AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BREAKING ನೀಟ್ ಪರೀಕ್ಷೆ ವೇಳೆ ಒಳಉಡುಪು ತೆಗೆಯುವಂತೆ ಹೇಳಿದ ಪ್ರಕರಣ; ಬಂಧಿತರಾಗಿದ್ದ ಏಳು ಮಂದಿಗೆ ಜಾಮೀನು

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ  ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿನಿಯರಿಗೆ ಒಳಉಡುಪು ಬಿಚ್ಚಿಟ್ಟು ಪರೀಕ್ಷೆ ಬರೆಯಲು ಸೂಚಿಸಲಾಗಿತ್ತು. 

BREAKING ನೀಟ್ ಪರೀಕ್ಷೆ ವೇಳೆ ಒಳಉಡುಪು ತೆಗೆಯುವಂತೆ ಹೇಳಿದ ಪ್ರಕರಣ; ಬಂಧಿತರಾಗಿದ್ದ ಏಳು ಮಂದಿಗೆ ಜಾಮೀನು
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 21, 2022 | 6:43 PM

Share

ಕೇರಳದಲ್ಲಿ (Kerala) ನೀಟ್ ಪರೀಕ್ಷೆ (NEET Exam) ವೇಳೆ ಹುಡುಗಿಯರ ಒಳ ಉಡುಪು ತೆಗೆಯುವಂತೆ ಹೇಳಿದ ಪ್ರಕರಣದಲ್ಲಿ (frisking case)  ಬಂಧನಕ್ಕೊಳಗಾಗಿದ್ದ ಎಲ್ಲ ಏಳು ಮಂದಿಗೆ  ಜಾಮೀನು  ನೀಡಲಾಗಿದೆ. ಇಬ್ಬರು ಶಿಕ್ಷಕರನ್ನು ಗುರುವಾರ ಬೆಳಗ್ಗೆ ಬಂಧಿಸಿದ್ದು,  ಐವರು ಮಹಿಳೆಯರನ್ನು ಜುಲೈ 19ಕ್ಕೆ ಬಂಧಿಸಲಾಗಿತ್ತು. ಕಡೈಕ್ಕಲ್ ಜುಡಿಷಿಯಲ್ ಫಸ್ಟ್ ಕ್ಲಾಸ್ ಮೆಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ. ಒಳಉಡುಪು ಕಳಚುವಂತೆ ವಿದ್ಯಾರ್ಥಿಗಳಿಗೆ ಹೇಳಿದ ಪ್ರಕರಣದಲ್ಲಿ ಇಲ್ಲಿಯವರೆಗೆ ಏಳು ಮಂದಿಯನ್ನು ಬಂಧಿಸಲಾಗಿತ್ತು. ಮಾರ್ಥೋಮಾ ಕಾಲೇಜಿನ ಶಿಕ್ಷಕರು ಮತ್ತು ಕೋಆರ್ಡಿನೇಟರ್ ನ್ನು ಗುರುವಾರ ಬೆಳಗ್ಗೆ ಬಂಧಿಸಲಾಗಿತ್ತು. ಇವರಿಗೂ ಜಾಮೀನು ಲಭಿಸಿದೆ. ಇದಕ್ಕಿಂತ ಮುಂಚೆ ಬಂಧಿತರಾಗಿದ್ದ ಇಬ್ಬರು ಸ್ವಚ್ಛತಾ ಕಾರ್ಮಿಕರು ಈಗಲೂ ವಶದಲ್ಲಿದ್ದಾರೆ. ಇವರು ಹೈಕೋರ್ಟ್​​ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇವರಿಬ್ಬರೂ ಶೀಘ್ರದಲ್ಲೇ ಕಡೈಕ್ಕಲ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎಂದು ಮಾತೃಭೂಮಿ ಡಾಟ್ ಕಾಂ ವರದಿ ಮಾಡಿದೆ.

ನೀಟ್ ಪರೀಕ್ಷೆಯ ಡ್ರೆಸ್ ಕೋಡ್ (NEET Dress code) ಪಾಲಿಸುವ ಭರದಲ್ಲಿ ಯುವತಿಯರಿಗೆ ಬ್ರಾ ತೆಗೆಯುವಂತೆ   ಹೇಳಿ ಪರೀಕ್ಷೆ ಬರೆಸಲಾಗಿತ್ತು. ಇದರಿಂದ ತೀವ್ರ ಅವಮಾನಿತರಾಗಿದ್ದ ಯುವತಿಯರು ಮಾನಸಿಕವಾಗಿಯೂ ಕುಗ್ಗಿ ಹೋಗಿದ್ದಾರೆ. ಇಂತಹ ಘಟನೆ ಅವರ ಪರೀಕ್ಷೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಆ ಯುವತಿಯರ ಪೋಷಕರು ಆಕ್ರೋಶ ಹೊರಹಾಕಿದ್ದರು.

ಏನಿದು ಘಟನೆ?: ಕೊಲ್ಲಂ ಜಿಲ್ಲೆಯ ಆಯುರ್‌ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವ ವೇಳೆ ಪರೀಕ್ಷಾ ಕೇಂದ್ರದ ಹೊರಗೆ ಯುವತಿಯರಿಗೆ ಒಳಉಡುಪು ಕಳಚಲು ಒತ್ತಾಯಿಸಿ ಅವಮಾನ ಮಾಡಲಾಗಿತ್ತು. ಕೊನೆಗೆ ಯುವತಿಯರು ಒಳಉಡುಪು ಕಳಚಿಟ್ಟು ಪರೀಕ್ಷೆ ಬರೆದಿದ್ದರು. ಇದರಿಂದ ತೀವ್ರ ಮುಜುಗರಗೊಂಡಿದ್ದ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಮಹಿಳಾ ಪೊಲೀಸ್ ಅಧಿಕಾರಿಗಳ ತಂಡವು ಆ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಕೇಸ್ ದಾಖಲಿಸಿದ್ದರು. ಮೊಟ್ಟಮೊದಲ ಬಾರಿಗೆ ನೀಟ್ ಪರೀಕ್ಷೆಗೆ ಕುಳಿತಿದ್ದ ನನ್ನ ಮಗಳು ತನಗಾದ ಆಘಾತಕಾರಿ ಅನುಭವದಿಂದ ಇನ್ನೂ ಹೊರಬಂದಿಲ್ಲ ಎಂದು 17 ವರ್ಷದ ಯುವತಿಯ ತಂದೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಆ ವೇಳೆ ಈ ಘಟನೆ ಬೆಳಕಿಗೆ ಬಂದಿತ್ತು. ಬ್ರಾ ಇಲ್ಲದೆಯೇ 3 ಗಂಟೆಗೂ ಹೆಚ್ಚು ಕಾಲ ಪರೀಕ್ಷೆ ಹಾಲ್ನಲ್ಲಿ ಕುಳಿತು ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ಬಂದೊದಗಿದ್ದು, ಆಕೆಯನ್ನು ಮಾನಸಿಕವಾಗಿ ಬಹಳ ಕುಗ್ಗಿಸಿದೆ. ಈ ಘಟನೆಯಿಂದ ಆಕೆ ತೀವ್ರ ಅವಮಾನಕ್ಕೊಳಗಾಗಿದ್ದಾಳೆ ಎಂದು ಅವರು ಆರೋಪಿಸಿದ್ದರು. ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ. 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಕೊಲ್ಲಂ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಸೂಚಿಸಿದೆ. ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ನೀಡಲಾಗಿತ್ತು. ವ್ಯಾಲೆಟ್‌ಗಳು, ಕೈಚೀಲಗಳು, ಬೆಲ್ಟ್‌ಗಳು, ಕ್ಯಾಪ್‌ಗಳು, ಆಭರಣಗಳು, ಶೂಗಳು ಮತ್ತು ಹೀಲ್ಸ್ ಅನ್ನು ನಿಷೇಧಿಸಲಾಗಿತ್ತು.

Published On - 6:08 pm, Thu, 21 July 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್