ಲೋಕಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಬಗ್ಗೆ ಪಕ್ಷದಲ್ಲಿ ಇನ್ನೂ ನಿರ್ಧಾರವಾಗಿಲ್ಲ.

ಉತ್ತರ ಪ್ರದೇಶ ವಿಪಕ್ಷ ನಾಯಕ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ ಸಾಧ್ಯತೆ
ಅಖಿಲೇಶ್ ಯಾದವ್
ಸುಷ್ಮಾ ಚಕ್ರೆ
|

Updated on: Jun 06, 2024 | 5:11 PM

Share

ನವದೆಹಲಿ: ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರು ಕನೌಜ್ ಲೋಕಸಭಾ ಚುನಾವಣೆಯಲ್ಲಿ(Lok Sabha Elections 2024) ಗೆದ್ದ ಹಿನ್ನೆಲೆಯಲ್ಲಿ ಕರ್ಹಾಲ್ ವಿಧಾನಸಭಾ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ರಾಜೀನಾಮೆಯೊಂದಿಗೆ ಅಖಿಲೇಶ್ ಯಾದವ್ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನೂ ತ್ಯಜಿಸಲಿದ್ದಾರೆ.

ಉತ್ತರ ಪ್ರದೇಶ ರಾಜ್ಯ ವಿಧಾನಸಭೆಯಲ್ಲಿ ಅಖಿಲೇಶ್ ಯಾದವ್ ಅವರ ಬದಲಾಗಿ ವಿರೋಧ ಪಕ್ಷದ ನಾಯಕ ಯಾರಾಗಲಿದ್ದಾರೆ ಮತ್ತು ಅವರ ಬದಲಾಗಿ ವಿಧಾನಸಭಾ ಚುನಾವಣೆಗೆ ಆ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಇನ್ನೂ ಪಕ್ಷ ನಿರ್ಧಾರ ತೆಗೆದುಕೊಂಡಿಲ್ಲ. ಶಿವಪಾಲ್ ಯಾದವ್ ಅವರು ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿರುವ ಕಾರಣ ಉತ್ತರ ಪ್ರದೇಶದ ವಿಪಕ್ಷ ನಾಯಕರಾಗಿ ಅವರನ್ನು ಆಯ್ಕೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.

ಅಖಿಲೇಶ್ ಯಾದವ್ ಅವರು ಲೋಕಸಭಾ ಚುನಾವಣೆಯಲ್ಲಿ 6,42,292 ಮತಗಳಿಂದ ಗೆಲ್ಲುವ ಮೂಲಕ ಯಾದವ್ ಕುಟುಂಬದ ಭದ್ರಕೋಟೆಯಾದ ಕನೌಜ್ ಅನ್ನು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿಯ ಹಾಲಿ ಸಂಸದ ಸುಬ್ರತ್ ಪಾಠಕ್ ಅವರನ್ನು ಸೋಲಿಸಿದರು. ತೇಜ್ ಪ್ರತಾಪ್ ಯಾದವ್ ಅವರಿಗೆ ಕನೌಜ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಈ ಹಿಂದೆ ಟಿಕೆಟ್ ನೀಡಲಾಗಿತ್ತು. ಆದರೆ, ಅಖಿಲೇಶ್ ಯಾದವ್ ಅವರು ಆ ಸ್ಥಾನದಿಂದ ಸ್ಪರ್ಧಿಸಬೇಕೆಂದು ಬಯಸಿದ ಪಕ್ಷದ ಕಾರ್ಯಕರ್ತರ ಒತ್ತಾಯದಿಂದಾಗಿ ಆ ನಿರ್ಧಾರವನ್ನು ಬದಲಾಯಿಸಲಾಯಿತು.

ಇದನ್ನೂ ಓದಿ: ಉತ್ತರ ಪ್ರದೇಶದ 16 ಕ್ಷೇತ್ರಗಳಲ್ಲಿ ಬಿಜೆಪಿ ದಡ ಸೇರಲು ನೆರವಾದ ಬಿಎಸ್‌ಪಿ ಅಭ್ಯರ್ಥಿಗಳು! ಹೇಗೆಂಬ ಮಾಹಿತಿ ಇಲ್ಲಿದೆ

ಈ ಬಾರಿ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಉತ್ತರ ಪ್ರದೇಶದಲ್ಲಿ 37 ಸ್ಥಾನಗಳನ್ನು ಗೆದ್ದಿದೆ. ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಈಗ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿ ರಾಜಕೀಯದತ್ತ ಮುಖಮಾಡುವುದು ಖಚಿತವಾಗಿದೆ. ಇದಕ್ಕಾಗಿ ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಎಂಎಲ್​ಎ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕರ್ಹಾಲ್ ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಅಖಿಲೇಶ್ ಯಾದವ್ ಅವರು ವಿಧಾನಸಭೆಗೆ ರಾಜೀನಾಮೆ ನೀಡುವ ಮೂಲಕ ತಮ್ಮ ಸಂಸದ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಕರ್ಹಾಲ್ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ ನೀಡಿದ ನಂತರ, ಈ ಸ್ಥಾನದಿಂದ ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದರ ಕುರಿತು ಇನ್ನೂ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಮೈನ್‌ಪುರಿ ಮಾಜಿ ಸಂಸದ ತೇಜ್ ಪ್ರತಾಪ್ ಯಾದವ್ ಅವರನ್ನು ಕರ್ಹಾಲ್ ವಿಧಾನಸಭೆಯಿಂದ ಕಣಕ್ಕಿಳಿಸಬಹುದು ಎಂಬ ಚರ್ಚೆ ಕೂಡ ಕೇಳಿಬರುತ್ತಿದೆ.

ಇದನ್ನೂ ಓದಿ: ಅಯೋಧ್ಯೆಯ ಜನರಿಗೆ ಅನ್ಯಾಯ ಮಾಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಅಖಿಲೇಶ್ ಯಾದವ್

ಉತ್ತರ ಪ್ರದೇಶದಲ್ಲಿ 37 ಲೋಕಸಭಾ ಸ್ಥಾನಗಳನ್ನು ಗೆದ್ದ ನಂತರ, ಸಮಾಜವಾದಿ ಪಕ್ಷವು ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಮತ್ತು ಬಿಜೆಪಿ ಮತ್ತು ಕಾಂಗ್ರೆಸ್ ನಂತರ ದೇಶದ ಮೂರನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ರಾಜಕಾರಣದಲ್ಲಿ ಸಮಾಜವಾದಿ ಪಕ್ಷದ ಪಾತ್ರ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ದೊಡ್ಡ ಜವಾಬ್ದಾರಿಯನ್ನು ಸ್ವತಃ ಅಖಿಲೇಶ್ ಯಾದವ್ ನಿಭಾಯಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ