ಜುಲೈ 27ರವರೆಗೆ ಜ್ಞಾನವಾಪಿ ಮಸೀದಿಯ ಎಎಸ್ಐ ಸಮೀಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಸಂಕೀರ್ಣದ ಸರ್ವೆ ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿತ್ತು

ಜುಲೈ 27ರವರೆಗೆ ಜ್ಞಾನವಾಪಿ ಮಸೀದಿಯ ಎಎಸ್ಐ ಸಮೀಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್
ಜ್ಞಾನವಾಪಿ ಮಸೀದಿ
Follow us
ರಶ್ಮಿ ಕಲ್ಲಕಟ್ಟ
|

Updated on: Jul 26, 2023 | 7:16 PM

ದೆಹಲಿ ಜುಲೈ 26: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನಡೆಸಿದ ಜ್ಞಾನವಾಪಿ ಮಸೀದಿ (Gyanvapi mosque) ಆವರಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಗುರುವಾರ (ಜುಲೈ 27) ವರೆಗೆ ತಡೆಯಾಜ್ಞೆ ನೀಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ  ಬುಧವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಗುರುವಾರ ಮಧ್ಯಾಹ್ನ ಪ್ರಕರಣದ ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಜ್ಞಾನವಾಪಿ ಮಸೀದಿ ಸಂಕೀರ್ಣದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ಎಫ್‌ಎ ನಖ್ವಿ, ಮಸೀದಿಗೆ ಯಾವುದೇ ಹಾನಿಯಾಗದಂತೆ ಕಾನೂನು ಪ್ರಕಾರ ಸರ್ವೆ ಮಾಡಲಾಗುವುದು ಎಂದು ಎಎಸ್‌ಐ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದು, ನಾವು ಉತ್ತರ ನೀಡುತ್ತೇವೆ. ನಾಳೆ ಮಧ್ಯಾಹ್ನ 3.30 ಕ್ಕೆ ನ್ಯಾಯಾಲಯವು ಮತ್ತೆ ವಿಚಾರಣೆ ನಡೆಸಲಿದೆ. ಸದ್ಯಕ್ಕೆ ಜಿಲ್ಲಾ ನ್ಯಾಯಾಲಯದ ಆದೇಶದ ಸಮೀಕ್ಷೆಗೆ ತಡೆ ನೀಡಲಾಗಿದೆ. ಮುಸ್ಲಿಂ ಕಕ್ಷಿದಾರರಿಗೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಲು ಕಾಲಾವಕಾಶ ನೀಡುವುದಕ್ಕಾಗಿ ವಿವಾದಿತ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಜುಲೈ 26 ರಂದು ಸಂಜೆ 5 ಗಂಟೆಯವರೆಗೆ ಜಾರಿಗೊಳಿಸಬಾರದು ಎಂದು ಸುಪ್ರೀಂಕೋರ್ಟ್ ಜುಲೈ 24 ರಂದು ಆದೇಶಿಸಿದೆ.

ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಸಂಕೀರ್ಣದ ಸರ್ವೆ ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಆಗ್ರಾ ಮತ್ತು ಲಕ್ನೋದ ಸುಮಾರು 20 ಅಧಿಕಾರಿಗಳನ್ನು ಒಳಗೊಂಡ ಎಎಸ್‌ಐ ತಂಡವು ಆಡಳಿತ ಅಧಿಕಾರಿಗಳ ಸಹಾಯದೊಂದಿಗೆ ಸೋಮವಾರ ಬೆಳಿಗ್ಗೆ ವೈಜ್ಞಾನಿಕ ಸಮೀಕ್ಷೆಯನ್ನು ಕೈಗೊಳ್ಳಲು ಅಗತ್ಯವಾದ ಸಲಕರಣೆಗಳೊಂದಿಗೆ ಆವರಣವನ್ನು ಪ್ರವೇಶಿಸಿತು. ಅದೇ ವೇಳೆ ಫಿರ್ಯಾದಿಯನ್ನು ಪ್ರತಿನಿಧಿಸುವ ವಕೀಲರಿಗೂ ಆವರಣದೊಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು. ಬೆಳಗ್ಗೆ ಮುಸ್ಲಿಂ ಕಡೆಯಿಂದ ಯಾವ ವಕೀಲರೂ ಬರಲಿಲ್ಲ.

ಜುಲೈ 21 ರಂದು, ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಜ್ಞಾನವಾಪಿ ಮಸೀದಿ ಆವರಣದ “ವೈಜ್ಞಾನಿಕ ತನಿಖೆ, ಸಮೀಕ್ಷೆ / ಉತ್ಖನನಕ್ಕೆ ನಿರ್ದೇಶನಗಳನ್ನು ನೀಡಿದ್ದು ಈಗಿನ ಕಟ್ಟಡವನ್ನು ಈ ಹಿಂದೆ ಅಲ್ಲಿದ್ದ ಹಿಂದೂ ದೇವಾಲಯದ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ಶೋಧಿಸಲು ಹೇಳಿದೆ.

ಇದನ್ನೂ ಓದಿ: Gyanvapi Case: ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ: ವಾರಣಾಸಿ ಕೋರ್ಟ್

ನಾಲ್ವರು ಹಿಂದೂ ಮಹಿಳಾ ಅರ್ಜಿದಾರರ ಅರ್ಜಿಯನ್ನು ಅನುಮತಿಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಾ ಅಜಯ ಕೃಷ್ಣ ವಿಶ್ವೇಶ ಅವರು ತಮ್ಮ ಆದೇಶದಲ್ಲಿ, ವಿವಾದಿತ ಕಟ್ಟಡದ 3 ಗುಮ್ಮಟಗಳ ಕೆಳಗೆ ಗ್ರೌಂಡ್ ಪೆನೆಟ್ರೀಟಿಂಗ್ ರಾಡಾರ್ (GPR) ಸಮೀಕ್ಷೆಯನ್ನು ನಡೆಸುವಂತೆ ಮತ್ತು ಅಗತ್ಯವಿದ್ದರೆ ಉತ್ಖನನವನ್ನು ನಡೆಸುವಂತೆ ಎಎಸ್‌ಐಗೆ ಸೂಚಿಸಿದ್ದಾರೆ. ಮಹಿಳಾ ಅರ್ಜಿದಾರರು ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದ ಹೊರ ಗೋಡೆಯ ಮೇಲೆ ಮಾ ಶೃಂಗಾರ್ ಗೌರಿಯನ್ನು ಪೂಜಿಸುವ ಹಕ್ಕನ್ನು ಕೋರಿ ಮೊಕದ್ದಮೆ ಹೂಡಿದ್ದರು.

ಮೂಲ ಕಾಶಿ ವಿಶ್ವನಾಥ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ಔರಂಗಜೇಬ್ ನಿರ್ಮಿಸಿದ 17 ನೇ ಶತಮಾನದ ಮಸೀದಿಯ ಸುತ್ತ ದಶಕಗಳಷ್ಟು ಹಳೆಯದಾದ ವ್ಯಾಜ್ಯವು ಕಳೆದ ಒಂದು ವರ್ಷದಿಂದ ವೇಗ ಪಡೆದುಕೊಂಡಿದೆ. ಐದು ಹಿಂದೂ ಮಹಿಳೆಯರು ಮಸೀದಿಯ ಹೊರ ಗೋಡೆಯ ಮೇಲೆ ಮಾ ಶ್ರೀನಗರ ಗೌರಿಯನ್ನು ಪೂಜಿಸುವ ಹಕ್ಕನ್ನು ಕೋರಿ ಅರ್ಜಿ ಸಲ್ಲಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ