ಚುನಾವಣೆ ಭರವಸೆ ಈಡೇರಿಸದ ಪಕ್ಷಗಳಿಗೆ ದಂಡ ವಿಧಿಸಲು ಸಾಧ್ಯವಿಲ್ಲ; ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ

Allahabad High Court: 2014ರ ಲೋಕಸಭೆ ಚುನಾವಣೆಯಲ್ಲಿ ಆಗಿನ ಬಿಜೆಪಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಖುರ್ಷಿದುರೆಹಮಾನ್ ಎಸ್ ರೆಹಮಾನ್ ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿತ್ತು.

ಚುನಾವಣೆ ಭರವಸೆ ಈಡೇರಿಸದ ಪಕ್ಷಗಳಿಗೆ ದಂಡ ವಿಧಿಸಲು ಸಾಧ್ಯವಿಲ್ಲ; ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shivaprasad.hs

Updated on: Mar 18, 2022 | 8:10 AM

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು (Election Promises) ಈಡೇರಿಸಲು ವಿಫಲವಾದರೆ ರಾಜಕೀಯ ಪಕ್ಷಗಳಿಗೆ ದಂಡ ವಿಧಿಸಲು ಆಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ (Allahabad High Court) ಅಭಿಪ್ರಾಯಪಟ್ಟಿದೆ. ಈ ವಿಷಯದಲ್ಲಿ ಎರಡು ಕೆಳ ನ್ಯಾಯಾಲಯಗಳು ನೀಡಿದ ಆದೇಶವನ್ನು ಪ್ರಶ್ನಿಸಿ ಮಾರ್ಚ್ 2 ರಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಮೂರ್ತಿ ದಿನೇಶ್ ಪಾಠಕ್ ಅವರ ಏಕಸದಸ್ಯ ಪೀಠವು ತನ್ನ ಆದೇಶದಲ್ಲಿ, ‘‘ಯಾವುದೇ ರಾಜಕೀಯ ಪಕ್ಷವು ಪ್ರಕಟಿಸುವ ಚುನಾವಣಾ ಪ್ರಣಾಳಿಕೆಯು ಚುನಾವಣೆಯ ಸಮಯದಲ್ಲಿ, ಅವರ ನೀತಿ, ದೃಷ್ಟಿಕೋನ, ಭರವಸೆ ಮತ್ತು ಪ್ರತಿಜ್ಞೆಯ ಹೇಳಿಕೆಯಾಗಿರುತ್ತದೆ. ನ್ಯಾಯಾಲಯಗಳ ಮೂಲಕ ಅದನ್ನು ಕಾರ್ಯಗತಗೊಳಿಸಲಾಗುವುದಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾದಲ್ಲಿ ರಾಜಕೀಯ ಪಕ್ಷಗಳನ್ನು ಕಾನೂನಿನಡಿಯಲ್ಲಿ ತಂದು ದಂಡ ವಿಧಿಸುವ ಯಾವುದೇ ಅವಕಾಶಗಳಿಲ್ಲ’’ ಎಂದು ಹೇಳಿದೆ. ಪ್ರಕರಣದ ಕುರಿತು ಗುರುವಾರ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಆಗಿನ ಬಿಜೆಪಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಖುರ್ಷಿದುರೆಹಮಾನ್ ಎಸ್ ರೆಹಮಾನ್ ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿತ್ತು. ‘‘ಅಮಿತ್ ಶಾ ಅವರು ಮೋಸ, ವಂಚನೆ, ವಿಶ್ವಾಸ ದ್ರೋಹ, ಅಪ್ರಾಮಾಣಿಕತೆ, ಮಾನನಷ್ಟ, ಆಮಿಷದ ಅಪರಾಧವನ್ನು ಮಾಡಿದ್ದಾರೆ’’ ಎಂದು ಅರ್ಜಿದಾರರು ಹೇಳಿದ್ದರು.

ಕ್ರಿಮಿನಲ್ ಪ್ರೊಸಿಜರ್​ನ ಸೆಕ್ಷನ್ 156 (3) ಅಡಿಯಲ್ಲಿ (ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸದಿದ್ದರೆ ಮ್ಯಾಜಿಸ್ಟ್ರೇಟ್ ಪೊಲೀಸ್ ಅಧಿಕಾರಿಯಿಂದ ತನಿಖೆಗೆ ಆದೇಶಿಸಬಹುದು) ಅಕ್ಟೋಬರ್ 2020 ರಲ್ಲಿ ಸಲ್ಲಿಸಿದ ಅರ್ಜಿಯನ್ನು ಅಲಿಗಢ ನ್ಯಾಯಾಲಯವು ತಿರಸ್ಕರಿಸಿತ್ತು.

ಅರ್ಜಿದಾರರ ಪರ ವಕೀಲರು ತಮ್ಮ ವಾದದಲ್ಲಿ ಎರಡೂ ಕೆಳ ನ್ಯಾಯಾಲಯಗಳು ಆರೋಪಗಳನ್ನು ಸರಿಯಾಗಿ ಗುರುತಿಸದೆ ಅಕ್ರಮವಾಗಿ ಅರ್ಜಿಯನ್ನು ತಿರಸ್ಕರಿಸಿದ್ದವು ಎಂದು ಹೇಳಿದ್ದರು. 2014 ರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು ಈಡೇರಿಸದಿರುವುದಕ್ಕೆ ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಗಳನ್ನು ಪ್ರಶ್ನಿಸಬಹುದು. ಅವರು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ವಿಚಾರಣೆಗೆ ಒಳಪಡುತ್ತಾರೆ ಎಂದು ವಾದಿಸಲಾಗಿತ್ತು. ಆದರೆ ಹೈಕೋರ್ಟ್ ಈ ಪ್ರಕರಣದ ಕುರಿತು ಆದೇಶ ನೀಡಿ, ಕೆಳಗಿನ ನ್ಯಾಯಾಲಯಗಳ ಆದೇಶಗಳನ್ನು ಮನ್ನಿಸಿದೆ. ಅಲ್ಲದೇ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ:

UPSC Results: ಯುಪಿಎಸ್​ಸಿ ಸಿವಿಲ್ ಸರ್ವಿಸ್ ಎಕ್ಸಾಂ ಫಲಿತಾಂಶ ಪ್ರಕಟ: ಹೀಗೆ ಚೆಕ್ ಮಾಡಿ

Petrol Diesel Rate Today: ಮಾರ್ಚ್ 18ರ ಪೆಟ್ರೋಲ್, ಡೀಸೆಲ್ ದರ ಎಷ್ಟು? ವಿವಿಧ ನಗರಗಳ ಇಂಧನ ದರ ತಿಳಿಯಿರಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು