AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ನಿಲ್ಲದ ಹೈಡ್ರಾಮಾ; ಸಿಜೆಪಿ ನಾಯಕರನ್ನು ಹೊರತುಪಡಿಸಿ ಎಲ್ಲ ಪ್ರತಿಭಟನಾಕಾರರ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಇಂದು ಕರೆ ನೀಡಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಅರವಿಂದ್ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್ ಮತ್ತು ಮಾಣಿಕ್ ಸರ್ಕಾರ್ ಸೇರಿದಂತೆ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಹಾಗೂ ಸುಮಾರು 7 ಸಾವಿರ ಜನರನ್ನು ವಶಕ್ಕೆ ಪಡೆಯಲಾಗಿತ್ತು. ಇಂದು ರಾತ್ರಿ ವೇಳೆಗೆ ಅವರೆಲ್ಲರನ್ನೂ ಬಿಡುಗಡೆ ಮಾಡಲಾಗಿದೆ. ಸಿಜೆಪಿ ನಾಯಕರು ಹಾಗೂ ಯೂಟ್ಯೂಬರ್ ಧ್ರುವ್ ರಾಠೀ ಮಾತ್ರ ಇನ್ನೂ ಪೊಲೀಸ್ ವಶದಲ್ಲಿದ್ದಾರೆ.

ದೆಹಲಿಯಲ್ಲಿ ನಿಲ್ಲದ ಹೈಡ್ರಾಮಾ; ಸಿಜೆಪಿ ನಾಯಕರನ್ನು ಹೊರತುಪಡಿಸಿ ಎಲ್ಲ ಪ್ರತಿಭಟನಾಕಾರರ ಬಿಡುಗಡೆ
ಅರವಿಂದ್ ಕೇಜ್ರಿವಾಲ್ ವಶಕ್ಕೆImage Credit source: PTI
ಸುಷ್ಮಾ ಚಕ್ರೆ
|

Updated on: Oct 10, 2026 | 10:48 PM

Share

ನವದೆಹಲಿ, ಅಕ್ಟೋಬರ್ 10: ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌ಗೆ ತೆರಳಲು ಯತ್ನಿಸಿದ 7,000ಕ್ಕೂ ಅಧಿಕ ಜನರನ್ನು ದೆಹಲಿ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಎಸ್​ಐಆರ್​ ಮತ್ತು ಮತದಾರರ ನೋಂದಣಿಗೆ ಬಳಸುವ ಫಾರ್ಮ್ 6 ಬದಲಾವಣೆಗಳಲ್ಲಿ ಅಕ್ರಮ ನಡೆದಿವೆ ಎಂದು ಆರೋಪಿಸಿ ಈ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಬೆಳಗ್ಗೆಯಿಂದ ವಶಕ್ಕೆ ಪಡೆದಿರುವ ಎಲ್ಲ ಪ್ರತಿಭಟನಾಕಾರರನ್ನೂ ಪೊಲೀಸರು ಇಂದು ರಾತ್ರಿ ಬಿಡುಗಡೆ ಮಾಡಿದ್ದಾರೆ. ಆದರೆ, ಸಿಜೆಪಿ ನಾಯಕರಿಗೆ ಮಾತ್ರ ಇನ್ನೂ ಬಿಡುಗಡೆಯ ಭಾಗ್ಯವಿಲ್ಲ. ಅವರನ್ನು ರಹಸ್ಯವಾದ ಸ್ಥಳದಲ್ಲಿ ಇರಿಸಲಾಗಿದೆ. ನಾಳೆ ಕೂಡ ಪ್ರತಿಭಟನೆ ನಡೆಸುವುದಾಗಿ ಸಿಜೆಪಿ ಘೋಷಿಸಿರುವುದರಿಂದ ಈ ಕ್ರಮ ಕೈಗೊಂಡಿರಬಹುದು ಎನ್ನಲಾಗಿದೆ.

ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ, ಮುಖಂಡರಾದ ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರನ್ನು ದೆಹಲಿಗೆ ಬಂದಿಳಿದ ತಕ್ಷಣ ವಿಮಾನದಲ್ಲೇ ವಶಕ್ಕೆ ಪಡೆಯಲಾಗಿತ್ತು. ದಿಪ್ಕೆ ಅವರ ಅಜ್ಜಿ ಮಹಾರಾಷ್ಟ್ರದಲ್ಲಿ ನಿಧನರಾಗಿದ್ದರೂ ಅವರು ಇನ್ನೂ ವಶದಲ್ಲೇ ಇದ್ದಾರೆ. ಅಂತ್ಯಕ್ರಿಯೆಗೆ ತೆರಳಲು ಅವಕಾಶ ನೀಡುವುದಾಗಿ ಪೊಲೀಸರು ತಿಳಿಸಿದ್ದರೂ, ಸಂಜೆ ವೇಳೆಗೆ ಅವರ ಬಿಡುಗಡೆಯ ಬಗ್ಗೆ ಸ್ಪಷ್ಟತೆ ಸಿಕ್ಕಿರಲಿಲ್ಲ.

ಇದನ್ನೂ ಓದಿ: ‘ಜ್ಞಾನೇಶ್ ಕುಮಾರ್ ವಜಾಗೊಳ್ಳುವವರೆಗೂ ಪ್ರತಿದಿನ ಜಂತರ್ ಮಂತರ್‌ಗೆ ಪಾದಯಾತ್ರೆ’; ಸಿಜೆಪಿ ನಿರ್ಧಾರ

ಸಿಜೆಪಿ ಸಂಘಟನೆಯು ಪ್ರತಿದಿನ ಜಂತರ್ ಮಂತರ್‌ಗೆ ಪಾದಯಾತ್ರೆ ನಡೆಸುವುದಾಗಿ ಘೋಷಿಸಿರುವುದರಿಂದ ಭಾನುವಾರವೂ ಉದ್ವಿಗ್ನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ದೆಹಲಿಯಲ್ಲಿ ಭಾರಿ ಭದ್ರತಾ ವ್ಯವಸ್ಥೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ದೆಹಲಿಯಲ್ಲಿ ಬೃಹತ್ ಪೊಲೀಸ್ ಮತ್ತು ಅರ್ಧಸೈನಿಕ ಪಡೆಗಳ ನಿಯೋಜನೆ, ಬ್ಯಾರಿಕೇಡ್‌ಗಳು ಮತ್ತು ಓಡಾಟದ ಮೇಲಿನ ನಿರ್ಬಂಧಗಳ ನಡುವೆಯೂ ಪ್ರತಿಭಟನಾಕಾರರನ್ನು ವಿವಿಧೆಡೆ ತಡೆಯಲಾಯಿತು. ಜಂತರ್ ಮಂತರ್‌ನಿಂದ 10 ಕಿ.ಮೀ ದೂರದಲ್ಲಿರುವ ದಿಲ್ಲಿ ಹಾಟ್ ಬಳಿ ನೇಹಾ ಬೋರಾ ನೇತೃತ್ವದ ‘ಐಸಾ’ ವಿದ್ಯಾರ್ಥಿ ಸಂಘಟನೆಯು ಧರಣಿ ನಡೆಸಲು ಯತ್ನಿಸಿದಾಗ ಪೊಲೀಸರು ಲಾಠಿ ಬಳಸಿ ಅವರನ್ನು ವ್ಯಾನ್‌ಗಳಿಗೆ ದೂಡಿದರು. ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಆದ್ಯತೆ ನೀಡಿ ಬಿಡುಗಡೆ ಮಾಡಲಾಗಿದೆ ಎಂದು ನಂತರ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ