AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ಮಕರ ಜ್ಯೋತಿ ದರ್ಶನ ಇಂದು: ಜ.18ಕ್ಕೆ ತುಪ್ಪದ ಅಭಿಷೇಕ ಮುಕ್ತಾಯ

ತಂತ್ರಿಗಳಾದ ಕಂದಾದಾರು ರಾಜೀವರು ನೇತೃತ್ವದಲ್ಲಿ ದೇವಾಲಯದಲ್ಲಿ ಬಿಂಬಾಶುದ್ಧಿ ಸೇರಿದಂತೆ ಶುದ್ಧೀಕರಣಗಳು ನಡೆದಿದ್ದು, ಇಂದು ಸಂಜೆ ಹೊತ್ತಿಗೆ ದೇವರ ಆಭರಣಗಳನ್ನು ಉತ್ಸವ ಮೂಲಕ ದೇವಾಲಯಕ್ಕೆ ತರಲಾಗುವುದು.

ಶಬರಿಮಲೆ ಮಕರ ಜ್ಯೋತಿ ದರ್ಶನ ಇಂದು: ಜ.18ಕ್ಕೆ ತುಪ್ಪದ ಅಭಿಷೇಕ ಮುಕ್ತಾಯ
ಶಬರಿಮಲೆ ಸ್ವಾಮಿ ಅಯ್ಯಪ್ಪನ ಸನ್ನಿಧಿ
sandhya thejappa
sandhya thejappa| Edited By: ರಶ್ಮಿ ಕಲ್ಲಕಟ್ಟ|

Updated on:Jan 14, 2021 | 12:58 PM

Share

ತಿರುವನಂತಪುರಂ: ಶಬರಿಮಲೆ ಸ್ವಾಮಿ ಅಯ್ಯಪ್ಪನ ಸನ್ನಿಧಿಯಲ್ಲಿ ಅತ್ಯಂತ ಮಹತ್ವದ ಗಳಿಗೆಗೆ ಕ್ಷಣಗಣನೆ ಆರಂಭವಾಗಿದೆ. ಮಕರ ಸಂಕ್ರಾಂತಿ ದಿನವಾದ ಇಂದು ಪವಿತ್ರ ಮಕರ ಜ್ಯೋತಿ ದರ್ಶನ ಹಾಗೂ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆಯ ಸಂಪ್ರದಾಯಗಳನ್ನು ಕಾಣಲು ಭಕ್ತರು ಕಾತರದಿಂದ ಕಾದಿದ್ದರು. ಆದರೆ ಈ ಬಾರಿ ಭಕ್ತರ ಉತ್ಸಾಹಕ್ಕೆ ಕೋವಿಡ್-19 ಕಡಿವಾಣ ಹಾಕಿದೆ. ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವ ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಹಾಗಾಗಿ ನೆಗೆಟಿವ್ ಪ್ರಮಾಣಪತ್ರ ಹೊಂದಿರುವವರು ಮಾತ್ರ ಸನ್ನಿಧಿಗೆ ಆಗಮಿಸುವಂತಾಗಿದೆ. ಇನ್ನು ಇಂದು ಸಂಜೆ ಮಕರ ಜ್ಯೋತಿ ದರ್ಶನವಾಗಲಿದ್ದು ಭಕ್ತರು ಕಾತರರಾಗಿದ್ದಾರೆ.

ತಂತ್ರಿಗಳಾದ ಕಂದಾದಾರು ರಾಜೀವರು ನೇತೃತ್ವದಲ್ಲಿ ದೇವಾಲಯದಲ್ಲಿ ಬಿಂಬಾಶುದ್ಧಿ ಸೇರಿದಂತೆ ಶುದ್ಧೀಕರಣಗಳು ನಡೆದಿದ್ದು, ಇಂದು ಸಂಜೆ ಹೊತ್ತಿಗೆ ದೇವರ ಆಭರಣಗಳನ್ನು ಉತ್ಸವ ಮೂಲಕ ದೇವಾಲಯಕ್ಕೆ ತರಲಾಗುವುದು.

ಕೊರೊನಾ ಹಿನ್ನೆಲೆ ಈ ಬಾರಿ ಕೇವಲ 5,000 ಭಕ್ತರಿಗೆ ಮಾತ್ರ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ ದೇವಸ್ಥಾನ ಮಂಡಳಿಯ ಅಧ್ಯಕ್ಷ ಎನ್.ವಾಸು, ಅಯ್ಯಪ್ಪಸ್ವಾಮಿಯ ನೈಯಾಭಿಷೇಕ (ತುಪ್ಪದ ಅಭಿಷೇಕ) ಸೇವೆ ಜ.18ಕ್ಕೆ ಮುಕ್ತಾಯವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪೊಲೀಸರ ನಿಯೋಜನೆ ಜಿಲ್ಲೆಯನ್ನು 13 ವಿವಿಧ ವಲಯಗಳಾಗಿ ವಿಂಗಡಿಸುವ ಮೂಲಕ ಭಕ್ತರ ವಾಹನಗಳ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಸುತ್ತಮುತ್ತಲಿನಲ್ಲಿ 6 ವಿಭಾಗಗಳಲ್ಲಿ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ.

ನೀಲಕಲ್​ನಿಂದ ಹಿಂದಿರುಗುವ ಭಕ್ತರು ಕಣಮಲ-ಪಾಲಪ್ಪಳ್ಳಿ-ಳಾಹಾ-ಪೆರುನಾಡ್-ವಡಶ್ಶೇರಿಕ್ಕರ   ಮಾರ್ಗದಲ್ಲಿ ಸಾಗಬೇಕಾಗುತ್ತದೆ. ಎರುಮೇಲಿಯಿಂದ ನೀಲಕಲ್​ಗೆ ಹೋಗುವ ಭಕ್ತರು ಮಂದಿರಂಪಾಡಿ-ವಡಸೇರಿಕಾರ ಮಾರ್ಗದಲ್ಲಿ ಸಾಗಬೇಕಾಗುತ್ತದೆ.

ಆದಾಯ ವಿವರ ಶಬರಿಮಲೆ ವಾರ್ಷಿಕ ತೀರ್ಥಯಾತ್ರೆಯ ಮೊದಲ 54 ದಿನಗಳಲ್ಲಿ 1.34 ಲಕ್ಷ ಭಕ್ತರು ಆಗಮಿಸಿದ್ದು, ದೇವಾಲಯಕ್ಕೆ ಸುಮಾರು ₹ 16.30 ಕೋಟಿ ಆದಾಯ ಬಂದಿದೆ. ಕಳೆದ ವರ್ಷ ಮಕರ ಸಂಕ್ರಾಂತಿ ಹೊತ್ತಿಗೆ ಸುಮಾರು ₹ 60.26 ಕೋಟಿ ರೂ ಆದಾಯ ಗಳಿಸಿತ್ತು. ಸದ್ಯ ದೇಗುಲದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟ ಕಾರಣ ₹ 100 ಕೋಟಿ ಹಣದ ನೆರವನ್ನು ರಾಜ್ಯ ಸರ್ಕಾರದಿಂದ ಪಡೆಯಲಾಗುತ್ತದೆ ಎಂದು ಎನ್.ವಾಸು ಮಾಹಿತಿ ನೀಡಿದ್ದಾರೆ.

ಶಬರಿಮಲೆಗೆ ತೆರಳುವವರ ಗಮನಕ್ಕೆ; ನಿಮ್ಮೊಂದಿಗೆ ಇರಲೇಬೇಕು ಕೊವಿಡ್​-19 ನೆಗೆಟಿವ್​ ರಿಪೋರ್ಟ್

Published On - 10:14 am, Thu, 14 January 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ