ಹಿಂದೂ ಪುರಾಣಗಳಲ್ಲಿನ ಅತ್ಯಾಚಾರದ ಉದಾಹರಣೆ ನೀಡಿದ್ದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಮಾನತು

ಎಎಂಯು ಉಪಕುಲಪತಿ ತಾರಿಕ್ ಮನ್ಸೂರ್ ಅವರಿಗೆ ಬುಧವಾರ ಪತ್ರ ಬರೆದಿರುವ ಪ್ರೊ.ಕುಮಾರ್, ‘‘ಯಾವುದೇ ನಿರ್ದಿಷ್ಟ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶವಲ್ಲ ಮತ್ತು ಅತ್ಯಾಚಾರ ನಮ್ಮ ಸಮಾಜದ ಒಂದು ಭಾಗವಾಗಿದೆ ಎಂಬುದನ್ನು ಎತ್ತಿ ತೋರಿಸಲು ಮಾತ್ರ ಇದನ್ನು ಹೇಳಲಾಗಿತ್ತು’’ ಎಂದು ಹೇಳಿದ್ದಾರೆ.

ಹಿಂದೂ ಪುರಾಣಗಳಲ್ಲಿನ ಅತ್ಯಾಚಾರದ ಉದಾಹರಣೆ ನೀಡಿದ್ದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಮಾನತು
ಅಲಿಗಢ ಮುಸ್ಲಿಂ ಯುನಿವರ್ಸಿಟಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 06, 2022 | 5:36 PM

ಅಲಿಗಢ: ವಿಧಿವಿಜ್ಞಾನ ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ (Hindu mythology) ಅತ್ಯಾಚಾರದ ಉದಾಹರಣೆಗಳನ್ನು ಉಲ್ಲೇಖಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಪ್ರಾಧ್ಯಾಪಕರನ್ನು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ  (Aligarh Muslim University)ಬುಧವಾರ ಅಮಾನತುಗೊಳಿಸಿದೆ. ಎಎಂಯು ಅಧಿಕಾರಿಗಳ ಪ್ರಕಾರ ಎಎಮ್‌ಯುನ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಿತೇಂದ್ರ ಕುಮಾರ್ (Dr Jitendra Kumar) ಅವರು ವೈದ್ಯಕೀಯ ನ್ಯಾಯಶಾಸ್ತ್ರದ ಕುರಿತು ತರಗತಿಯನ್ನು ನಡೆಸುವಾಗ ಪುರಾಣದಲ್ಲಿನ “ಅತ್ಯಾಚಾರ” ದ ಉಲ್ಲೇಖಗಳನ್ನು ಮಾಡಿದ್ದಾರೆ. ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು 24 ಗಂಟೆಯೊಳಗೆ ವಿವರಣೆ ನೀಡುವಂತೆ ಪ್ರಾಧ್ಯಾಪಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ವಿಶ್ವವಿದ್ಯಾನಿಲಯದ ಅಧಿಕಾರಿಗಳು ಇಬ್ಬರು ಸದಸ್ಯರ ತನಿಖಾ ಸಮಿತಿಯನ್ನು ಸಹ ರಚಿಸಿದ್ದಾರೆ, ಆದರೆ ವಿಚಾರಣೆಯ ಫಲಿತಾಂಶಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಸಮಸ್ಯೆಯ ಗಂಭೀರತೆ ಮತ್ತು ದುರ್ನಡತೆಯನ್ನು ಸೂಚಿಸುವ ಪ್ರಾಥಮಿಕ ಪುರಾವೆಗಳು ಇದಕ್ಕೆ ಕಾರಣ ಎಂದು ಅಧಿಕಾರಿ ಹೇಳಿದರು. ನೋಟಿಸ್ ಬಂದ ನಂತರ ಪ್ರಾಧ್ಯಾಪಕರು ಕ್ಷಮೆಯಾಚಿಸಿದರು. ಎಎಂಯು ಉಪಕುಲಪತಿ ತಾರಿಕ್ ಮನ್ಸೂರ್ ಅವರಿಗೆ ಬುಧವಾರ ಪತ್ರ ಬರೆದಿರುವ ಪ್ರೊ.ಕುಮಾರ್, ‘‘ಯಾವುದೇ ನಿರ್ದಿಷ್ಟ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶವಲ್ಲ ಮತ್ತು ಅತ್ಯಾಚಾರ ನಮ್ಮ ಸಮಾಜದ ಒಂದು ಭಾಗವಾಗಿದೆ ಎಂಬುದನ್ನು ಎತ್ತಿ ತೋರಿಸಲು ಮಾತ್ರ ಇದನ್ನು ಹೇಳಲಾಗಿತ್ತು’’ ಎಂದು ಹೇಳಿದ್ದಾರೆ.

ಇದು ಅಚಾತುರ್ಯದಿಂದ ಮಾಡಿದ ತಪ್ಪಾಗಿದೆ ಎಂದ ಅವರು, ಭವಿಷ್ಯದಲ್ಲಿ ಇಂತಹ ಘಟನೆ ನಡೆಯುವುದಿಲ್ಲ ಎಂದು ಭರವಸೆ ನೀಡಿದರು. ಸ್ಲೈಡ್ ಶೋ ಒಳಗೊಂಡ ಅವರ ಉಪನ್ಯಾಸವು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂಬ ದೂರು ಲಭಿಸಿತ್ತು.

ಉಪನ್ಯಾಸದ ವಿಡಿಯೊ ತುಣುಕನ್ನು ಯಾರೋ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ವಿವಾದ ಭುಗಿಲೆದ್ದಿದೆ. ಬುಧವಾರ ಪ್ರತಿಕ್ರಿಯೆಗಾಗಿ ವರದಿಗಾರರು ಅವರನ್ನು ಸಂಪರ್ಕಿಸಿದ ನಂತರ ಎಎಂಯು ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ.

ವೈದ್ಯಕೀಯ ವಿಭಾಗದ ಡೀನ್ ಪ್ರೊ.ರಾಕೇಶ್ ಭಾರ್ಗವ ಅವರ ಶಿಫಾರಸಿನ ಮೇರೆಗೆ ಎಎಂಯು ಅಧಿಕಾರಿಗಳು ಆರಂಭದಲ್ಲಿ ಶೋಕಾಸ್ ನೋಟಿಸ್ ನೀಡಿದ್ದರು. “ನೀವು ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರ್ವಕವಾಗಿ ತರಗತಿಯಲ್ಲಿ ಪವರ್‌ಪಾಯಿಂಟ್‌ನಲ್ಲಿ ರೇಪ್ ಎಂಬ ಶೀರ್ಷಿಕೆಯಡಿಯಲ್ಲಿ ಸ್ಲೈಡ್ ತೋರಿಸಿದ್ದೀರಿ. ಇದರಿಂದಾಗಿ ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ ಎಂದು ಎಎಮ್‌ಯು ರಿಜಿಸ್ಟ್ರಾರ್ ಅಬ್ದುಲ್ ಹಮೀದ್ ಸಂಭವನೀಯ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಹಲ್ದಿರಾಮ್​​ ತಿಂಡಿ ಪೊಟ್ಟಣದಲ್ಲಿ ‘ಉರ್ದು’ ಯಾಕೆ? ಎಂದು ಕೇಳಿದ ಟಿವಿ ರಿಪೋರ್ಟರ್​​; ಸಾಮಾಜಿಕ ಮಾಧ್ಯಮಗಳಲ್ಲಿ ‘ಉರ್ದು’, ‘ಹಲ್ದಿರಾಮ್​​’ ಟ್ರೆಂಡಿಂಗ್​​

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್