AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIABಗೆ ಬಂದು ಇಳಿತು ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ ನೇತೃತ್ವದ ಮೊದಲ ವಿಮಾನ..

ಮಹಿಳಾ ಪೈಲಟ್ ಮತ್ತು ಸಿಬ್ಬಂದಿ ಇದ್ದ ವಿಮಾನ ಸ್ಯಾನ್ ಫ್ರಾನ್ಸಿಸ್ಕೋದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

KIABಗೆ ಬಂದು ಇಳಿತು ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ ನೇತೃತ್ವದ ಮೊದಲ ವಿಮಾನ..
ಏರ್​ ಇಂಡಿಯಾದ ಮಹಿಳಾ ಪೈಲಟ್ ತಂಡ
ಆಯೇಷಾ ಬಾನು
|

Updated on: Jan 11, 2021 | 6:57 AM

Share

ಬೆಂಗಳೂರು: ವಾಯು ಸಾರಿಗೆಯಲ್ಲೂ ಮಹಿಳೆಯರು ಮೇಲುಗೈ ಸಾಧಿಸಿದ್ದಾರೆ. ಮಹಿಳಾ ಪೈಲಟ್ ಮತ್ತು ಸಿಬ್ಬಂದಿ ಇದ್ದ ವಿಮಾನ ಸ್ಯಾನ್ ಫ್ರಾನ್ಸಿಸ್ಕೋದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಏರ್‌ಇಂಡಿಯಾ 176 ಬೋಯಿಂಗ್ 777/200 LR ಫ್ಲೈಟ್​ನಲ್ಲಿ ನಾಲ್ವರು ಮಹಿಳಾ ಪೈಲಟ್ ಮತ್ತು 12 ಗಗನಸಕಿಯರಿದ್ದರು. 13,993 ಕಿ.ಮೀ. ದೂರವನ್ನು 17 ಗಂಟೆಗಳ ನಿರಂತರ ಪ್ರಯಾಣ ಮಾಡಿ ಸದ್ಯ ಈಗ ಕೆಐಎಗೆ ಆಗಮಿಸಿದ್ದಾರೆ. 238 ಆಸನಗಳನ್ನೊಳಗೊಂಡ ನೂತನ ವಿಮಾನ ಇದಾಗಿದೆ. ಇನ್ನು ಮುಂದೆ ಈ ವಿಮಾನ ಸ್ಯಾನ್ ಪ್ರಾನ್ಸಿಸ್ಕೋದಿಂದ ಬೆಂಗಳೂರಿಗೆ ವಾರದಲ್ಲಿ 2 ದಿನ ಪ್ರಯಾಣ ಬೆಳೆಸಲಿದೆ.

ಮಹಿಳಾ ಪೈಲಟ್‌ಗಳಿಗೆ ಏರ್‌ಪೋರ್ಟ್ ಸಿಬ್ಬಂದಿ ಸ್ವಾಗತ ಮಹಿಳಾ ಪೈಲಟ್‌ಗಳಾದ ಜೋಯ ಅಗರ್ವಾಲ್, ಪಾಪಗರಿತನ್ಮಯ್, ಆಕಾಂಶ ಸೋನವೇರ್, ಶಿವಾನಿ ಮನ್ಹಾಸ್​ರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಪ್ರಯಾಣಿಕರು, ಏರ್ಪೋಟ್ ಸಿಬ್ಬಂದಿ ಚಪ್ಪಾಳೆ ತಟ್ಟಿ ಹೂಗುಚ್ಚ ನೀಡುವ ಮೂಲಕ ಬೆಂಗಳೂರಿಗೆ ಸ್ವಾಗತಿಸಿದ್ರು.

ಸ್ಯಾನ್​ ಫ್ರಾನ್ಸಿಸ್ಕೋ ಟು ಬೆಂಗಳೂರು; 17 ಗಂಟೆಗಳ ನಾನ್​ಸ್ಟಾಪ್ ವಿಮಾನಯಾನದ ನೇತೃತ್ವ ವಹಿಸಿದ ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ