Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 31ರ ಒಳಗೆ ಎಲ್ಲಾ ರಾಜ್ಯಗಳಲ್ಲೂ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕು: ಸುಪ್ರೀಂ ಕೋರ್ಟ್​

ಜುಲೈ 31 ರ ಒಳಗೆ ಎಲ್ಲಾ ರಾಜ್ಯಗಳಲ್ಲಿ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ ರೂಪಿಸಬೇಕು ಎಂದು ತಿಳಿಸಲಾಗಿದೆ. ಅಲ್ಲದೇ, ಇದಕ್ಕೆ ಕೇಂದ್ರ ಸರ್ಕಾರ ಆಹಾರ ಧಾನ್ಯ ಹಂಚಿಕೆ ಮಾಡಬೇಕು ಎನ್ನುವುದನ್ನೂ ಸೂಚಿಸಲಾಗಿದೆ.

ಜುಲೈ 31ರ ಒಳಗೆ ಎಲ್ಲಾ ರಾಜ್ಯಗಳಲ್ಲೂ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕು: ಸುಪ್ರೀಂ ಕೋರ್ಟ್​
ಒಂದು ರಾಷ್ಟ್ರ, ಒಂದು ಪಡಿತರ ಚೀಟಿ
Follow us
TV9 Web
| Updated By: Skanda

Updated on: Jun 29, 2021 | 12:37 PM

ದೆಹಲಿ: ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ರಾಷ್ಟ್ರೀಯ ಪೋರ್ಟಲ್ ರಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೊಚ್ಛ ನ್ಯಾಯಾಲಯ ಮಹತ್ತರ ಆದೇಶ ನೀಡಿದೆ. ಜುಲೈ 31ರ ಒಳಗೆ ಕೇಂದ್ರ ಸರ್ಕಾರ ಪೋರ್ಟಲ್ ಸಿದ್ಧಪಡಿಸಲು ಕ್ರಮ ಕೈಗೊಳ್ಳಬೇಕು. ಅಸಂಘಟಿತ ವಲಯದ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ರಾಷ್ಟ್ರೀಯ ಪೋರ್ಟಲ್ ಮಾಡಬೇಕು. ಜುಲೈ 31 ರ ಒಳಗೆ ಎಲ್ಲಾ ರಾಜ್ಯಗಳು ಒಂದು ರಾಷ್ಟ್ರ, ಒಂದು ಪಡಿತರ ಚೀಟಿ (ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಜಾರಿಗೊಳಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್​ ನೀಡಿರುವ ಆದೇಶ ಇದಾಗಿದ್ದು, ಆದೇಶದನ್ವಯ ಜುಲೈ 31 ರ ಒಳಗೆ ಎಲ್ಲಾ ರಾಜ್ಯಗಳಲ್ಲಿ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ ರೂಪಿಸಬೇಕು ಎಂದು ತಿಳಿಸಲಾಗಿದೆ. ಅಲ್ಲದೇ, ಇದಕ್ಕೆ ಕೇಂದ್ರ ಸರ್ಕಾರ ಆಹಾರ ಧಾನ್ಯ ಹಂಚಿಕೆ ಮಾಡಬೇಕು ಎನ್ನುವುದನ್ನೂ ಸೂಚಿಸಲಾಗಿದೆ. ಇನ್ನು ಸಮುದಾಯ ಕಿಚನ್ ಸೌಲಭ್ಯದ ಬಗ್ಗೆ ಅಭಿಪ್ರಾಯ ತಿಳಿಸಿರುವ ಸರ್ವೋಚ್ಛ ನ್ಯಾಯಾಲಯ ಕೊರೊನಾ ಇರುವವರೆಗೂ ಸಮುದಾಯ ಕಿಚನ್ ಸೌಲಭ್ಯ ಮುಂದುವರಿಸಬೇಕು ಎಂಬ ಆದೇಶ ನೀಡಿದೆ.

ಡಿಸೆಂಬರ್​ ವೇಳೆಗೆ ಎಲ್ಲರಿಗೂ ಕೊರೊನಾ ಲಸಿಕೆ ಕೊರೊನಾ ಲಸಿಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಡಿಸೆಂಬರ್ ವೇಳೆಗೆ ಎಲ್ಲರಿಗೂ ಕೊವಿಡ್ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ. ಬಯೋಲಾಜಿಕಲ್-ಇ ಕಂಪನಿ 30 ಕೋಟಿ ಲಸಿಕೆಯನ್ನು ಒದಗಿಸಲಿದೆ. ಲಸಿಕೆ ಲಭ್ಯತೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ ಹೆಚ್ಚಿಸುವುದಕ್ಕೂ ಸಿದ್ಧತೆ ಆಗಿದೆ. ಜುಲೈ ವೇಳೆಗೆ ತಿಂಗಳಿಗೆ 7.5 ಕೋಟಿ ಡೋಸ್ ಲಸಿಕೆ ತಯಾರಿಕೆ ಆಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಸೆರಮ್​ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ತಯಾರಿಸಿರುವ ಕೊವಿಶೀಲ್ಡ್​ ಲಸಿಕೆ ಉತ್ಪಾದನೆ ಹೆಚ್ಚಳಕ್ಕೂ ಕ್ರಮ ತೆಗೆದುಕೊಳ್ಳಲಾಗುತ್ತಿದ್ದು, ಸೆಪ್ಟೆಂಬರ್ ವೇಳೆಗೆ 11 ಕೋಟಿ ಡೋಸ್ ಉತ್ಪಾದನೆ ಮಾಡಲಾಗುತ್ತದೆ. ರಷ್ಯಾದಿಂದ ಸ್ಪುಟ್ನಿಕ್-5 ಲಸಿಕೆ ಆಮದು ಈಗಾಗಲೇ ಆರಂಭವಾಗಿದೆ. ಡಿಸೆಂಬರ್ ವೇಳೆಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗಿರುತ್ತದೆ. ಸದ್ಯ ಮಕ್ಕಳಿಗೆ ಕೊವಿಡ್ ಲಸಿಕೆ ಪರೀಕ್ಷಾ ಹಂತದಲ್ಲಿದೆ. ಶೀಘ್ರದಲ್ಲಿಯೇ ಅವರಿಗೂ ಕೊವಿಡ್ ಲಸಿಕೆ ಲಭ್ಯವಾಗಲಿದೆ. ಕೊವಿಡ್ ಲಸಿಕೆ ನಿರ್ವಹಣೆಯಲ್ಲಿ ಭಾರತ ವಿಶ್ವಕ್ಕೇ ಮಾದರಿಯಾಗಿದೆ ಎಂದು ಇ-ಚಿಂತನಾ ಶಿಬಿರದಲ್ಲಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಕೊವ್ಯಾಕ್ಸಿನ್​ ಲಸಿಕೆ ಹೆಸರಲ್ಲಿ ಅತಿದೊಡ್ಡ ಹಗರಣ ನಡೆಸಿದ ಆರೋಪ; ಬ್ರೆಜಿಲ್​ ಅಧ್ಯಕ್ಷರ ಕುರ್ಚಿಯನ್ನೇ ಅಲುಗಾಡಿಸುತ್ತಿದೆ ಕೊರೊನಾ ಲಸಿಕೆ 

ಕೊರೊನಾ ಲಸಿಕೆ ಪಡೆಯುವ ಮುನ್ನ ಗರ್ಭಿಣಿಯರು ಗಮನಿಸಲೇಬೇಕಾದ ಅಂಶಗಳು; ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಟ