AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷದ ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ; ಎಸ್‌ಐಆರ್ ಪರ ಸುಪ್ರೀಂ ಕೋರ್ಟ್​ನಲ್ಲಿ ಸರ್ವಾನುಮತದ ಸಮರ್ಥನೆ

ಎಸ್​ಐಆರ್​ ಪ್ರಕ್ರಿಯೆಯನ್ನು ಕೈಗೊಳ್ಳುವ ತಮ್ಮ ನಿರ್ಧಾರವನ್ನು ಭಾರತೀಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಈ ಕಾರ್ಯವಿಧಾನವನ್ನು ಕಾನೂನುಬದ್ಧವಾಗಿ ನಡೆಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಮೂರೂ ಆದೇಶಗಳನ್ನು ಆಯೋಗದ ಮೂವರೂ ಸದಸ್ಯರು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಆಯೋಗ ತಿಳಿಸಿದೆ. ವಿರೋಧ ಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ ಚುನಾವಣಾ ಆಯೋಗ ಇಂದು ಸುಪ್ರೀಂ ಕೋರ್ಟ್​ನಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸಿದೆ.

ವಿಪಕ್ಷದ ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ; ಎಸ್‌ಐಆರ್ ಪರ ಸುಪ್ರೀಂ ಕೋರ್ಟ್​ನಲ್ಲಿ ಸರ್ವಾನುಮತದ ಸಮರ್ಥನೆ
ಸುಪ್ರೀಂ ಕೋರ್ಟ್Image Credit source: TV9
ಸುಷ್ಮಾ ಚಕ್ರೆ
|

Updated on: Oct 26, 2026 | 10:16 PM

Share

ನವದೆಹಲಿ, ಅಕ್ಟೋಬರ್ 26: ದೇಶಾದ್ಯಂತ ವ್ಯಾಪಕ ರಾಜಕೀಯ ಚರ್ಚೆ ಮತ್ತು ವಿರೋಧ ಪಕ್ಷಗಳ ಆಕ್ಷೇಪಕ್ಕೆ ಕಾರಣವಾಗಿರುವ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ’ (ಎಸ್​ಐಆರ್​) ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಪಾರದರ್ಶಕಗೊಳಿಸಲು ಮತ್ತು ನಕಲಿ ಮತದಾರರನ್ನು ತೆಗೆದುಹಾಕಲು ಈ ನಿರ್ಧಾರವನ್ನು ಆಯೋಗವು ಸರ್ವಾನುಮತದಿಂದ ಕೈಗೊಂಡಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯನಿರ್ವಹಣೆಯನ್ನು ಪ್ರಶ್ನಿಸಿ ಹಾಗೂ ಚುನಾವಣಾ ಆಯೋಗದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳಿವೆ ಎಂಬ ಪತ್ರಿಕಾ ವರದಿಯನ್ನು ಆಧರಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಪ್ರತಿಯಾಗಿ ಆಯೋಗವು ಸುಪ್ರೀಂ ಕೋರ್ಟ್‌ಗೆ ಪ್ರತ್ಯುತ್ತರ ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ: ಸಿಇಸಿ ಜ್ಞಾನೇಶ್ ಕುಮಾರ್ ಮತ್ತು ಎಸ್​ಐಆರ್​ ಅಕ್ರಮಗಳ ವಿರುದ್ಧ ಇಂದು ಸುಪ್ರೀಂ ವಿಚಾರಣೆ: ಸಿಜೆಐ ಪೀಠದ ಮುಂದೆ ರಾಹುಲ್, ಖರ್ಗೆ ಜಂಟಿ ಅರ್ಜಿ

ಜೂನ್ 2025, ಅಕ್ಟೋಬರ್ 2025 ಮತ್ತು ಮೇ 2026ರಲ್ಲಿ ಹೊರಡಿಸಲಾದ ಎಲ್ಲಾ 3 ಎಸ್‌ಐಆರ್ ಆದೇಶಗಳನ್ನು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಚುನಾವಣಾ ಆಯುಕ್ತರು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಫಾರ್ಮ್ 6 ತಿದ್ದುಪಡಿ ಆಗಿಲ್ಲ:

ಮತದಾರರ ನೋಂದಣಿಗೆ ಬಳಸುವ ‘ಫಾರ್ಮ್ 6’ ಅನ್ನು ಆಯೋಗವು ತಿದ್ದುಪಡಿ ಮಾಡಿಲ್ಲ. ಫಾರ್ಮ್ 6 ಅನ್ನು ತಿದ್ದುಪಡಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಎಸ್‌ಐಆರ್ ಸ್ವಯಂ-ಘೋಷಣೆಯು ಪ್ರತ್ಯೇಕ ದಾಖಲೆಯಾಗಿದ್ದು, ಆನ್‌ಲೈನ್ ಗೊಂದಲಗಳನ್ನು ನಿವಾರಿಸಲು ಅಕ್ಟೋಬರ್ 21ರಿಂದ ಆನ್‌ಲೈನ್ ಅರ್ಜಿಯಲ್ಲೂ ‘ಫಾರ್ಮ್ 6’ ಹಾಗೂ ‘ಘೋಷಣಾ ಪತ್ರ’ವನ್ನು ಪ್ರತ್ಯೇಕಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಇದನ್ನೂ ಓದಿ: ಎಸ್‌ಐಆರ್ ವಿವಾದದ ಬೆನ್ನಲ್ಲೇ 17 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್​ಎಸ್​ಆರ್​​ ಘೋಷಿಸಿದ ಚುನಾವಣಾ ಆಯೋಗ

ಮನೆಯ ಬಾಗಿಲಿಗೇ ಸೇವೆ:

ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ ಮ್ಯಾಪಿಂಗ್ ಆಗದ ಮತದಾರರು ಖುದ್ದಾಗಿ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್​ಒ) ಅವರ ಮನೆಗೇ ತೆರಳಿ ದಾಖಲೆಗಳನ್ನು ಸಂಗ್ರಹಿಸಲಿದ್ದಾರೆ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಆನ್‌ಲೈನ್ ಮೂಲಕ ವಿಚಾರಣೆ ನಡೆಯಲಿದೆ ಎಂದು ಕೋರ್ಟ್​ಗೆ ವಿವರಿಸಲಾಗಿದೆ. ದಸರಾ ರಜಾದಿನಗಳ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಂಕ್ಷಿಪ್ತ ಅಫಿಡವಿಟ್ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ವಿವರವಾದ ಪ್ರತ್ಯುತ್ತರವನ್ನು ಸಲ್ಲಿಸುವುದಾಗಿ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ
ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ
ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಧನ್ವೀರ್ ಗೌಡ ಮನೆಗೆ ಮುತ್ತಿಗೆ ಹಾಕುತ್ತೇವೆ’: ಝೈದ್ ಖಾನ್ ಫ್ಯಾನ್ಸ್ ಗರಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಸೀಗೆಗುಡ್ಡದಲ್ಲಿ ಜನವೋ ಜನ,ಜಿಲ್ಲಾಡಳಿತಕ್ಕೆ ಟೆನ್ಷನ್ ತಂದಿಟ್ಟ ಪ್ರೇಮದ ಊರಲಿ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ