AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ರಾಜ್ಯಗಳಲ್ಲಿ ಜ.2ರಿಂದ ಲಸಿಕೆಗಳ ಪ್ರಾಯೋಗಿಕ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧಾರ

ಲಸಿಕೆ ಅಭಿಯಾನಕ್ಕೆ ಭಾರತ ಸನ್ನದ್ಧವಾಗಿದೆ ಎಂದು ಎರಡು ದಿನಗಳ ಡ್ರೈರನ್​ ನಿರೂಪಿಸಿದೆ. ಡ್ರೈರನ್​ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ನಾಲ್ಕೂ ರಾಜ್ಯಗಳು ವಿತರಣೆಗಾಗಿ ಮಾಡಿಕೊಂಡಿರುವ ವ್ಯವಸ್ಥೆಗೆ ತೃಪ್ತಿ ವ್ಯಕ್ತಪಡಿಸಿವೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಎಲ್ಲ ರಾಜ್ಯಗಳಲ್ಲಿ ಜ.2ರಿಂದ ಲಸಿಕೆಗಳ ಪ್ರಾಯೋಗಿಕ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧಾರ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Dec 31, 2020 | 4:18 PM

Share

ದೆಹಲಿ: ದೇಶದ ಎಲ್ಲ ರಾಜ್ಯಗಳಲ್ಲಿ ಶನಿವಾರ (ಜ.2) ಕೋವಿಡ್​ ಲಸಿಕೆಯ ಪ್ರಾಯೋಗಿಕ ವಿತರಣೆ (ಡ್ರೈರನ್) ನಡೆಯಲಿದೆ. ಲಸಿಕೆಯೊಂದಕ್ಕೆ ಶೀಘ್ರದಲ್ಲಿಯೇ ಅನುಮತಿ ದೊರೆಯುವ ಸಾಧ್ಯತೆಯೂ ಇದೆ ಎಂದು ಸರ್ಕಾರ ಮುನ್ಸೂಚನೆ ನೀಡಿದೆ.

ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಇಂದು (ಡಿ.31) ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಡ್ರೈರನ್ ನಡೆಸುವ ತೀರ್ಮಾನ ತೆಗೆದುಕೊಳ್ಳಲಾಯಿತು. ಇದು ದೇಶದಲ್ಲಿ ನಡೆಯುತ್ತಿರುವ ಎರಡನೇ ಡ್ರೈರನ್​. ಈ ಮೊದಲು ಡಿಸೆಂಬರ್ 28 ಮತ್ತು 29ರಂದು ನಾಲ್ಕು ರಾಜ್ಯಗಳಲ್ಲಿ ಡ್ರೈರನ್​ ನಡೆದಿತ್ತು. ಈ ವೇಳೆ ಲಸಿಕೆ ವಿತರಣೆಗಾಗಿ ರೂಪಿಸಿರುವ ವ್ಯವಸ್ಥೆಯಲ್ಲಿ ಯಾವುದೇ ಲೋಪ ಪತ್ತೆಯಾಗಲಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಈಗಾಗಲೇ ಗುರುತಿಸಿರುವ ಪ್ರದೇಶಗಳಲ್ಲಿ ಪ್ರತಿ ರಾಜ್ಯದಲ್ಲಿಯೂ ಡ್ರೈರನ್ ನಡೆಯಲಿದೆ. ಪ್ರಾಯೋಗಿಕ ಅಭಿಯಾನದಲ್ಲಿ ಪಾಲ್ಗೊಳ್ಳುವವರಿಗೆ ಕೊರೊನಾ ಲಸಿಕೆಯ ಮಾದರಿಯ ಬೇರೊಂದು ಚುಚ್ಚುಮದ್ದು ನೀಡಲಾಗುತ್ತದೆ. ಲಸಿಕೆ ವಿತರಣೆ ಅಭಿಯಾನದಲ್ಲಿ ಇರಬಹುದಾದ ಲೋಪದೋಷಗಳನ್ನು ಪತ್ತೆಹಚ್ಚುವುದು ಮತ್ತು ಸರಿಪಡಿಸುವುದು ಡ್ರೈರನ್​ನ ಮುಖ್ಯ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದರು.

ಲಸಿಕೆ ಅಭಿಯಾನಕ್ಕೆ ಭಾರತ ಸನ್ನದ್ಧವಾಗಿದೆ ಎಂದು ಎರಡು ದಿನಗಳ ಡ್ರೈರನ್​ ನಿರೂಪಿಸಿದೆ. ಡ್ರೈರನ್​ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ನಾಲ್ಕೂ ರಾಜ್ಯಗಳು ವಿತರಣೆಗಾಗಿ ಮಾಡಿಕೊಂಡಿರುವ ವ್ಯವಸ್ಥೆಗೆ ತೃಪ್ತಿ ವ್ಯಕ್ತಪಡಿಸಿವೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಹೊಸವರ್ಷದ ಕೊಡುಗೆ

ಹೊಸವರ್ಷ ಆರಂಭವಾದ ಕೆಲವೇ ದಿನಗಳಲ್ಲಿ ದೇಶವ್ಯಾಪಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಬಹುದು ಎಂಬ ನಿರೀಕ್ಷೆ ಸಮಾಜದಲ್ಲಿ ವ್ಯಕ್ತವಾಗಿದೆ. ‘ಹೊಸ ವರ್ಷದಲ್ಲಿ ನಮ್ಮ ಕೈಲಿ ಭರವಸೆ ಇರುತ್ತದೆ’ ಎಂಬ ರಾಷ್ಟ್ರೀಯ ಮಹಾ ಔಷಧ ನಿಯಂತ್ರಕರಾದ ಡಾ.ವಿ.ಜಿ.ಸೊಮಾನಿ ಅವರ ಹೇಳಿಕೆಯನ್ನು ಈ ಹಿನ್ನೆಲೆಯಲ್ಲಿಯೇ ವ್ಯಾಖ್ಯಾನಿಸಲಾಗುತ್ತಿದೆ. ಕೊರೊನಾ ಲಸಿಕೆಯನ್ನು ದೇಶದಲ್ಲಿ ವಿತರಣೆಗೆ ಅನುಮತಿ ನೀಡುವ ವಿಚಾರ ಪರಾಮರ್ಶಿಸಲು ನಾಳೆ (ಜ.1) ಮಹತ್ವದ ಸಭೆ ನಿಗದಿಯಾಗಿದೆ. ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಮತ್ತು ಫೈಝರ್​ ಕಂಪನಿಗಳ ಲಸಿಕೆಗಳ ಪ್ರಸ್ತಾವವನ್ನು ತಜ್ಞರ ಮಂಡಳಿ ಪರಾಮರ್ಶಿಸಲಿದೆ.

ಆಕ್ಸ್​ಫರ್ಡ್​ ವಿಶ್ವವಿದ್ಯಾಲಯ ಮತ್ತು ಫಾರ್ಮಾ ವಲಯದ ದೈತ್ಯ ಕಂಪನಿ ಆಸ್ಟ್ರಾಜೆನೆಕಾ ರೂಪಿಸಿರುವ ಕೋವಿಶೀಲ್ಡ್​ಗೆ ಅನುಮೋದನೆ ಸಿಗುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗಿದೆ. ಔಷಧ ನಿಯಂತ್ರಕರಿಗೆ ಫಿಝರ್ ಲಸಿಕೆ ಪ್ರಯೋಗಗಳಿಗೆ ಸಂಬಂಧಿಸಿದ ದತ್ತಾಂಶಗಳನ್ನು ಇನ್ನೂ ನೀಡಿಲ್ಲ. ದೇಶೀಯ ಕಂಪನಿ ಭಾರತ್ ಬಯೋಟೆಕ್ ರೂಪಿಸಿರುವ ಕೊವಾಕ್ಸಿನ್​ ಲಸಿಕೆಯ 3ನೇ ಹಂತದ ಪ್ರಯೋಗಗಳು ಇನ್ನೂ ಮುಗಿದಿಲ್ಲ.

Corona Vaccine: ಆಕ್ಸ್​ಫರ್ಡ್-ಆಸ್ಟ್ರಾಜೆನೆಕಾ ಲಸಿಕೆಗೆ ಇಂಗ್ಲೆಂಡ್​ ಸರ್ಕಾರದ ಅನುಮತಿ.. ರೂಪಾಂತರ ಕೊರೊನಾ ವಿರುದ್ಧವೂ ಈ ವ್ಯಾಕ್ಸಿನ್ ಪರಿಣಾಮಕಾರಿ

Published On - 4:14 pm, Thu, 31 December 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ