Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಈಗಾಗಲೇ ಎಲ್ಲಾ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ: ಮಮತಾ ಬ್ಯಾನರ್ಜಿ

ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಅವರು (ಬಿಜೆಪಿ) ಡಿಸೆಂಬರ್‌ನಲ್ಲಿಯೇ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂದು ನನಗೆ ಆತಂಕವಿದೆ. ಬಿಜೆಪಿ ಪಕ್ಷವು ಈಗಾಗಲೇ ನಮ್ಮ ದೇಶವನ್ನು ಸಮುದಾಯಗಳ ನಡುವೆ ವೈರತ್ವವಿರುವ ರಾಷ್ಟ್ರವಾಗಿ ಪರಿವರ್ತಿಸಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ, ಅದು ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡುತ್ತದೆ ಎಂದು ಮಮತಾ ಹೇಳಿದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಈಗಾಗಲೇ ಎಲ್ಲಾ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on: Aug 28, 2023 | 8:58 PM

ದೆಹಲಿ ಆಗಸ್ಟ್ 28: ಡಿಸೆಂಬರ್‌ನಲ್ಲೇ ಬಿಜೆಪಿ (BJP) ಲೋಕಸಭೆ ಚುನಾವಣೆಯನ್ನು (Loksabha Election) ನಡೆಸಬಹುದು. ಯಾಕೆಂದರೆ ಅದು  ಎಲ್ಲಾ ಹೆಲಿಕಾಪ್ಟರ್‌ಗಳನ್ನು ಪ್ರಚಾರಕ್ಕಾಗಿ ಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸೋಮವಾರ ಹೇಳಿದ್ದಾರೆ. ಟಿಎಂಸಿ ಯುವ ಘಟಕದ ರ್ಯಾಲಿಯಲ್ಲಿ ಮಾತನಾಡಿದ ಬ್ಯಾನರ್ಜಿ, ಬಿಜೆಪಿಗೆ ಮೂರನೇ ಅವಧಿಗೆ ಬಂದರೆ ದೇಶದಲ್ಲಿ”ನಿರಂಕುಶ” ಆಡಳಿತ ಬರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಏತನ್ಮಧ್ಯೆ, ರಾಜ್ಯದಲ್ಲಿ ಸಂಭವಿಸಿದ ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟಗಳಿಗೆ “ಕಾನೂನುಬಾಹಿರ ಚಟುವಟಿಕೆಗಳಲ್ಲಿ” ತೊಡಗಿರುವ ಕೆಲವರು ಕಾರಣ.ಇದನ್ನು “ಕೆಲವು ಪೊಲೀಸ್ ಸಿಬ್ಬಂದಿಗಳ ಬೆಂಬಲದೊಂದಿಗೆ” ಮಾಡಲಾಗುತ್ತಿದೆ ಎಂದು ಮಮತಾ ಆರೋಪಿಸಿದ್ದಾರೆ.

ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಅವರು (ಬಿಜೆಪಿ) ಡಿಸೆಂಬರ್‌ನಲ್ಲಿಯೇ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂದು ನನಗೆ ಆತಂಕವಿದೆ. ಬಿಜೆಪಿ ಪಕ್ಷವು ಈಗಾಗಲೇ ನಮ್ಮ ದೇಶವನ್ನು ಸಮುದಾಯಗಳ ನಡುವೆ ವೈರತ್ವವಿರುವ ರಾಷ್ಟ್ರವಾಗಿ ಪರಿವರ್ತಿಸಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ, ಅದು ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡುತ್ತದೆ ಎಂದು ಮಮತಾ ಹೇಳಿದ್ದಾರೆ.

2024 ರಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ. ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸಬಾರದು ಎಂದು ಬಿಜೆಪಿ ಬಯಸಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನರು ಸಾವಿಗೀಡಾದ ಕುರಿತು ಮಾತನಾಡಿದ ಸಿಎಂ, ಕೆಲವರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಮತ್ತು ಕೆಲವು ಪೊಲೀಸ್ ಸಿಬ್ಬಂದಿ ಇದನ್ನು ಬೆಂಬಲಿಸುತ್ತಿದ್ದಾರೆ.

“ಬಹುಪಾಲು ಪೊಲೀಸರು ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ, ಆದರೆ ಕೆಲವರು ಅಂತಹ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಆ್ಯಂಟಿ ರ ್ಯಾಗಿಂಗ್ ಸೆಲ್‌ನಂತೆಯೇ ನಮ್ಮಲ್ಲೂ ಬಂಗಾಳದಲ್ಲಿ ಭ್ರಷ್ಟಾಚಾರ ನಿಗ್ರಹ ಕೋಶವಿದೆ ಎಂಬುದನ್ನು ಅವರು ನೆನಪಿಟ್ಟುಕೊಳ್ಳಬೇಕು.

ಪಟಾಕಿ ಉದ್ಯಮದಲ್ಲಿ ತೊಡಗಿರುವವರು ಹಸಿರು ಪಟಾಕಿಗಳನ್ನು ತಯಾರಿಸಲು ಪ್ರಾರಂಭಿಸಬೇಕು ಎಂದು ಟಿಎಂಸಿ ಮುಖ್ಯಸ್ಥೆ ಒತ್ತಾಯಿಸಿದ್ದಾರೆ. “ಹಸಿರು ಪಟಾಕಿಗಳನ್ನು ಉತ್ಪಾದಿಸುವಲ್ಲಿ ಏನು ತೊಂದರೆ? ಬಹುಶಃ ಲಾಭ ಸ್ವಲ್ಪ ಕಡಿಮೆಯಾಗಿದೆ, ಆದರೆ ಇದು ಹೆಚ್ಚು ಸುರಕ್ಷಿತ ಮತ್ತು ಪರಿಸರ ಸ್ನೇಹಿ” ಎಂದು ಅವರು ಹೇಳಿದರು.

ಇದನ್ನೂ ಓದಿ:  ಮೋದಿಗೆ ಕರೆ ಮಾಡಿ ಮಾತನಾಡಿದ ರಷ್ಯಾ ಅಧ್ಯಕ್ಷ ಪುಟಿನ್; ದ್ವಿಪಕ್ಷೀಯ ಸಂಬಂಧ, ಜಿ20 ಶೃಂಗಸಭೆ ಬಗ್ಗೆ ಚರ್ಚೆ

ಗವರ್ನರ್ ಸಿ ವಿ ಆನಂದ ಬೋಸ್ ಅವರು ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಅವರ “ಅಸಂವಿಧಾನಿಕ ಚಟುವಟಿಕೆಗಳನ್ನು” ಬೆಂಬಲಿಸುವುದಿಲ್ಲ “ಚುನಾಯಿತ ಸರ್ಕಾರದೊಂದಿಗೆ ‘ಪಂಗಾ’ (ಜಗಳ) ಮಾಡಬೇಡಿ ಎಂದು ಬೋಸ್ ಅವರನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಳಿದರು.

ಬಂಗಾಳದಲ್ಲಿ ಮೂರು ದಶಕಗಳ ಸಿಪಿಐ(ಎಂ) ಆಡಳಿತವನ್ನು ಕೊನೆಗೊಳಿಸಿದ್ದೇನೆ. ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇನೆ ಎಂದಿದ್ದಾರೆ ಮಮತಾ. ಜಾದವ್‌ಪುರ ವಿಶ್ವವಿದ್ಯಾನಿಲಯದಲ್ಲಿ ‘ಗೋಲಿ ಮಾರೋ’ ಘೋಷಣೆಗಳನ್ನು ಕೂಗಿದ ಎಬಿವಿಪಿ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, ವಿಶ್ವವಿದ್ಯಾನಿಲಯದಲ್ಲಿ ದ್ವೇಷದ ಘೋಷಣೆಗಳನ್ನು ಕೂಗಿದವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಹೇಳಿದರು. ಇಂತಹ ಘೋಷಣೆಗಳನ್ನು ಕೂಗುವವರು ಇದು ಬಂಗಾಳ ಎಂಬುದನ್ನು ಮರೆಯಬಾರದು. ಇದು ಉತ್ತರ ಪ್ರದೇಶ ಅಲ್ಲ ಎಂದು ಮಮತಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್