AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ತಪ್ಪು ಮಾಡದಿದ್ದರೂ 3 ತಿಂಗಳು ಜೈಲಿನಲ್ಲಿ ಇಟ್ಟಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂ. ದಂಡ!

ವ್ಯಕ್ತಿಯೊಬ್ಬರನ್ನು 3 ತಿಂಗಳ ಕಾಲ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದಕ್ಕಾಗಿ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದೆ. ಯಾವುದೇ ಅಪರಾಧ ಮಾಡದಿದ್ದರೂ 3 ತಿಂಗಳ ಅವಧಿಗೆ ವ್ಯಕ್ತಿಯನ್ನು ಅಕ್ರಮವಾಗಿ ಬಂಧಿಸಿ ಜೈಲಿನಲ್ಲಿಡಲಾಗಿತ್ತು. ನ್ಯಾಯಾಧೀಶರಾದ ಅಬ್ದುಲ್ ಮೊಯಿನ್ ಮತ್ತು ಪ್ರಮೋದ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಹೆಬಿಯಸ್ ಕಾರ್ಪಸ್ ಅರ್ಜಿಯ ಮೇರೆಗೆ ಆದೇಶ ಹೊರಡಿಸಿದೆ.

ವ್ಯಕ್ತಿ ತಪ್ಪು ಮಾಡದಿದ್ದರೂ 3 ತಿಂಗಳು ಜೈಲಿನಲ್ಲಿ ಇಟ್ಟಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂ. ದಂಡ!
PrisonImage Credit source: iStock
ಸುಷ್ಮಾ ಚಕ್ರೆ
|

Updated on: May 02, 2026 | 3:33 PM

Share

ಅಲಹಾಬಾದ್, ಮೇ 2: ಅಲಹಾಬಾದ್ ಹೈಕೋರ್ಟ್‌ನ (Allahabad High Court) ಲಕ್ನೋ ಪೀಠವು ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಅದಕ್ಕೆ 10 ಲಕ್ಷ ರೂ. ದಂಡವನ್ನು ವಿಧಿಸಿದೆ. ಕಾರಣಗಳನ್ನು ನೀಡದೆ ವ್ಯಕ್ತಿಯನ್ನು 3 ತಿಂಗಳ ಕಾಲ ಜೈಲಿನಲ್ಲಿ ಇರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ನ್ಯಾಯಾಲಯವು ಸಂವಿಧಾನಬಾಹಿರ ಎಂದು ಘೋಷಿಸಿದೆ. ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಮತ್ತು ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಶ್ರೀವಾಸ್ತವ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಈ ಅಕ್ರಮ ಬಂಧನಕ್ಕೆ ಕಾರಣರಾದ ಅಧಿಕಾರಿಗಳಿಂದ ರಾಜ್ಯ ಸರ್ಕಾರವು ಈ ದಂಡದ ಮೊತ್ತವನ್ನು ವಸೂಲಿ ಮಾಡಬಹುದು ಎಂದು ನ್ಯಾಯಾಲಯವು ನಿರ್ದೇಶಿಸಿದೆ. ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳ ಸ್ಥಿತಿಯೇ ಹೀಗಿದ್ದರೆ, ರಾಜ್ಯದ ಇತರ ಅಧಿಕಾರಿಗಳು ಯಾವ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರಬಹುದು ಎಂದು ನ್ಯಾಯಾಲಯವು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ

ಸುಪ್ರೀಂ ಕೋರ್ಟ್‌ನ ವಿವಿಧ ತೀರ್ಪುಗಳನ್ನು ಉಲ್ಲೇಖಿಸಿದ ಅಲಹಾಬಾದ್ ಹೈಕೋರ್ಟ್, ಯಾವುದೇ ವ್ಯಕ್ತಿಯನ್ನು ಬಂಧಿಸಲು ಲಿಖಿತ ಆಧಾರಗಳನ್ನು ಒದಗಿಸುವುದು ಸಾಂವಿಧಾನಿಕ ಬಾಧ್ಯತೆಯಾಗಿದೆ ಎಂದು ಹೇಳಿದೆ. ಇದನ್ನು ನಿರ್ಲಕ್ಷಿಸುವುದು ನಾಗರಿಕರ ಮೂಲಭೂತ ಹಕ್ಕುಗಳ ನೇರ ಉಲ್ಲಂಘನೆಯಾಗುತ್ತದೆ ಎಂದಿದೆ.

ಮನೋಜ್ ಕುಮಾರ್ ಎಂಬುವವರನ್ನು ಜನವರಿ 27ರಂದು ಉನ್ನಾವೊ ಜಿಲ್ಲೆಯ ಅಸಿವಾನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲಾಯಿತು. ಬಂಧನದ ನಂತರ ಅವರನ್ನು 3 ತಿಂಗಳು ಜೈಲಿನಲ್ಲಿ ಇರಿಸಲಾಗಿತ್ತು. ಆದರೆ ಅವರ ವಿರುದ್ಧ ಪೊಲೀಸರು ಯಾವುದೇ ಆರೋಪಗಳನ್ನು ದಾಖಲಿಸಲು ವಿಫಲರಾಗಿದ್ದಾರೆ. ಪೊಲೀಸರಿಗೆ ಆ ವ್ಯಕ್ತಿಯ ಬಂಧನಕ್ಕೆ ಯಾವುದೇ ಸ್ಪಷ್ಟ ಕಾರಣಗಳನ್ನು ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ, ಮನೋಜ್ ಕುಮಾರ್ ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಯಾಗಿಲ್ಲದಿದ್ದರೆ ಅವರನ್ನು ತಕ್ಷಣ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ. ಪೊಲೀಸರು ಬಂಧನಕ್ಕೆ ಕಾರಣಗಳನ್ನು ನೀಡಲು ವಿಫಲವಾದರೆ ಆ ಬಂಧನ ಸಂವಿಧಾನಬಾಹಿರವಾಗಿರುತ್ತದೆ ಎಂದು ನ್ಯಾಯಪೀಠ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ